ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಿಳಾ ಸುರಕ್ಷತೆ ಕುರಿತು ರಾಜ್ಯಗಳಿಗೆ ಕೇಂದ್ರದ ಸಲಹೆ: ಪೊಲೀಸರು ಪಾಲಿಸಬೇಕಾದ ನಿಯಮಗಳು

|
Google Oneindia Kannada News

ನವದೆಹಲಿ, ಅಕ್ಟೋಬರ್ 10: ಮಹಿಳೆಯರ ಸುರಕ್ಷತೆ ಮತ್ತು ಅವರ ವಿರುದ್ಧದ ಅಪರಾಧಗಳನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೊಸ ಸಲಹೆಯನ್ನು ನೀಡಿದೆ.

ಆದರೆ ಪೊಲೀಸರು ಈ ನಿಯಮಗಳನ್ನು ಪಾಲಿಸಲು ವಿಫಲರಾದರೆ, ನ್ಯಾಯ ಕೊಡಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ.ಉತ್ತರ ಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ವಿವರವಾದ ಮೂರು ಪುಟಗಳ ಸಲಹೆಯನ್ನು ನೀಡಿದೆ.

ಹತ್ರಾಸ್: ಸಂಬಂಧಿಯಿಂದ ಅತ್ಯಾಚಾರಕ್ಕೊಳಗಾಗಿದ್ದ 4 ವರ್ಷದ ಬಾಲಕಿ ಸಾವು ಹತ್ರಾಸ್: ಸಂಬಂಧಿಯಿಂದ ಅತ್ಯಾಚಾರಕ್ಕೊಳಗಾಗಿದ್ದ 4 ವರ್ಷದ ಬಾಲಕಿ ಸಾವು

ಸಿಆರ್‌ಪಿಸಿಯಲ್ಲಿ ಅತ್ಯಾಚಾರದಂತಹ ತಿಳಿದೂ ಮಾಡುವ ತಪ್ಪುಗಳಿಗೆ ಎಫ್‌ಐಆರ್ ಕಡ್ಡಾಯವಾಗಿ ನೋಂದಣಿ ಮಾಡಬೇಕೆಂದು ಗೃಹ ಸಚಿವಾಲಯ ತಿಳಿಸಿದೆ.

Centre Issues Fresh Advisory To States On Women Safety

ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಕೊಲೆ ಪ್ರಕರಣಗಳನ್ನು ಒಳಗೊಂಡಿರುವ ಅರಿವಿನ ಅಪರಾಧದ ಮಾಹಿತಿ ಬಂದ ಸಂದರ್ಭದಲ್ಲಿ, ಪೊಲೀಸ್ ಠಾಣಾ ವ್ಯಾಪ್ತಿಯಿಂದ ಹೊರಗೆ ನಡೆದರೆ ಎಫ್‌ಐಆರ್ ಅಥವಾ ಜೀರೋ ಎಪ್‌ಐಆರ್ ದಾಖಲಿಸಬೇಕು ಎಂದು ಕಾನೂನು ಸಚಿವಾಲಯ ಹೇಳಿದೆ.

ಈ ಕಡ್ಡಾಯ ಅವಶ್ಯಕತೆಗಳನ್ನು ಪೂರೈಸಲು ಪೊಲೀಸರು ವಿಫಲವಾದರೆ ದೇಶದಲ್ಲಿ ಅಪರಾಧ ಪ್ರಕರಣಗಳನ್ನು ತಪ್ಪಿಸಲು ಪೊಲೀಶರು ಅರ್ಹರಲ್ಲ ಎಂಬುದನ್ನು ಸೂಚಿಸುತ್ತದೆ.

ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿತ್ತು. ಬಳಿಕ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳು.
ಪೊಲೀಸರು ಪೋಷಕರಿಗೆ ಅಂತ್ಯಕ್ರಿಯೆಗೆ ಅವಕಾಶ ಮಾಡಿಕೊಡದೆ ತಾವೇ ಮಧ್ಯರಾತ್ರಿ 2.30ಕ್ಕೆ ಅಂತ್ಯಕ್ರಿಯೆ ನೆರವೇರಿಸಿದ್ದರು. ಇದು ಸಾಕಷ್ಟು ವಿರೋಧಕ್ಕೆ ಕಾರಣವಾಗಿತ್ತು.
ಇದೀಗ ಈ ಘಟನೆ ನಡೆದು ಕೆಲವೇ ದಿನಗಳಲ್ಲಿ ಮಹಿಳಾ ಸುರಕ್ಷತಾ ನಿಯಮವನ್ನು ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದೆ.

English summary
The Centre has issued a fresh advisory to states on safety of women and how to deal with crime against them. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X