ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಳಿಗಾಲ ಅಧಿವೇಶನದ ಮೊದಲ ದಿನವೇ ಕೃಷಿ ಕಾಯ್ದೆ ರದ್ದು ಮಸೂದೆ ಮಂಡನೆ

|
Google Oneindia Kannada News

ನವದೆಹಲಿ, ನವೆಂಬರ್ 27: ಸಂಸತ್ ಚಳಿಗಾಲ ಅಧಿವೇಶನದ ಮೊದಲ ದಿನವಾದ(ನವೆಂಬರ್ 29) ಸೋಮವಾರ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಮಸೂದೆ ಮಂಡಿಸುವುದಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದೆ.

ಚಳಿಗಾಲದ ಅಧಿವೇಶನದ ಆರಂಭದ ದಿನದಂದು ಲೋಕಸಭೆಗೆ ರದ್ದತಿ ಕಾಯ್ದೆ ಬರಲಿದೆ ಎಂದು ಅಧಿಕೃತ ಬುಲೆಟಿನ್ ತಿಳಿಸಿದೆ. ಮೊದಲ ದಿನದ ಚಳಿಗಾಲ ಅಧಿವೇಶನ ಆರಂಭಕ್ಕೂ ಮುನ್ನ ಮಹತ್ವದ ಸಭೆ ನಡೆಸಲು ಕಾಂಗ್ರೆಸ್ ಯೋಜನೆ ಹಾಕಿಕೊಂಡಿದೆ.

Breaking News: ಕೃಷಿ ಕಾಯ್ದೆ ರದ್ದುಗೊಳಿಸುವ ಮಸೂದೆಗೆ ಸಂಪುಟ ಅನುಮೋದನೆ Breaking News: ಕೃಷಿ ಕಾಯ್ದೆ ರದ್ದುಗೊಳಿಸುವ ಮಸೂದೆಗೆ ಸಂಪುಟ ಅನುಮೋದನೆ

ಕೃಷಿ ಕಾಯ್ದೆ ರದ್ದುಗೊಳಿಸುವ ವಿಧೇಯಕ ಅಂಗೀಕಾರವಾಗುವ ಮೊದಲು ಚರ್ಚೆ ನಡೆಸಬೇಕು ಎಂದು ಪ್ರತಿಪಕ್ಷಗಳು ಹಠ ಹಿಡಿದಿವೆ. ವಿರೋಧಪಕ್ಷಗಳು ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸುವುದಕ್ಕೆ ನೋಡುತ್ತಿವೆ. ಇದರ ನಡುವೆ ಸೋಮವಾರ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಕಡ್ಡಾಯವಾಗಿ ಹಾಜರಾಗುವಂತೆ ಪಕ್ಷದ ಎಲ್ಲ ಸಂಸದರಿಗೆ ವಿಪ್ ಜಾರಿಗೊಳಿಸಿದೆ.

ವಿರೋಧ ಪಕ್ಷದ ಸಂಸದರಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

ವಿರೋಧ ಪಕ್ಷದ ಸಂಸದರಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

"ಮುಂಗಾರು ಅಧಿವೇಶನದಲ್ಲಿ ಪ್ರಾಸಂಗಿಕ ವಿಷಯಗಳನ್ನು ಪ್ರಸ್ತಾಪಿಸುವುದರ ಬಗ್ಗೆ ವಿರೋಧಪಕ್ಷಗಳು ಏಕತೆ ಮತ್ತು ಒಗ್ಗಟ್ಟು ಪ್ರದರ್ಶಿಸುವುದಕ್ಕೆ ಎಲ್ಲ ನಾಯಕರ ಸಹಕಾರ ಅಗತ್ಯವಾಗಿದೆ. ನಿಮ್ಮ ಬೆಂಬಲ ಮತ್ತು ಸಹಕಾರಕ್ಕೆ ನಾನು ಪ್ರಾಮಾಣಿಕವಾಗಿ ಧನ್ಯವಾದ ತಿಳಿಸುತ್ತೇನೆ," ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. "ಜನರ ಕಾಳಜಿಯ ನಿರ್ಣಾಯಕ ವಿಷಯಗಳನ್ನು ಎತ್ತುವಲ್ಲಿ ಮತ್ತೊಮ್ಮೆ ಒಗ್ಗಟ್ಟಿನಿಂದ ಕೆಲಸ ಮಾಡಲು ಸೋಮವಾರ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಎಲ್ಲಾ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ಕರೆಯುತ್ತಿದ್ದೇನೆ" ಎಂದು ಖರ್ಗೆ ಪತ್ರದ ಮೂಲಕ ತಿಳಿಸಿದ್ದಾರೆ.

ಸೋಮವಾರದಿಂದ ಚಳಿಗಾಲ ಅಧಿವೇಶನ ಶುರು

ಸೋಮವಾರದಿಂದ ಚಳಿಗಾಲ ಅಧಿವೇಶನ ಶುರು

ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 29 ರಿಂದ ಆರಂಭವಾಗಲಿದ್ದು, ಡಿಸೆಂಬರ್ 23ರಂದು ಕೊನೆಗೊಳ್ಳಲಿದೆ. ಹಿಂದಿನ ಅಧಿವೇಶನದಂತೆ ರಾಜ್ಯಸಭೆ ಮತ್ತು ಲೋಕಸಭೆ ಎರಡೂ ಸದನಗಳು ಕೋವಿಡ್ -19 ಮಾರ್ಗಸೂಚಿಗಳಿಗೆ ಅನುಗುಣವಾಗಿ ಏಕಕಾಲದಲ್ಲಿ ನಡೆಯಲಿದೆ. ಉಭಯ ಸದನಗಳ ಸದಸ್ಯರು ಸಾಮಾಜಿಕ ಅಂತರದ ಮಾನದಂಡಗಳನ್ನು ಅನುಸರಿಸುವ ನಿರೀಕ್ಷೆಯಿದೆ. ಪ್ರತಿ ಸದನದಲ್ಲಿ ಸುಮಾರು 20 ಸಭೆಗಳು ನಡೆಯಲಿವೆ. ಈ ವರ್ಷದ ಸಾಮಾನ್ಯ ಬಜೆಟ್‌ನಲ್ಲಿ ಘೋಷಿಸಲಾದ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಅನುಕೂಲವಾಗುವಂತೆ ಸರ್ಕಾರ ಮಸೂದೆಗಳನ್ನು ಪರಿಚಯಿಸುವ ಸಾಧ್ಯತೆಯಿದೆ.

ಈ ಬಾರಿ ಅಧಿವೇಶನದ ಪ್ರಮುಖ ಅಂಶಗಳೇನು?

ಈ ಬಾರಿ ಅಧಿವೇಶನದ ಪ್ರಮುಖ ಅಂಶಗಳೇನು?

ಕೃಷಿ ಕಾಯ್ದೆಗಳ ರದ್ದು ಮಸೂದೆ, ಇಂಧನ ಬೆಲೆ ಏರಿಕೆ, ಹಣದುಬ್ಬರ, ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ, ಲಖಿಂಪುರ ಖೇರಿ ಘಟನೆಯ ವಿಷಯದ ಬಗ್ಗೆ ಪ್ರಶ್ನಿಸುವುದಕ್ಕೆ ಪ್ರತಿಪಕ್ಷಗಳು ಅಣಿಯಾಗಿವೆ. ಆ ಮೂಲಕ ಅಧಿವೇಶನದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ. ಇದರ ಮಧ್ಯೆ ವಿವಾದಿತ ಮೂರು ಕೃಷಿ ಕಾನೂನುಗಳ ರದ್ದುಗೊಳಿಸುವುದಾಗಿ ಘೋಷಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ, ಈ ಸಂಬಂಧ ಮಸೂದೆಗೆ ಚಳಿಗಾಲ ಅಧಿವೇಶನದಲ್ಲೇ ಅಂಗೀಕಾರ ಪಡೆಯುವುದಾಗಿ ಹೇಳಿದೆ. ಇನ್ನೊಂದು ದಿಕ್ಕಿನಲ್ಲಿ ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ, ಖಾದ್ಯ ತೈಲಗಳ ಬೆಲೆ ಏರಿಕೆ, ಕಾಶ್ಮೀರದಲ್ಲಿ ಜನ ಸಾಮಾನ್ಯರ ಮೇಲೆ ಉಗ್ರರ ದಾಳಿ ಸೇರಿದಂತೆ ಇತ್ತೀಚಿನ ಹಲವು ವಿಷಯಗಳ ಮೇಲೆ ಸಂಸತ್ ಅಧಿವೇಶನದಲ್ಲಿ ಚರ್ಚೆ ನಡೆಯುವ ಸಾಧ್ಯತೆಗಳಿವೆ.

Recommended Video

RCBಗೆ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಎನ್ನುವುದೇ ತಲೆನೋವು | Oneindia Kannada

English summary
Central Govt to table bill to repeal farm laws on Day 1 of Winter Session. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X