ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಣ ಕೊಡಲ್ಲ!
ನವದೆಹಲಿ, ಡಿಸೆಂಬರ್ 19: 'ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸಲು ಕೇಂದ್ರ ಸರ್ಕಾರ ಯಾವುದೇ ರೀತಿಯ ಹಣಕಾಸಿನ ಸಹಾಯ ಮಾಡುವುದಿಲ್ಲ' ಎಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಬುಧವಾರ ಖಾಸಗಿ ಸುದ್ದಿವಾಹಿನಿಯ ಸಂದರ್ಶನದಲ್ಲಿ ಮಾತನಾಡಿರುವ ಅವರು, 'ಮಂದಿರ ಕಟ್ಟಲು ಸರ್ಕಾರದ ಹಣ ವಿನಿಯೋಗಿಸುವುದಿಲ್ಲ. ಮಂದಿರ ನಿರ್ಮಾಣಕ್ಕೆ ರಚನೆಯಾಗುವ ಟ್ರಸ್ಟ್ ನಲ್ಲಿ ಬಿಜೆಪಿ ಸದಸ್ಯರೂ ಇರುವುದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ. 'ಸಮಾಜದಿಂದ ಹಣ ಸಂಗ್ರಹಿಸಿ ಮಂದಿರ ನಿರ್ಮಿಸುತ್ತಾರೆ. ನಾವೇನು ಅದರಲ್ಲಿ ತಲೆ ಹಾಕುವುದಿಲ್ಲ' ಎಂದು ಹೇಳಿದ್ದಾರೆ.

ಇತ್ತೀಚೆಗೆ ರಾಮಮಂದಿರ ವಿವಾದ ಬಗೆಹರಿಸಿ, ನಾಲ್ಕು ತಿಂಗಳೊಳಗೆ ಟ್ರಸ್ಟ್ ನಿರ್ಮಿಸಬೇಕು ಎಂದು ಆದೇಶ ನೀಡಿತ್ತು. ಟ್ರಸ್ಟ್ ರಚನೆ ಸಂಬಂಧ ಬಿರುಸಿನ ಚಟುವಟಿಕೆಗಳು ನಡೆದಿದ್ದು, ನಾಲ್ಕು ತಿಂಗಳಲ್ಲಿ ಟ್ರಸ್ಟ್ ರಚನೆಯಾಗುತ್ತೆ ಎಂಬ ವಿಶ್ವಾಸವನ್ನು ಅಮಿತ್ ಶಾ ವ್ಯಕ್ತಪಡಿಸಿದ್ದಾರೆ. ಮಂದಿರ ನಿರ್ಮಾಣಕ್ಕೆ ವಿವಿಧ ಹಿಂದೂ ಸಂಘಟನೆಗಳು ಈಗಾಗಲೇ ಸಮಾಜದಿಂದ ಹಣ ಸಂಗ್ರಹಿಸಲು ಆರಂಭಿಸಿವೆ. 100 ಕೋಟಿ ರುಪಾಯಿಯಲ್ಲಿ ಮಂದಿರ ನಿರ್ಮಿಸಲಾಗುತ್ತೆ ಎಂದು ಹೇಳಲಾಗುತ್ತಿದೆ.












Click it and Unblock the Notifications