ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಬಿಎಸ್‌ಇ ಪ್ರಶ್ನೆ ಪತ್ರಿಕೆ ಸೋರಿಕೆ: ವಿದ್ಯಾರ್ಥಿ, ಪೋಷಕರ ತೀವ್ರ ಪ್ರತಿಭಟನೆ

By Manjunatha
|
Google Oneindia Kannada News

ದೆಹಲಿ, ಮಾರ್ಚ್ 31: ಸಿಬಿಎಸ್‌ಇ ಯ 10 ಮತ್ತು 12ನೇ ತರಗತಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಆಕ್ರೋಶಗೊಂಡಿರುವ ವಿದ್ಯಾರ್ಥಿಗಳು ಇಂದು ದೆಹಲಿಯ ಸಿಬಿಎಸ್‌ಇ ಕಚೇರಿ ಎದುರು ಪ್ರತಿಭಟನೆ ಮಾಡಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ತಮಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿದ ವಿದ್ಯಾರ್ಥಿಗಳು ಮತ್ತು ಪೋಷಕರು ಸುಮಾರು 2000 ಕ್ಕೂ ಹೆಚ್ಚು ಮಂದಿ ಸೇರಿ ಸಿಬಿಎಸ್‌ಇ ಮತ್ತು ಕೇಂದ್ರ ಶಿಕ್ಷಣಾಲಯದ ವಿರುದ್ಧ ಘೋಷಣೆಗಳನ್ನು ಕೂಗಿದರು.

ವಿದ್ಯಾರ್ಥಿಗಳು ಮತ್ತು ಪೋಷಕರ ಪ್ರತಿಭಟನೆಯಿಂದಾಗಿ ದೆಹಲಿಯ ಹಲವೆಡೆ ಸಂಚಾರ ದಟ್ಟಣೆ ಉಂಟಾಗಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಹರಸಾಹಸ ಪಡುತ್ತಿದ್ದಾರೆ.

CBSE question paper leak: students protest in Delhi

ನಿನ್ನೆಯಷ್ಟೆ ಸಿಬಿಎಸ್‌ಇಯ 12ನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೆ ಏಪ್ರಿಲ್ 25ರಂದು ಮರು ಪರೀಕ್ಷೆ ನಡೆಸುವುದಾಗಿ ಶಿಕ್ಷಣ ಇಲಾಖೆ ಕಾರ್ಯದರ್ಶಿ ಘೋಷಿಸಿದ್ದರು. ಸಿಬಿಎಸ್‌ಇ 10ನೇ ತರಗತಿ ವಿದ್ಯಾರ್ಥಿಗಳ ಮರು ಪರೀಕ್ಷೆಯ ಬಗ್ಗೆ ಇನ್ನು 15 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವ ಬಗ್ಗೆಯೂ ಅವರು ಮಾಹಿತಿ ನೀಡಿದ್ದರು.

10ನೇ ತರಗತಿಯ ಗಣಿತ ಪ್ರಶ್ನೆ ಪತ್ರಿಕೆಯು ಕೇವಲ ದೆಹಲಿ ಮತ್ತು ಹರಿಯಾಣ ನಗರಗಳಲ್ಲಿ ಮಾತ್ರವೇ ಸೋರಿಕೆ ಆಗಿರುವ ಕಾರಣ ಅಲ್ಲಿ ಮಾತ್ರ ಮರು ಪರೀಕ್ಷೆ ಮಾಡುವ ಬಗ್ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, ಅಕಸ್ಮಾತ್ ದೇಶದಾದ್ಯಂತ ಮರು ಪರೀಕ್ಷೆ ನಡೆದಲ್ಲಿ ಜುಲೈ ತಿಂಗಳಲ್ಲಿ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿ ಹೇಳಿದ್ದಾರೆ.

ಸಿಬಿಎಸ್‌ಇ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ತೊಂದರೆಗೊಳಗಾಗಿರುವ ವಿದ್ಯಾರ್ಥಿಗಳು ಮತ್ತು ಪೋಷಕರು ಹಲವು ದಿನಗಳಿಂದ ದೇಶದ ವಿವಿಧ ನಗರದಲ್ಲಿ ಪ್ರತಿಭಟನೆ ಮಾಡುತ್ತಲೇ ಇದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದು, ತನಿಖೆ ಇನ್ನೂ ಪ್ರಗತಿಯಲ್ಲಿದೆ.

English summary
Opposing to CBSE 10 and 12th exam question paper leak students and parents did protest in front of CBSE office in New Delhi today. yesterday Education department secretory announce that CBSE 12th economics paper re exam will be held on April 25th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X