ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ 30 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ: ಪ್ರಧಾನಿ ಮೋದಿ

|
Google Oneindia Kannada News

ನವದೆಹಲಿ, ಜನವರಿ.11: ಕೊರೊನಾವೈರಸ್ ಸೋಂಕಿಗೆ ಲಸಿಕೆ ನೀಡುವುದಕ್ಕೆ ಜನವರಿ.16ರಿಂದಲೇ ಅಭಿಯಾನ ಆರಂಭಿಸುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಚುನಾವಣೆ ರೀತಿಯಲ್ಲಿ ಕೊವಿಡ್-19 ಲಸಿಕೆ ವಿತರಣೆಗೆ ಕಾರ್ಯತಂತ್ರ ರೂಪಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಕೊರೊನಾ ಲಸಿಕೆ ವಿಚಾರ: ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಇಂದು ಪ್ರಧಾನಿ ಮೋದಿ ಸಭೆಕೊರೊನಾ ಲಸಿಕೆ ವಿಚಾರ: ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಇಂದು ಪ್ರಧಾನಿ ಮೋದಿ ಸಭೆ

ಸೋಮವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ನಡೆಸಿದ ಸಭೆ ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶದ ಪ್ರಜೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ವಿಶ್ವದಾದ್ಯಂತ ಈಗಾಗಲೇ ಎರಡೂವರೆ ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ ಪಡೆದುಕೊಂಡಿದ್ದಾರೆ.

ಭಾರತದಲ್ಲಿ ಜನವರಿ.16ರಿಂದ ಲಸಿಕೆ ವಿತರಣೆ ಆರಂಭವಾಗಲಿದ್ದು, ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ವೈದ್ಯರು ಮತ್ತು ಕೊರೊನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿರುವ 3 ಕೋಟಿ ಜನರಿಗೆ ಲಸಿಕೆ ನೀಡುವುದಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಎರಡು ದೇಶೀ ಸಂಸ್ಥೆಗಳ ಲಸಿಕೆಗೆ ಅನುಮೋದನೆ

ಎರಡು ದೇಶೀ ಸಂಸ್ಥೆಗಳ ಲಸಿಕೆಗೆ ಅನುಮೋದನೆ

ಭಾರತದಲ್ಲಿ ಎರಡು ದೇಶೀಯ ಕೊರೊನಾವೈರಸ್ ಲಸಿಕೆಗಳ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಅಭಿವೃದ್ಧಿಪಡಿಸಿರುವ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆ ಬಳಸಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಜನವರಿ.16ರಿಂದ ಲಸಿಕೆ ವಿತರಣೆ ಯೋಜನೆ ಆರಂಭಿಸಲಾಗುತ್ತದೆ ಎಂದು ಮೋದಿ ತಿಳಿಸಿದ್ದಾರೆ.

ಕೊವಿಡ್-19 ಲಸಿಕೆ ನೀಡುವಲ್ಲಿ ಆದ್ಯತೆ ಯಾರಿಗೆ?

ಕೊವಿಡ್-19 ಲಸಿಕೆ ನೀಡುವಲ್ಲಿ ಆದ್ಯತೆ ಯಾರಿಗೆ?

ದೇಶದಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಕೊರೊನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಜನರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. 3 ಕೋಟಿ ವೈದ್ಯಕೀಯ ಸಿಬ್ಬಂದಿ ಮತ್ತು ಕೊವಿಡ್-19 ವಾರಿಯರ್ಸ್ ಗೆ ಲಸಿಕೆ ನೀಡಲಾಗುತ್ತದೆ. ಎರಡನೇಯದಾಗಿ 50 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರಿಗೆ ಸೋಂಕಿನಿಂದ ಹೆಚ್ಚು ಅಪಾಯವಿದೆ. ಹೀಗಾಗಿ ಎರಡನೇ ಹಂತದಲ್ಲಿ ವೃದ್ಧರಿಗೆ ಲಸಿಕೆ ನೀಡುವುದಕ್ಕೆ ಪ್ರಾಮುಖ್ಯತೆ ನೀಡಲಾಗುತ್ತದೆ.

ಲಸಿಕೆ ವೆಚ್ಚ ಭರಿಸಲಿರುವ ಕೇಂದ್ರ ಸರ್ಕಾರ

ಲಸಿಕೆ ವೆಚ್ಚ ಭರಿಸಲಿರುವ ಕೇಂದ್ರ ಸರ್ಕಾರ

ಕೊರೊನಾವೈರಸ್ ಲಸಿಕೆಯನ್ನು ಮೊದಲ ಹಂತದಲ್ಲಿ 3 ಕೋಟಿ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಒಟ್ಟು 30 ಕೋಟಿ ಜನರಿಗೆ ನೀಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಮೊದಲ ಹಂತದ ಲಸಿಕೆ ವಿತರಣೆಯ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ವಿಶ್ವಕ್ಕೆ ಮಾದರಿಯಾಗುವಂತೆ ವ್ಯವಸ್ಥೆ ಕಲ್ಪಿಸುವುದು

ವಿಶ್ವಕ್ಕೆ ಮಾದರಿಯಾಗುವಂತೆ ವ್ಯವಸ್ಥೆ ಕಲ್ಪಿಸುವುದು

ಭಾರತದಲ್ಲಿ ಸಾರ್ವತ್ರಿಕವಾಗಿ ಕೊವಿಡ್-19 ಲಸಿಕೆ ವಿತರಣೆಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯತಂತ್ರವನ್ನು ರೂಪಿಸಲಾಗುತ್ತದೆ. ಸಾರ್ವತ್ರಿಕ ಚುನಾವಣೆ ರೀತಿಯಲ್ಲೇ ಲಸಿಕೆ ವಿತರಣೆಯನ್ನು ಮಾಡಲಾಗುತ್ತದೆ. ಎರಡು ಡೋಸ್ ಲಸಿಕೆ ನೀಡುವ ಕುರಿತು ಅಭಿಯಾನ ಆರಂಭಿಸಲಾಗುತ್ತದೆ. ಲಸಿಕೆ ಪಡೆದವರಿಗೆ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆಯ ವ್ಯವಸ್ಥೆಯು ಇಡೀ ವಿಶ್ವಕ್ಕೆ ಮಾದರಿಯಾಗಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

English summary
Central Govt Aim To Vaccinate 30 Crore People In The Next Few Months: PM Narendra Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X