ಕೊರೊನಾ ಸೋಂಕು ಉಲ್ಬಣ: 8 ರಾಜ್ಯಗಳ ಜೊತೆ ಕೇಂದ್ರ ತಜ್ಞರ ಸಭೆ!
ದೆಹಲಿ, ಜುಲೈ 24: ಭಾರತದಲ್ಲಿ ಕೊರೊನಾ ವೈರಸ್ ಕೇಸ್‌ಗಳು ಅತಿ ವೇಗವಾಗಿ ಏರುತ್ತಿದೆ. ಶುಕ್ರವಾರ ಬೆಳಗ್ಗೆ ಕೇಂದ್ರ ಆರೋಗ್ಯ ಇಲಾಖೆ ನೀಡಿದ ಮಾಹಿತಿ ಪ್ರಕಾರ 24 ಗಂಟೆಯಲ್ಲಿ 49,310 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ದಿನದಿಂದ ದಿನಕ್ಕೆ ಹೊಸ ಕೇಸ್‌ಗಳು ಉಲ್ಬಣವಾಗುತ್ತಿದ್ದು ಸಹಜವಾಗಿ ಆತಂಕ ಹೆಚ್ಚಿಸಿದೆ.
Recommended Video
ಈ ಬಗ್ಗೆ ಕೇಂದ್ರ ಸರ್ಕಾರ ಕೂಡ ಚಿಂತೆಗೆ ಒಳಗಾಗಿದೆ. ರಾಜ್ಯಗಳಲ್ಲಿ ಕೊವಿಡ್ ಪರಿಸ್ಥಿತಿ ಪರಿಶೀಲಿಸಲು ಕೇಂದ್ರ ಸರ್ಕಾರ ವಿಶೇಷ ತಂಡವೊಂದನ್ನು ನಿಯೋಜಿಸಿತ್ತು. ಈ ತಂಡವೂ ರಾಜ್ಯಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದೆ. ಇದೀಗ, ದೇಶದ ಏಂಟು ರಾಜ್ಯಗಳ ಬಗ್ಗೆ ಈ ತಂಡ ಕಳವಳ ವ್ಯಕ್ತಪಡಿಸಿದೆ.
'ಇಂಡಿಯನ್ ಎಕ್ಸ್‌ಪ್ರೆಸ್' ವರದಿ ಮಾಡಿರುವಂತೆ ಶುಕ್ರವಾರ ಕೇಂದ್ರದ ತಜ್ಞರ ತಂಡ ಮತ್ತು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಗಳು ಮತ್ತು ಆಂಧ್ರಪ್ರದೇಶ, ಬಿಹಾರ, ತೆಲಂಗಾಣ, ಒಡಿಶಾ, ಪಶ್ಚಿಮ ಬಂಗಾಳ, ಅಸ್ಸಾಂ, ಕರ್ನಾಟಕ, ಮತ್ತು ಉತ್ತರ ಪ್ರದೇಶದ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಅದರಲ್ಲೂ ಈ ರಾಜ್ಯಗಳಲ್ಲಿ ನಿನ್ನೆಯ ವರದಿ ನಿಜಕ್ಕೂ ಅಚ್ಚರಿ ತಂದಿದೆ. ಮುಂದೆ ಓದಿ....

ಆಂಧ್ರ ಪ್ರದೇಶದಲ್ಲಿ ದಾಖಲೆ
ಆಂಧ್ರ ಪ್ರದೇಶದಲ್ಲಿ ನಿನ್ನೆ ಒಂದೇ ದಿನ 7998 ಜನರಿಗೆ ಕೊವಿಡ್ ತಗುಲಿದೆ. ಇದುವರೆಗೂ ಆಂಧ್ರದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಕೊರೊನಾ ಸೋಂಕಿತರು ವರದಿಯಾಗಿರಲಿಲ್ಲ. ಆಂಧ್ರದಲ್ಲಿ ಹೆಚ್ಚು ಪರೀಕ್ಷೆಗಳು ನಡೆಯುತ್ತಿರುವ ಕಾರಣ ಸೋಂಕು ಹೆಚ್ಚು ವರದಿಯಾಗಿದೆ ಎಂದು ಹೇಳಲಾಗಿದೆ. ಆದರೂ, ನಿನ್ನೆಯ ಸಂಖ್ಯೆ ಆಂಧ್ರ ಪಾಲಿಗೆ ಭವಿಷ್ಯದ ಬಗ್ಗೆ ಚಿಂತಿಸುವಂತೆ ಮಾಡಿದೆ.

ಕರ್ನಾಟಕದಲ್ಲೂ 5 ಸಾವಿರ ಕೇಸ್
ಕರ್ನಾಟಕದ ಪಾಲಿಗೂ ನಿನ್ನೆ ಕೆಟ್ಟ ದಿನ. ಒಂದೇ ದಿನ 5030 ಜನರಿಗೆ ಕೊರೊನಾ ವೈರಸ್ ತಗುಲಿರುವುದು ದೃಢವಾಗಿದೆ. ರಾಜ್ಯದಲ್ಲೂ ಇದೇ ಮೊದಲ ಬಾರಿಗೆ 5 ಸಾವಿರಕ್ಕೂ ಹೆಚ್ಚು ಕೇಸ್ ದಾಖಲಾಗಿದೆ. ಈ ಅಂಕಿ ಅಂಶ ಗಮಿನಿಸದ ಮೇಲೆ ಕರ್ನಾಟಕದಲ್ಲಿ ಈಗ ಕೊವಿಡ್ ಗಂಭೀರತೆ ಹೆಚ್ಚಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶ?
ಉತ್ತರ ಪ್ರದೇಶದಲ್ಲಿ ನಿನ್ನೆ 2529 ಜನರಿಗೆ ಕೊರೊನಾ ವೈರಸ್ ತಗುಲಿದೆ. ಪಶ್ಚಿಮ ಬಂಗಾಳದಲ್ಲಿ 2436 ಕೇಸ್ ವರದಿಯಾಗಿದೆ. ಈ ಎರಡು ರಾಜ್ಯಗಳಲ್ಲೂ ನಿನ್ನೆ ಅತಿ ಹೆಚ್ಚು ಕೇಸ್ ದಾಖಲಾಗಿದೆ. ಕೇಂದ್ರ ಆರೋಗ್ಯ ಅಧಿಕಾರಿಗಳು ಹಾಗೂ ತಜ್ಞರ ತಂಡ ಈ ರಾಜ್ಯಗಳ ಮೇಲೂ ನಿಗಾ ವಹಿಸಿದೆ.

ಉಳಿದ ನಾಲ್ಕು ರಾಜ್ಯಗಳ ಕಥೆ ಏನು?
ಬಿಹಾರ, ತೆಲಂಗಾಣ, ಒಡಿಶಾ ಹಾಗೂ ಅಸ್ಸಾಂ ರಾಜ್ಯಗಳಲ್ಲೂ ಕೊರೊನಾ ಕೇಸ್‌ಗಳು ಉಲ್ಭಣವಾಗುತ್ತಿದೆ. ಬಿಹಾರದಲ್ಲಿ ನಿನ್ನೆ 1625 ಕೊರೊನಾ ಕೇಸ್ ವರದಿಯಾಗಿದೆ. ತೆಲಂಗಾಣದಲ್ಲಿ ನಿನ್ನೆ 1567 ಜನರಿಗೆ ಸೋಂಕು ದೃಢವಾಗಿದೆ. ಅಸ್ಸಾಂನಲ್ಲಿ ನಿನ್ನೆ 1047 ಜನರಿಗೆ ಕೊವಿಡ್ ತಗುಲಿದೆ. ಒಡಿಶಾದಲ್ಲಿ ನಿನ್ನೆ 1264 ಕೇಸ್ ಪತ್ತೆಯಾಗಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications