ಲಸಿಕೆಗಳ ನಡುವಿನ ಅಂತರ ಕಡಿಮೆಗೊಳಿಸುವ ಬಗ್ಗೆ ಕೇಂದ್ರ ಹೇಳಿದ್ದಿಷ್ಟು!
ನವದೆಹಲಿ, ಜೂನ್ 11: ಇಂಗ್ಲೆಂಡ್‌ನಲ್ಲಿ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ವರದಿಗಳ ಆಧಾರದಲ್ಲಿ ಲಸಿಕೆಯ ಎರಡು ಡೋಸ್‌ಗಳ ನಡುವಿನ ಆಂತರವನ್ನು ಕಡಿಮೆಗೊಳಿಸಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ. ಆದರೆ ಇದಕ್ಕೆ ಕೇಂದ್ರ ಆರೋಗ್ಯ ಸಂಸ್ಥೆ ಪ್ರತಿಕ್ರಿಯಿಸಿದ್ದು ಈ ವರದಿಯಿಂದ ಆತಂಕಗೊಳ್ಳುವ ಸಂಗತಿಗಳು ಇಲ್ಲ. ಈ ನಿರ್ಧಾರಗಳನ್ನು ತಜ್ಞರ ಕೂಲಂಕುಷ ಪರೀಕ್ಷೆಗಳ ನಂತರವೇ ತೆಗೆದುಕೊಳ್ಳಲಾಗಿದೆ ಎಂದು ನೀತಿ ಆಯೋಗದ ಸದಸ್ಯ ಡಾ ವಿಕೆ ಪೌಲ್ ತಿಳಿಸಿದ್ದಾರೆ.
ಇನ್ನು ಕೊರೊನಾವೈರಸ್‌ನಿಂದ ಚೇತರಿಸಿಕೊಂಡವರನ್ನು ಲಸಿಕೆ ಅಭಿಯಾನದಿಂದ ಹೊರಗಿಡಬಹುದು ಎಂಬ ತಜ್ಞರ ಸಲಹೆಗಳ ಬಗ್ಗೆಯೂ ಡಾ.ಪೌಲ್ ಪ್ರತಿಕ್ರಿಯಿಸಿದ್ದು ಇಂತಾ ಚರ್ಚೆಗಳು ಸಾರ್ವಜನಿಕ ವೇದಿಕೆಯಲ್ಲಿ ಚರ್ಚೆಯಾಗಬೇಕು ಎಂದು ತಿಳಿಸಿದ್ದಾರೆ. ವಿಸ್ತಾರ ದೃಷ್ಟಿಕೋನದಲ್ಲಿ ಈ ವಿಚಾರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಇಂತಾ ವಿಚಾರಗಳಲ್ಲಿ ಯಾವುದೇ ಹಾರ್ಡ್‌ಕೋರ್ ಸಿದ್ಧಾಂತಗಳು ಇಲ್ಲ. ಇತ್ತೀಚಿನ ಬೆಳವಣಿಗೆಗಳೊಂದಿಗೆ ನಮ್ಮ ತಜ್ಞರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.
ಭಾರತದಲ್ಲಿ ಕೋವಿಶೀಲ್ಡ್‌ನ ಎರಡು ಲಸಿಕೆಗಳ ನಡುವಿನ ಅಂತರವನ್ನು 12 ರಿಂದ 16 ವಾರಗಳಿಗೆ ವಿಸ್ತರಿಸಲಾಯಿತು. ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ನೀಡುವ ರಕ್ಷಣೆ ದೀರ್ಘಕಾಲ ಇರುತ್ತದೆ ಎಂಬ ಅಂತಾರಾಷ್ಟ್ರೀಯ ಅಧ್ಯಯನಗಳ ಆಧಾರದ ಮೇಲೆ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಆದ್ದರಿಂದ, ಎರಡನೇ ಡೋಸ್ ವಿಳಂಬಗೊಳಿಸಬಹುದು ಎಂದು ಡಾ. ಪೌಲ್ ಹೇಳಿದ್ದಾರೆ.

ಆದರೆ ಇಂಗ್ಲೆಂಡ್‌ನ ಆರೋಗ್ಯ ಇಲಾಖೆ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಲಸಿಕೆಯ ಮೊದಲ ಡೋಸ್ ರಕ್ಷಣೆ ನೀಡುವ ಪ್ರಮಾಣ ಈ ಮೊದಲು ಅಂದಾಜಿಸಿರುವುದಕ್ಕಿಂತ ಕಡಿಮೆಯಾಗಿದೆ. ಈ ವರದಿಯ ಆಧಾರದಲ್ಲಿ ಅಲ್ಲಿ ಲಸಿಕೆಯ ನಡುವಿನ ಅಂತರವನ್ನು ಈಗಾಗಲೇ ಕಡಿಮೆಗೊಳಿಸಲಾಗಿದೆ. ಉತ್ತರ ಐರ್ಲೆಂಡ್‌ನಲ್ಲಿ ಲಭ್ಯವಿರುವ ಎಲ್ಲಾ ಲಸಿಕೆಗಳಿಗೆ ಇದ್ದ 10 ರಿಂದ 12 ವಾರಗಳ ಅಂತರವನ್ನು ಎಂಟು ವಾರಗಳಿಗೆ ಇಳಿಸಿದೆ.
ಹೊಸ ಅಧ್ಯಯನದ ವರದಿಯ ಪ್ರಕಾರ ಆಸ್ಟ್ರಜನಿಕಾ(ಭಾರತದಲ್ಲಿ ಕೋವಿಶೀಲ್ಡ್) ಲಸಿಕೆಯ ಮೊದಲ ಡೋಸ್ ಭಾರತದಲ್ಲಿ ಮೊದಲಿಗೆ ಪತ್ತೆಯಾದ 'ಡೆಲ್ಟಾ' ಮಾದರಿಯ ವಿರುದ್ಧ 33 ಪ್ರತಿಶತದಷ್ಟು ಮಾತ್ರ ರಕ್ಷಣೆಯನ್ನು ನೀಡುತ್ತದೆ. ಎರಡನೇ ಡೋಸ್ ಇದರ ಪ್ರಮಾಣವನ್ನು ಹೆಚ್ಚುಗೊಳಿಸಿ 60 ಶೇಕಡಾದಷ್ಟು ರಕ್ಷಣೆಯನ್ನು ನೀಡುತ್ತದೆ ಎಂದು ತಿಳಿಸಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications