ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೋಕ್ಸೋ ಕಾಯ್ದೆ ತಿದ್ದುಪಡಿಗೆ ನಿರ್ಧಾರ: ಅತ್ಯಾಚಾರ ಆರೋಪಿಗೆ ಗಲ್ಲು

|
Google Oneindia Kannada News

ನವದೆಹಲಿ, ಏಪ್ರಿಲ್ 20: ಇತ್ತೀಚೆಗೆ ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಪೋಕ್ಸೋ(Protection of Children from Sexual Offences) ಕಾಯ್ದೆಯಲ್ಲಿ ತಿದ್ದುಪಡಿ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಬಾಲಕಿಯರ ಮೇಲಿನ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ: ಮೇನಕಾ ಗಾಂಧಿಬಾಲಕಿಯರ ಮೇಲಿನ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ: ಮೇನಕಾ ಗಾಂಧಿ

12 ವರ್ಷ ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲಿ, ಆರೋಪ ಸಾಬೀತಾದ ಪಕ್ಷದಲ್ಲಿ ಅಪರಾಧಿಗೆ ಮರಣದಂಡನೆ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದ್ದು, ಈ ಸಂಬಂಧ ಸುಪ್ರೀಂ ಕೋರ್ಟಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

12 ವರ್ಷ ಅಥವಾ 12 ವರ್ಷಕ್ಕಿಂತ ಹೆಚ್ಚು ವರ್ಷ ವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದವರಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಬೇಕೆಂದು ಕೋರಿ ವಕೀಲರಾದ ಅಲಾಖ್ ಅಲೋಕ್ ಶ್ರೀವಾಸ್ತವ ಎಂಬುವವರು ಸಲ್ಲಿಸಿದ್ದ ಸಾರ್ಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರ, ಈ ಕಾಯ್ದೆಯಲ್ಲಿ ತಿದ್ದುಪಡಿ ತರಲು ನಿರ್ಧರಿಸಿದೆ.

Centre to amend POCSO Act to ensure death penalty in child rape till 12-year of age

ಈ ಕುರಿತ ಅರ್ಜಿಯನ್ನು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ.ಎ.ಎಂ.ಖಾನ್ವಿಲ್ಕರ್, ನ್ಯಾ.ಚಂದ್ರಚೂಡ್ ಅವರ ತ್ರೀಸದಸ್ಯ ಪೀಠ ಏ.27 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

English summary
The Central Government, in a letter, submitted to the Supreme Court on Friday, said that it has started the process to amend the Protection of Children from Sexual Offences (POCSO)Act to introduce death penalty for rape of minors till 12 year of age.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X