ಇಸ್ರೇಲ್ ರಾಜತಾಂತ್ರಿಕರ ಭದ್ರತೆ ಬಗ್ಗೆ ಜೈಶಂಕರ್ ಭರವಸೆ

ನವದೆಹಲಿ, ಜನವರಿ.29: ನವದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಶುಕ್ರವಾರ ಸಂಭವಿಸಿದ ಸ್ಫೋಟ ಪ್ರಕರಣವನ್ನು ಭಾರತ ಗಂಭೀರವಾಗಿ ತೆಗೆದುಕೊಳ್ಳಲಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದ್ದಾರೆ.

ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟದ ಬಗ್ಗೆ ಇಸ್ರೇಲ್ ವಿದೇಶಾಂಗ ಸಚಿವ ಗಬಿ ಅಶ್ಕೆನಾಜಿ ಜೊತೆ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ದೂರವಾಣಿ ಮೂಲಕ ಚರ್ಚೆ ನಡೆಸಿದರು. ನಂತರ ಪ್ರತಿಕ್ರಿಯೆ ನೀಡಿರುವ ಸಚಿವ ಜೈಶಂಕರ್ ಅವರು, ಇಸ್ರೇಲ್ ರಾಯಭಾರಿ ಮತ್ತು ರಾಜತಾಂತ್ರಿಕರು ಹಾಗೂ ರಾಯಭಾರಿ ಕಚೇರಿಯ ಸಿಬ್ಬಂದಿಗೆ ಸಂಪೂರ್ಣ ರಕ್ಷಣೆ ನೀಡುವ ಭರವಸೆ ನೀಡಿದರು.

ಭಾರತೀಯ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಅವರು ಇಸ್ರೇಲ್ ವಿದೇಶಾಂಗ ಕಾರ್ಯದರ್ಶಿ ಅಂಬ್ ಅಲೋನ್ ಉಶ್ಪಿಟ್ಜ್ ಜೊತೆಗೆ ಮಾತನಾಡಿದ್ದಾರೆ. ಭಾರತೀಯ ವಿದೇಶಾಂಗ ಕಾರ್ಯದರ್ಶಿ ಸಂಜಯ್ ಭಟ್ಟಾಚಾರ್ಯ ಅವರು ಭಾರತದ ಇಸ್ರೇಲಿ ರಾಯಭಾರಿಯೊಂದಿಗೆ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.

Central Minister Jaishankar Assured Him Of The Fullest Protection For The Israeli Embassy

ತನಿಖೆ ಹಂತದಲ್ಲಿ ಸ್ಫೋಟ ಪ್ರಕರಣ:

ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಶುಕ್ರವಾರ ಸಂಜೆ ಸ್ಫೋಟ ಸಂಭವಿಸಿದೆ. ಇದು ಯಾವ ರೀತಿ ಸ್ಫೋಟ ಎಂಬುದು ಇನ್ನೂ ತಿಳಿದು ಬಂದಿಲ್ಲ. ಪ್ರಸ್ತುತ ಪ್ರಕರಣವು ತನಿಖೆಯಲ್ಲಿದೆ ಮತ್ತು ಅಪರಾಧಿಗಳನ್ನು ಕಂಡುಹಿಡಿಯಲು ಯಾವುದೇ ಪ್ರಯತ್ನವನ್ನು ಬಿಡುವುದಿಲ್ಲ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.

ಇಸ್ರೇಲ್ ರಾಯಭಾರಿ ಕಚೇರಿಯಿಂದ ಕೇವಲ ಒಂದೂವರೆ ಕಿ.ಮೀ ದೂರದಲ್ಲಿ ಬೀಟಿಂಗ್ ರಿಟ್ರೀಟ್ ಸಂಭ್ರಮಾಚರಣೆ ನಡೆಯುತ್ತಿರುವ ವೇಳೆಗೆ ಈ ಸ್ಫೋಟ ಸಂಭವಿಸಿದ್ದು ಆತಂಕ ಮೂಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+