ಕೇಂದ್ರ ಸರ್ಕಾರದ ಮಹತ್ವದ ನಡೆ: ಜಮಾತ್ ಇ ಇಸ್ಲಾಮಿ ಸಂಘಟನೆಗೆ ನಿಷೇಧ
ನವದೆಹಲಿ, ಮಾರ್ಚ್ 01: ಕಾನೂನು ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸಿದ ಕಾರಣಕ್ಕೆ ಜಮಾತ್ ಇ ಇಸ್ಲಾಮಿ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.
ಜಮಾತ್ ಇ ಇಸ್ಲಾಮಿ ಎಂಬುದು ಒಂದು ಮುಸ್ಲಿಂ ರಾಜಕೀಯ ಸಂಘಟನೆಯಾಗಿದ್ದು, ಸಾಮಾಜಿಕ ಮೌಲ್ಯಗಳ ಸಂರಕ್ಷಣೆಯೂ ತನ್ನ ಕರ್ತವ್ಯ ಎಂದು ಹೇಳಿಕೊಂಡಿತ್ತು.

ಇತ್ತೀಚೆಗಷ್ಟೇ ಜಮ್ಮು-ಕಾಶ್ಮೀರದಲ್ಲಿ ನಡೆದ ಮಹತ್ವದ ಬೆಳವಣಿಗೆಯಲ್ಲಿ ಜಮಾತ್ ಇ ಇಸ್ಲಾಮಿ ಸಂಘಟನೆಯ 150 ಕ್ಕೂ ಹೆಚ್ಚು ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಬೆಂಬಲಿಗ ಸಂಘಟನೆಯಾದ ಜಮಾತ್ ನಿಷೇಧವನ್ನು ದೇಶ ಸ್ವಾಗತಿಸಿದೆ. ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಭಾರತದಲ್ಲಿ ಹಲವು ಭಯೋತ್ಪಾದಕ ದಾಳಿಯನ್ನು ನಡೆಸಲು ಉಗ್ರ ಸಂಘಟನೆಗಳು ಸಂಚು ರೂಪಿಸಿರುವ ಮಾಹಿತಿ ಗುಪ್ತಚರ ಇಲಾಖೆಗೆ ಲಭ್ಯವಾಗಿರುವ ಕಾರಣ ಸರ್ಕಾರ ಈ ಕ್ರಮ ಕೈಗೊಂಡಿದೆ.












Click it and Unblock the Notifications