ಖಾಸಗಿ ಕ್ಷೇತ್ರಗಳಲ್ಲಿಯೂ SC/ST ಮೀಸಲಾತಿಗೆ ಮುಂದಾದ ಕೇಂದ್ರ?

ನವದೆಹಲಿ, ಅಕ್ಟೋಬರ್ 4: ಖಾಸಗಿ ವಲಯಗಳಲ್ಲಿ ದುಡಿಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯೋಗಿಗಳ ವಿವರ ನೀಡುವಂತೆ ಪ್ರಧಾನಿ ಕಾರ್ಯಾಲಯ ದೇಶದ ಎಲ್ಲ ಖಾಸಗಿ ಕಂಪೆನಿಗಳು ಮತ್ತು ಎಲ್ಲ ರಾಜ್ಯಗಳ ಕಾರ್ಮಿಕ ಇಲಾಖೆಗಳಿಗೆ ಸೂಚನೆ ನೀಡಿದೆ.

ಖಾಸಗಿ ಕ್ಷೇತ್ರದಲ್ಲಿನ ಎಸ್‌ಸಿ ಮತ್ತು ಎಸ್‌ಟಿ ಉದ್ಯೋಗಿಗಳ ಪ್ರಾತಿನಿಧ್ಯದ ದಾಖಲೆಗಳನ್ನು ಈ ವರ್ಷದ ಡಿಸೆಂಬರ್ ಅಂತ್ಯದ ಒಳಗೆ ಕಳುಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

ಖಾಸಗಿ ವಲಯದ ವಿವಿಧ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ವಿವರಗಳನ್ನು ಪಡೆದುಕೊಳ್ಳುವ ಸಂಬಂಧ ಪ್ರಧಾನಿ ಕಾರ್ಯಾಲಯದಲ್ಲಿ ಪ್ರಮುಖ ಇಲಾಖೆಗಳ ಕಾರ್ಯದರ್ಶಿಗಳ ಜತೆ ಸೆಪ್ಟೆಂಬರ್‌ನಲ್ಲಿ ಸಭೆ ನಡೆಸಲಾಗಿತ್ತು.

centre seeks details of sc st employees in private sector

ಆದರೆ, ಈ ಮಾಹಿತಿಯನ್ನು ನಿಗದಿತ ಅವಧಿಯೊಳಗೆ ತರಿಸಿಕೊಳ್ಳುವುದು ಸುಲಭವಲ್ಲ. ಹೆಚ್ಚಿನ ಖಾಸಗಿ ಸಂಸ್ಥೆಗಳು ತಮ್ಮ ಕಂಪೆನಿಯಲ್ಲಿ ದುಡಿಯುತ್ತಿರುವವರ ಜಾತಿಯ ಮಾಹಿತಿ ಸಂಗ್ರಹಿಸಿಲ್ಲ. ಇನ್ನು ಅನೇಕ ಕಂಪೆನಿಗಳು ಈ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲು ಬಯಸುವುದಿಲ್ಲ.

ಹೀಗಾಗಿ ಸಂಪೂರ್ಣ ಪ್ರಮಾಣದ ಮಾಹಿತಿ ಪಡೆದುಕೊಳ್ಳುವುದು ಕಷ್ಟವಾಗಲಿದೆ ಎನ್ನಲಾಗಿದೆ. ಶೀಘ್ರವಾಗಿ ಎಲ್ಲ ಕಂಪೆನಿಗಳಿಂದ ವಿವರ ಪಡೆದುಕೊಂಡು ಡಿಸೆಂಬರ್ ಒಳಗೆ ಕಳುಹಿಸುವಂತೆ ಪ್ರಧಾನಿ ಕಾರ್ಯಾಲಯ ಸೂಚನೆ ನೀಡಿದೆ.

ಸರ್ಕಾರಿ ಇಲಾಖೆಗಳಲ್ಲಿ ಇರುವಂತೆಯೇ ಖಾಸಗಿ ವಲಯದ ಕಂಪೆನಿಗಳಲ್ಲಿಯೂ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂಬ ಕೂಗು ಅನೇಕ ವರ್ಷಗಳಿಂದ ಇದೆ. ಕೇಂದ್ರ ಸರ್ಕಾರ ಈಗ ಅವರ ಮಾಹಿತಿ ಪಡೆದುಕೊಳ್ಳಲು ಮುಂದಾಗಿರುವುದು, ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಮೊದಲ ಹೆಜ್ಜೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+