ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಬಿಎಸ್‌ಸಿ 10ನೇ ತರಗತಿ ಫಲಿತಾಂಶ ಪ್ರಕಟ

|
Google Oneindia Kannada News

ನವದೆಹಲಿ, ಜುಲೈ 14: ಮಂಗಳವಾರ ಸಿಬಿಎಸ್‌ಸಿ ಪಿಯುಸಿ ಫಲಿತಾಂಶ ಬಿಡುಗಡೆ ಬೆನ್ನಲ್ಲೇ ಸಿಬಿಎಸ್‌ಸಿ 10 ನೇ ತರಗತಿ ವಿದ್ಯಾರ್ಥಿಗಳಿಗೂ ಇಂದು ಸಪ್ರೈಸ್ ಸಿಗಲಿದೆ. ಜುಲೈ 15ರಂದು ಬುಧವಾರ ಸಿಬಿಎಸ್‌ಸಿ 10ನೇ ತರಗತಿ ಫಲಿತಾಂಶವೂ ಬಿಡುಗಡೆಯಾಗಿದೆ. 10 ಮತ್ತು 12 ನೇ ತರಗತಿ ಫಲಿತಾಂಶಗಳನ್ನು ಜುಲೈ 15 ರೊಳಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಮಂಡಳಿ ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ಆದಾಗ್ಯೂ, ಮೆಟ್ರಿಕ್ ಪರೀಕ್ಷೆಗೆ 18 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಅನೇಕ ವರದಿಗಳು ಹೇಳುತ್ತಿದ್ದು, ಫಲಿತಾಂಶಗಳು ಪ್ರಕಟವಾದ ನಂತರ ಅಧಿಕೃತ ವೆಬ್‌ಸೈಟ್‌ಗಳು ಭಾರಿ ದಟ್ಟಣೆಯಿಂದಾಗಿ ಕುಸಿತಗೊಳ್ಳಬಹುದು. ವಿದ್ಯಾರ್ಥಿಗಳು ಡಿಜಿಲಾಕರ್, ಮೈಕ್ರೋಸಾಫ್ಟ್ ಎಸ್‌ಎಂಎಸ್ ಆರ್ಗನೈಸರ್ ಮತ್ತು ಉಮಾಂಗ್‌ನಂತಹ ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಅಥವಾ ಸಂವಾದಾತ್ಮಕ ಧ್ವನಿ ಪ್ರತಿಕ್ರಿಯೆ ವ್ಯವಸ್ಥೆ (IVRS) ಮೂಲಕ ಸಿಬಿಎಸ್‌ಇ 10ನೇ ಫಲಿತಾಂಶವನ್ನು ಪರಿಶೀಲಿಸಬಹುದು.

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ

ಈ ಕುರಿತು ಅಧಿಕೃತವಾಗಿ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ 'ನಿಶಾಂಕ್' ಟ್ವೀಟ್ ಮಾಡಿದ್ದು, ನಾಳೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. ''ನನ್ನ ಆತ್ಮೀಯ ಮಕ್ಕಳೇ, ಪೋಷಕರೇ ಮತ್ತು ಶಿಕ್ಷಕರೇ 10 ನೇ ತರಗತಿ ಸಿಬಿಎಸ್‌ಇ ಮಂಡಳಿ ಪರೀಕ್ಷೆಯ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುವುದು. ಎಲ್ಲಾ ವಿದ್ಯಾರ್ಥಿಗಳಿಗೆ ಒಳ್ಳೆಯದಾಗಲಿ'' ಎಂದು ಕೇಂದ್ರ ಶಿಕ್ಷಣ ಸಚಿವ ಡಾ.ರಮೇಶ್ ಪೋಖ್ರಿಯಾಲ್ ನಿಶಾಂಕ್ ಟ್ವೀಟ್ ಮಾಡಿದ್ದಾರೆ.

ಡಿಜಿಲಾಕರ್ ಬಳಸಿ ಫಲಿತಾಂಶವನ್ನು ಪರಿಶೀಲಿಸಿ

ಡಿಜಿಲಾಕರ್ ಬಳಸಿ ಫಲಿತಾಂಶವನ್ನು ಪರಿಶೀಲಿಸಿ

ಡಿಜಿಲಾಕರ್ ಮೊಬೈಲ್ ಅಪ್ಲಿಕೇಶನ್‌ನೊಂದಿಗೆ ಸಂಯೋಜಿಸಲ್ಪಟ್ಟಿರುವ ‘ಪರಿಣಂ ಮಂಜುಷಾ' ಮೂಲಕ ಸಿಬಿಎಸ್‌ಇ ಮಾರ್ಕ್‌ಶೀಟ್‌ಗಳು, ವಲಸೆ ಪ್ರಮಾಣಪತ್ರ ಮತ್ತು ಪಾಸ್ ಪ್ರಮಾಣಪತ್ರದಂತಹ ಡಿಜಿಟಲ್ ಶೈಕ್ಷಣಿಕ ದಾಖಲೆಗಳನ್ನು ಒದಗಿಸುತ್ತದೆ. ಡಿಜಿಲಾಕರ್ ಖಾತೆ ರುಜುವಾತುಗಳನ್ನು ಸಿಬಿಎಸ್‌ಇಯಲ್ಲಿ ನೋಂದಾಯಿಸಲಾದ ಅವರ ಮೊಬೈಲ್ ಸಂಖ್ಯೆಯಲ್ಲಿ ಎಸ್‌ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಕಳುಹಿಸಲಾಗುತ್ತದೆ.

UMANG ಅಪ್ಲಿಕೇಶನ್ ಬಳಸಿ ಫಲಿತಾಂಶವನ್ನು ಪರಿಶೀಲಿಸಿ

UMANG ಅಪ್ಲಿಕೇಶನ್ ಬಳಸಿ ಫಲಿತಾಂಶವನ್ನು ಪರಿಶೀಲಿಸಿ

ಮೊಬೈಲ್ ಅಪ್ಲಿಕೇಶನ್ ಆಂಡ್ರಾಯ್ಡ್ ಮತ್ತು ಐಒಎಸ್ ಎರಡರಲ್ಲೂ ಲಭ್ಯವಿದೆ. ಮಾರ್ಕ್‌ಶೀಟ್ ಟ್ಯಾಬ್ ಕ್ಲಿಕ್ ಮಾಡಿ ನಂತರ ವಿದ್ಯಾರ್ಥಿಯ ರೋಲ್ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ವಿದ್ಯಾರ್ಥಿಗಳು ತಮ್ಮ ಸ್ಕೋರ್‌ಗಳನ್ನು ಪ್ರವೇಶಿಸಬಹುದು.

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಫಸ್ಟ್, ಉಳಿದ ಜಿಲ್ಲೆಗಳ ಕಥೆಯೇನು?ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಫಸ್ಟ್, ಉಳಿದ ಜಿಲ್ಲೆಗಳ ಕಥೆಯೇನು?

 ಮೈಕ್ರೋಸಾಫ್ಟ್ ಎಸ್‌ಎಂಎಸ್ ಆರ್ಗನೈಸರ್ ಅಪ್ಲಿಕೇಶನ್ ಬಳಸಿ ಫಲಿತಾಂಶವನ್ನು ಪರಿಶೀಲಿಸಿ

ಮೈಕ್ರೋಸಾಫ್ಟ್ ಎಸ್‌ಎಂಎಸ್ ಆರ್ಗನೈಸರ್ ಅಪ್ಲಿಕೇಶನ್ ಬಳಸಿ ಫಲಿತಾಂಶವನ್ನು ಪರಿಶೀಲಿಸಿ

ವಿದ್ಯಾರ್ಥಿಗಳು ಮೈಕ್ರೋಸಾಫ್ಟ್ ಎಸ್‌ಎಂಎಸ್ ಆರ್ಗನೈಸರ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳಬೇಕು ಮತ್ತು ತಮ್ಮನ್ನು ನೋಂದಾಯಿಸಿಕೊಳ್ಳಬೇಕು. ಈ ಅಪ್ಲಿಕೇಶನ್‌ನೊಂದಿಗೆ, ಅಭ್ಯರ್ಥಿಗಳು ತಮ್ಮ ಸ್ಕೋರ್‌ಗಳನ್ನು SMS ಮೂಲಕ ಪಡೆಯಬಹುದು.

IVRS ಮೂಲಕ ಫಲಿತಾಂಶವನ್ನು ಪರಿಶೀಲಿಸಿ

IVRS ಮೂಲಕ ಫಲಿತಾಂಶವನ್ನು ಪರಿಶೀಲಿಸಿ

ಸಿಬಿಎಸ್ಇ ಸಂವಾದಾತ್ಮಕ ಧ್ವನಿ ಪ್ರತಿಕ್ರಿಯೆ ವ್ಯವಸ್ಥೆ (IVRS) ಮೂಲಕವೂ ಫಲಿತಾಂಶಗಳನ್ನು ನೀಡುತ್ತದೆ. ಫಲಿತಾಂಶಗಳನ್ನು ಪರಿಶೀಲಿಸುವ ಸಂಖ್ಯೆಗಳನ್ನು ಫಲಿತಾಂಶದ ದಿನದಂದು ಒದಗಿಸಲಾಗುತ್ತದೆ. ನವೀಕರಣಗಳಿಗಾಗಿ ಅಧಿಕೃತ ವೆಬ್‌ಸೈಟ್ cbse.nic.in ಅನ್ನು ಪರೀಕ್ಷಿಸಲು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.

ಸಿಬಿಎಸ್‌ಇ ವೆಬ್‌ಸೈಟ್ ಮೂಲಕ ಫಲಿತಾಂಶವನ್ನು ಹೇಗೆ ಪರಿಶೀಲಿಸುವುದು?

ಸಿಬಿಎಸ್‌ಇ ವೆಬ್‌ಸೈಟ್ ಮೂಲಕ ಫಲಿತಾಂಶವನ್ನು ಹೇಗೆ ಪರಿಶೀಲಿಸುವುದು?

ಹಂತ 1: ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್- cbseresults.nic.in ಅಥವಾ cbse.nic.in

ಹಂತ 2: ಫಲಿತಾಂಶ 2020 ಕ್ಕೆ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹಂತ 3: ನಿಮ್ಮ ರೋಲ್ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ.

ಹಂತ 4: ಫಲಿತಾಂಶವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

ಹಂತ 5: ಫಲಿತಾಂಶವನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ.

English summary
The Central Board of Secondary Education (CBSE) will declare Class 10 results on wednesday(july 15). complete details here
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X