ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಶಿಯಲ್ ಮಿಡಿಯಾಕ್ಕೆ ಜನವರಿ 15 ರೊಳಗೆ ಕಡಿವಾಣ, ಸುಪ್ರೀಂ ಗೆ ಕೇಂದ್ರದ ಭರವಸೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 22: ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದಿತ, ದ್ವೇಷ ಬಿತ್ತುವ, ರಾಷ್ಟ್ರ ವಿರೋಧಿ, ಅಸಭ್ಯ ಮತ್ತು ಸುಳ್ಳು ಪೋಸ್ಟ್ ಗಳನ್ನು ನಿಯಂತ್ರಿಸಲು ಸೂಕ್ತ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಸುಪ್ರೀಂ ಕೋರ್ಟಿಗೆ ಭರವಸೆ ನೀಡಿದೆ.

ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗ ಪಡಿಸಿಕೊಳ್ಳುವವರನ್ನು ನಿಯಂತ್ರಿಸುವ ಸಲುವಾಗಿ ಕಠಿಣ ನಿರ್ಣಯಗಳನ್ನು ತೆಗೆದುಕೊಂಡು, ಜನವರಿ 15, 2020 ರ ಒಳಗಾಗಿ ಜಾರಿಗೆ ತರುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ಹೇಳಿದೆ.

ಸಾಮಾಜಿಕ ಜಾಲತಾಣಗಳ ಮೇಲೆ ಕಡಿವಾಣಕ್ಕೆ ಕೇಂದ್ರಕ್ಕೆ ಸುಪ್ರೀಂ ಸೂಚನೆಸಾಮಾಜಿಕ ಜಾಲತಾಣಗಳ ಮೇಲೆ ಕಡಿವಾಣಕ್ಕೆ ಕೇಂದ್ರಕ್ಕೆ ಸುಪ್ರೀಂ ಸೂಚನೆ

ಸಾಮಾಜಿಕ ಮಾಧ್ಯಮಗಳ ದುರುಪಯೋಗವಾಗುತ್ತಿದೆ, ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು, ರಾಷ್ಟ್ರವಿರೋಧಿ ಪೋಸ್ಟ್ ಗಳನ್ನು, ಸುಳ್ಳು ಸುದ್ಧಿಗಳನ್ನು ವ್ಯಕ್ತಿತ್ವದ ತೇಜೋವಧೆಯನ್ನು ಮಾಡಲಾಗುತ್ತಿದೆ ಎಂಬ ದೂರನ್ನು ಆಲಿಸಿದ್ದ ಸುಪ್ರೀಂ ಕೋರ್ಟ್, ಈ ಕುರಿತು ವರದಿ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು.

Centre To Implement New Rules To Regulate Social Media By Jan 15

ಸಾಮಾಜಿಕ ಮಾಧ್ಯಮಗಳ ದುರ್ಬಳಕೆಯ ವಿರುದ್ಧ ಫೇಸ್ ಬುಕ್ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ನ್ಯಾ ದೀಪಕ್ ಗುಪ್ತಾ ಮತ್ತು ನ್ಯಾ ಅನಿರುದ್ಧ್ ಬೋಸ್ ಅವರಿದ್ದ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿ, ಜನವರಿ 2020 ರ ಒಳಗೆ ವರದಿ ನೀಡುವಂತೆ ಸೂಚನೆ ನೀಡಿತ್ತು.

English summary
Centre To Implement New Rules To Regulate Social Media By Jan 15
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X