ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರೋಗ್ಯ ಸಚಿವಾಲಯದಿಂದ ಕಚೇರಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ

|
Google Oneindia Kannada News

ನವದೆಹಲಿ, ಫೆಬ್ರುವರಿ 15: ಕಚೇರಿಗಳಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಕಚೇರಿಯಲ್ಲಿ ಒಂದು ಅಥವಾ ಎರಡು ಕೊರೊನಾ ಪ್ರಕರಣ ವರದಿಯಾದರೆ, 48 ಗಂಟೆಗಳ ಮುಂಚೆ ಕೊರೊನಾ ಸೋಂಕಿತ ವ್ಯಕ್ತಿ ಕೂರುತ್ತಿದ್ದ ಹಾಗೂ ಆ ವ್ಯಕ್ತಿ ಓಡಾಡಿದ್ದ ಜಾಗವನ್ನು ಮಾತ್ರ ಸೋಂಕು ನಿವಾರಕ ಸಿಂಪಡಣೆ ಮಾಡಬೇಕು ಎಂದು ತಿಳಿಸಿದೆ. ಕೊರೊನಾ ಸೋಂಕು ನಿವಾರಕ ಸಿಂಪಡಣೆ ಪ್ರಕ್ರಿಯೆ ಮುಗಿದ ನಂತರ ಕೆಲಸ ಆರಂಭಿಸಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಚಿತ್ರಮಂದಿರಗಳಿಗೆ ರಾಜ್ಯ ಸರ್ಕಾರದಿಂದ ಹೊಸ ಗೈಡ್‌ಲೈನ್ಸ್ಚಿತ್ರಮಂದಿರಗಳಿಗೆ ರಾಜ್ಯ ಸರ್ಕಾರದಿಂದ ಹೊಸ ಗೈಡ್‌ಲೈನ್ಸ್

ಕೆಲಸ ಮಾಡುವ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಂಡುಬಂದರೆ, ಇಡೀ ಬ್ಲಾಕ್ ಅಥವಾ ಕಟ್ಟಡಕ್ಕೆ ಸೋಂಕು ನಿವಾರಕ ಸಿಂಪಡಿಸಬೇಕು. ಕಂಟೈನ್ಮೆಂಟ್ ಝೋನ್ ಗಳಲ್ಲಿ ವಾಸಿಸುತ್ತಿರುವ ನೌಕರರು ತಮ್ಮ ಕಂಪನಿಗೆ ಮಾಹಿತಿ ನೀಡಬೇಕು ಹಾಗೂ ಕಂಟೈನ್ ಮೆಂಟ್ ಝೋನ್ ತೆರವುಗೊಳ್ಳುವವರೆಗೂ ಕೆಲಸಕ್ಕೆ ಹಾಜರಾಗಬಾರದು ಎಂದು ಉಲ್ಲೇಖಿಸಲಾಗಿದೆ.

Central Issues New Guidelines To Controll Covid In Offices

ಕಂಟೈನ್ಮೆಂಟ್ ಝೋನ್ ಗಳಲ್ಲಿನ ಕಚೇರಿಗಳು ತೆರೆಯಬಾರದು. ಕೊರೊನಾ ಸೋಂಕಿನ ಲಕ್ಷಣಗಳಿಲ್ಲದ ನೌಕರರಿಗೆ ಮಾತ್ರ ಪ್ರವೇಶ ಕಲ್ಪಿಸಬೇಕು. ಆರು ಅಡಿ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ಕಚೇರಿಯಲ್ಲಿ ಎಲ್ಲಾ ಸಮಯದಲ್ಲಿಯೂ ಮಾಸ್ಕ್‌ ಧರಿಸಬೇಕು. ಮಾಸ್ಕ್‌, ಸ್ಯಾನಿಟೈಸರ್ ಬಳಕೆ, ಥರ್ಮಲ್ ಸ್ಕ್ರಿನಿಂಗ್ ಮುಂದುವರೆಸಬೇಕು ಎಂದು ತಿಳಿಸಲಾಗಿದೆ

ಮೀಟಿಂಗ್ ಗಳನ್ನು ಆದಷ್ಟು ವಿಡಿಯೋ ಕಾನ್ಫರೆನ್ಸ್‌ ಮೂಲಕವೇ ನಡೆಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಒಂದೆಡೆ ಜನ ಸೇರಬಾರದು ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

English summary
Union health ministry has issued new guidelines to controll spread of COVID-19 in offices'
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X