ಕೋವ್ಯಾಕ್ಸಿನ್ ಲಸಿಕೆಯ 3ನೇ ಹಂತದ ಪ್ರಯೋಗದ ಅನುಮತಿಗೆ ಶಿಫಾರಸು

ನವದೆಹಲಿ, ಅಕ್ಟೋಬರ್ 23: ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಕೋವ್ಯಾಕ್ಸಿನ್ ಕೊರೊನಾ ಲಸಿಕೆಯ ಮೂರನೇ ಹಂತದ ಪ್ರಯೋಗಕ್ಕೆ ಅನುಮತಿ ನೀಡುವಂತೆ ಸಿಡಿಎಸ್‌ಸಿಒ ತಜ್ಞರು ಶಿಫಾರಸು ಮಾಡಿದ್ದಾರೆ.

18 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ 28,500 ಮಂದಿಯನ್ನು ಪ್ರಯೋಗಕ್ಕೆ ಒಳಪಡಿಸುವುದಾಗಿಯೂ, ದೆಹಲಿ, ಮುಂಬೈ, ಪಾಟ್ನಾ,ಲಕ್ನೋ ಸೇರಿ 19 ಕಡೆಗಳಲ್ಲಿ ನಡೆಸುವುದಾಗಿಯೂ ಮನವಿಯಲ್ಲಿ ತಿಳಿಸಿದೆ.

ಇಂದು ರಾತ್ರಿ ಅಥವಾ ಶನಿವಾರ ಬೆಳಗ್ಗೆ ಡಿಜಿಸಿಐ ಅನುಮತಿ ನೀಡುವ ಸಾಧ್ಯತೆ ಇದೆ. ಲಸಿಕೆಯ ಮೊದಲ ಮತ್ತು ಎರಡನೇ ಹಂತದ ಪ್ರಯೋಗಗಳಲ್ಲಿನ ಸುರಕ್ಷತೆ ಮತ್ತು ಪ್ರತಿರೋಧ ಸಾಮರ್ಥ್ಯಕ್ಕೆ ಸಂಬಂಧಿಸಿದ ದತ್ತಾಂಶಗಳ ಪರಿಶೀಲನೆ ನಡೆಸಿ ಬಳಿಕ ಶಿಫಾರಸು ಮಾಡಲಾಗಿದೆ.

CDSCO Panel Recommends Granting Permission To Phase 3 Clinical Trials Of COVID-19 Vaccine

ಲಸಿಕೆಯ ಮೂರನೇ ಹಂತದ ಪ್ರಯೋಗಕ್ಕೆ ಅನುಮತಿ ನೀಡುವಂತೆ ಕಂಪನಿಯು ಅಕ್ಟೋಬರ್ 2ರಂದು ಡಿಸಿಜಿಐಗೆ ಮನವಿ ಮಾಡಿತ್ತು.

ಆದರೆ ಸುರಕ್ಷತೆ ಮತ್ತು ಪ್ರತಿರೋಧ ಸಾಮರ್ಥ್ಯಕ್ಕೆ ಸಂಬಂಧಿಸಿದ ಸಂಪೂರ್ಣ ದತ್ತಾಂಶವನ್ನು ಸಲ್ಲಿಸುವಂತೆ ಸೂಚಿಸಲಾಗಿತ್ತು.ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಸಹಯೋಗದೊಂದಿಗೆ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಪನಿ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ.

Recommended Video

      ನಮ್ ದೇಶ ಕೊಳಕಾಗಿದ್ಯ Trump ಹೇಳ್ತಿರೋದು ಏನು? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+