• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ರೈತರ ಆದಾಯ ದ್ವಿಗುಣಗೊಳಿಸಲು ಪ್ರಧಾನಮಂತ್ರಿ ಕಿಸಾನ್ ಯೋಜನೆ"

|

ನವದೆಹಲಿ, ಫೆಬ್ರವರಿ.24: ಭಾರತದ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಸರ್ಕಾರವು ಯೋಜನೆಗಳನ್ನು ಜಾರಿಗೊಳಿಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಬುಧವಾರ ಪ್ರಧಾನಮಂತ್ರಿ ಕಿಸಾನ್ ಯೋಜನೆಯ 2ನೇ ವಾರ್ಷಿಕೋತ್ಸವ ಹಿನ್ನೆಲೆ ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದಾರೆ. ರೈತರು ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸುವ ಕಾರ್ಯವನ್ನು ಮೊದಲ ಬಿಜೆಪಿ ಸರ್ಕಾರವೇ ಪ್ರಾರಂಭಿಸಿದೆ.

ರೈತರಿಗೆ ಹಾನಿಕಾರಕ: ವಿವಾದಿತ 3 ಕೃಷಿ ಕಾಯ್ದೆಗಳ ಬಗ್ಗೆ ವಿವರಣಾತ್ಮಕ ಪಾಠರೈತರಿಗೆ ಹಾನಿಕಾರಕ: ವಿವಾದಿತ 3 ಕೃಷಿ ಕಾಯ್ದೆಗಳ ಬಗ್ಗೆ ವಿವರಣಾತ್ಮಕ ಪಾಠ

ಕಳೆದ ಏಳು ವರ್ಷಗಳಲ್ಲಿ ಕೃಷಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ರೀತಿಯ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ವ್ಯವಸಾಯದಲ್ಲಿ ನೀರಾವರಿ, ತಂತ್ರಜ್ಞಾನ, ಮಾರುಕಟ್ಟೆ ಅಭಿವೃದ್ಧಿ, ಬೆಳೆ ವಿಮೆ, ಮಣ್ಣಿನ ಗುಣಮಟ್ಟ ಪರಿಶೀಲನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆಯನ್ನಿರಿಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

2019ರಲ್ಲಿ ಪ್ರಧಾನಮಂತ್ರಿ ಕಿಸಾನ್ ಯೋಜನೆ:

ಶ್ರಮದಿಂದ ದುಡಿಯುವ ದೇಶದ ರೈತರ ಘನತೆ ಮತ್ತು ಸಮೃದ್ಧಿಯ ದೃಷ್ಟಿಯಿಂದ ಫೆಬ್ರವರಿ.24, 2019ರಲ್ಲಿ ಪ್ರಧಾನಮಂತ್ರಿ ಕಿಸಾನ್ ಯೋಜನೆ ಜಾರಿಗೊಳಿಸಲಾಗಿತ್ತು. ರಾಷ್ಟ್ರಕ್ಕಾಗಿ ಹಗಲು ರಾತ್ರಿ ಶ್ರಮಿಸುವ ರೈತರ ದೃಢತೆ ಮತ್ತು ಉತ್ಸಾಹವು ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಕಿಸಾನ್ ಯೋಜನೆಗೆ ಮೋದಿ ಧಿಕ್ಕಾರ, ಕೃಷಿ ಕಾಯ್ದೆಗೆ ರೈತರ ಧಿಕ್ಕಾರ:

ಪ್ರಧಾನಮಂತ್ರಿ ಕಿಸಾನ್ ಯೋಜನೆ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದು ಕಡೆಯಲ್ಲಿ ಅದೇ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ನವಂಬರ್.26 ರಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ 92 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದಾರೆ.

English summary
PM-Kisan's 2nd anniversary: Central Govt Doing Everything Possible To Double Farmers' Income, Says PM Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X