ಕೇಂದ್ರದಿಂದ ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಣೆಗೆ ಚಿಂತನೆ!
ದೆಹಲಿ, ಮೇ 30: ಕೊರೊನಾ ವೈರಸ್ ಲಾಕ್‌ಡೌನ್‌ನಿಂದ ಕುಸಿದಿರುವ ದೇಶದ ಆರ್ಥಿಕತೆಯನ್ನು ಮೇಲಕ್ಕೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಬಗ್ಗೆ ಹಣಕಾಸು ಇಲಾಖೆ ಯೋಜನೆ ರೂಪಿಸಿದ್ದು ಆದಷ್ಟೂ ಬೇಗ ಇನ್ನೊಂದು ಪ್ಯಾಕೇಜ್ ಪ್ರಕಟಿಸಲಿದ್ದಾರೆ ಎಂಬ ನಿರೀಕ್ಷೆ ಹುಟ್ಟಿಕೊಂಡಿದೆ. ಮೂಲಗಳ ಲಾಕ್‌ಡೌನ್ ತೆರವುಗೊಂಡ ಬಳಿಕ ಎರಡನೇ ಪ್ಯಾಕೇಜ್ ಘೋಷಣೆಯಾಗಬಹುದು ಎನ್ನಲಾಗಿದೆ.
ಮೇ ತಿಂಗಳ ಆರಂಭದಲ್ಲಿ ಪ್ರಧಾನಿ ಮೋದಿ 20 ಲಕ್ಷ ಕೋಟಿಯ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು. ಈ ಪ್ಯಾಕೇಜ್ ಮೂಲಕ ದೇಶದ ಆರ್ಥಿಕತೆ ಪುನಶ್ಚೇತನಗೊಳ್ಳಲಿದೆ ಎಂದು ಮೋದಿ ಹೇಳಿದ್ದಾರೆ. ಮೋದಿ ಅವರ ಸಲಹೆಯಂತೆ ವಿತ್ತೆ ಸಚಿವೆ ನಿರ್ಮಲಾ ಸೀತಾರಾಮನ್ 20.97 ಲಕ್ಷ ಕೋಟಿಯ ಯೋಜನೆಗಳನ್ನು ಘೋಷಣೆ ಮಾಡಿದ್ದರು.

ಈಗಾಗಲೇ ಘೋಷಣೆ ಮಾಡಿರುವ ಪ್ಯಾಕೇಜ್ ಕಾರ್ಯರೂಪಕ್ಕೆ ತರಲಾಗುತ್ತಿದೆ. ಇದಕ್ಕೆ ಶಕ್ತಿ ತುಂಬಿಸುವ ಉದ್ದೇಶದಿಂದ ಇನ್ನೊಂದು ಪ್ಯಾಕೇಜ್ ಸಿದ್ದಪಡಿಸಲಾಗುತ್ತಿದೆ ಎನ್ನಲಾಗಿದೆ.
ಮಾರ್ಚ್ 1 ರಿಂದ ಮೇ 15 ರವರೆಗೆ ಸಾರ್ವಜನಿಕ ವಲಯದ ಬ್ಯಾಂಕುಗಳು ಸುಮಾರು 5.5 ಮಿಲಿಯನ್ ಖಾತೆಗಳಿಗೆ 6.45 ಲಕ್ಷ ಕೋಟಿ ರೂ.ಗಳ ಸಾಲವನ್ನು ಮಂಜೂರು ಮಾಡಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿತ್ತು.












Click it and Unblock the Notifications