ಸಿಡಿಎಸ್ ನೇಮಕಾತಿ: ರಕ್ಷಣಾ ಪಡೆಗಳ ನಿಯಮ ತಿದ್ದುಪಡಿಗೆ ಅಧಿಸೂಚನೆ
ನವದೆಹಲಿ, ಜೂ 8: ಕಳೆದ ವರ್ಷ ಡಿಸೆಂಬರ್ನಲ್ಲಿ ಹೆಲಿಕಾಪ್ಟರ್ ಅಪಘಾತ ಸಂಭವಿಸಿ ಜನರಲ್ ಬಿಪಿನ್ ರಾವತ್ ಅವರ ಮರಣದ ನಂತರ ಖಾಲಿ ಉಳಿದಿರುವ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರ ನೇಮಕಾತಿಗೆ ಸಂಬಂಧಿಸಿದ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳ ನಿಯಮಗಳಿಗೆ ತಿದ್ದುಪಡಿ ಮಾಡಲು ರಕ್ಷಣಾ ಸಚಿವಾಲಯವು ಗೆಜೆಟ್ ಅಧಿಸೂಚನೆಗಳನ್ನು ಹೊರಡಿಸಿದೆ.
ಸದ್ಯ ಅಧಿಸೂಚನೆಯ ಪ್ರಕಾರ ಏರ್ ಮಾರ್ಷಲ್ ಅಥವಾ ಏರ್ ಚೀಫ್ ಮಾರ್ಷಲ್ ಆಗಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿ ಅಥವಾ ಅದೇ ಶ್ರೇಣಿಯಲ್ಲಿ ನಿವೃತ್ತಿ ಹೊಂದಿದ ಆದರೆ ನೇಮಕಾತಿ ದಿನಾಂಕದಂದು 62 ವರ್ಷ ವಯಸ್ಸನ್ನು ಮೀರದ ಅಧಿಕಾರಿಯನ್ನು ಸರ್ಕಾರ ಪರಿಗಣಿಸಬಹುದು.
ಅಗತ್ಯಬಿದ್ದರೆ ಸಾರ್ವಜನಿಕ ಹಿತಾಸಕ್ತಿಯಲ್ಲಿಪರಿಗಣನೆಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅದು ಹೇಳಿದೆ. ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರ ಸೇವೆಯನ್ನು ಸರ್ಕಾರವು ಗರಿಷ್ಠ 65 ವರ್ಷಗಳಿಗೆ ಒಳಪಟ್ಟು ಅಗತ್ಯವೆಂದು ಪರಿಗಣಿಸಬಹುದಾದ ಅವಧಿಗೆ ವಿಸ್ತರಿಸಬಹುದು ಎಂದು ಅದು ಹೇಳಿದೆ.
Ministry of Defence issues gazette notifications to amend regulations of 3 defence forces related to appointment of Chief of Defence Staff. For appointing CDS the govt may consider officers who are serving as Lt Gen equivalent or General equivalent ...(1/2) pic.twitter.com/3leGJB4SD4
— ANI (@ANI) June 7, 2022
ಇದೇ ರೀತಿಯಾಗಿ ಸೇನೆ ಮತ್ತು ನೌಕಾಪಡೆಗೆ ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ಬಿಪಿನ್ ರಾವತ್ ಭಾರತದ ಮೊದಲ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದರು. ಡಿಸೆಂಬರ್ 8 ರಂದು ಕೂನೂರು ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಅವರು ಮೃತರಾಗಿದ್ದರು. ಇದು ಸಶಸ್ತ್ರ ಪಡೆಗಳಲ್ಲಿ ಮತ್ತೆ ಮುಖ್ಯಸ್ಥರ ಆಯ್ಕೆ ಬಗ್ಗೆ ಹುಡುಕಾಟದ ಪ್ರಕ್ರಿಯೆಯನ್ನು ಆರಂಭಿಸಲಾಗಿತ್ತು.

ಸಿಡಿಎಸ್ ಅವರ ಸೇವೆಯನ್ನು ಸರ್ಕಾರವು ಗರಿಷ್ಠ 65 ವರ್ಷಗಳಿಗೆ ಒಳಪಟ್ಟು ಅಗತ್ಯವೆಂದು ಪರಿಗಣಿಸಬಹುದಾದ ಅವಧಿಗೆ ವಿಸ್ತರಿಸಬಹುದು ಎಂದು ಹೇಳಿದೆ. ಸೇನೆ ಮತ್ತು ವಾಯು ಪಡೆಗೆ ಇದೇ ಮಾದರಿ ಅಧಿಸೂಚನೆಯನ್ನು ಹೊರಡಸಲಾಗಿದೆ ಎಂದು ಹೇಳಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications