ಜನರು ಮತ್ತು ಸರಕುಗಳ ಚಲನೆಗೆ ಯಾವುದೇ ನಿರ್ಬಂಧವಿಲ್ಲವೇ ಎಂಬುದನ್ನು ಖಚಿತ ಪಡಿಸಿಕೊಳ್ಳಿ: ರಾಜ್ಯಗಳಿಗೆ ಕೇಂದ್ರದ ಪತ್ರ
ನವದೆಹಲಿ, ಆಗಸ್ಟ್ 22: ಲಾಕ್‌ಡೌನ್ ಬಳಿಕ ಹಂತ ಹಂತವಾಗಿ ನಡೆಯುತ್ತಿರುವ ಅನ್ಲಾಕ್ ಪ್ರಕ್ರಿಯೆಯಲ್ಲಿ ವ್ಯಕ್ತಿಗಳು ಮತ್ತು ಸರಕುಗಳ ಅಂತರ್-ರಾಜ್ಯ ಚಲನೆಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳನ್ನು ಕೇಳಿದೆ.
Recommended Video
ಈ ಕುರಿತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ನೀಡಿದ ಪತ್ರದಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ವಿವಿಧ ಜಿಲ್ಲೆಗಳು ಮತ್ತು ರಾಜ್ಯಗಳಿಂದ ಸ್ಥಳೀಯ ಮಟ್ಟದಲ್ಲಿ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ ಎಂಬ ವರದಿಗಳಿವೆ ಎಂದು ಹೇಳಿದರು.
ಅನ್ಲಾಕ್ 3 ಮಾರ್ಗಸೂಚಿಗಳತ್ತ ತಿಳಿಸಿರುವ ಭಲ್ಲಾ, ಇಂತಹ ನಿರ್ಬಂಧಗಳು ಸರಕು ಮತ್ತು ಸೇವೆಗಳ ಅಂತರ-ರಾಜ್ಯ ಚಲನೆಯಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತಿವೆ ಮತ್ತು ಪೂರೈಕೆ ಸರಪಳಿಗಳ ಮೇಲೆ ಪರಿಣಾಮ ಬೀರುತ್ತಿವೆ. ಇದರಿಂದಾಗಿ ಆರ್ಥಿಕ ಚಟುವಟಿಕೆ ಮತ್ತು ಉದ್ಯೋಗದಲ್ಲಿ ಅಡ್ಡಿ ಉಂಟಾಗುತ್ತದೆ. ಅನ್ಲಾಕ್ ಮಾರ್ಗಸೂಚಿಗಳು ವ್ಯಕ್ತಿಗಳು ಮತ್ತು ಸರಕುಗಳ ರಾಜ್ಯದೊಳಗಿನ ಮತ್ತು ಅಂತರ್-ರಾಜ್ಯ ಚಲನೆಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ನೆರೆಯ ರಾಷ್ಟ್ರಗಳೊಂದಿಗಿನ ಒಪ್ಪಂದಗಳ ಅಡಿಯಲ್ಲಿ ಭೂ ಗಡಿ ವ್ಯಾಪಾರಕ್ಕಾಗಿ ವ್ಯಕ್ತಿಗಳು ಮತ್ತು ಸರಕುಗಳ ಚಲನೆಗೆ ಪ್ರತ್ಯೇಕ ಅನುಮತಿ, ಅನುಮೋದನೆ ಅಥವಾ ಇ-ಪರ್ಮಿಟ್ ಅಗತ್ಯವಿಲ್ಲ ಎಂದು ಮಾರ್ಗಸೂಚಿಗಳು ತಿಳಿಸಿವೆ. ಅಂತಹ ನಿರ್ಬಂಧಗಳು ವಿಪತ್ತು ನಿರ್ವಹಣಾ ಕಾಯ್ದೆ 2005 ರ ನಿಬಂಧನೆಗಳ ಅಡಿಯಲ್ಲಿ ಗೃಹ ಸಚಿವಾಲಯ ಹೊರಡಿಸಿದ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ ಎಂದು ಭಲ್ಲಾ ಹೇಳಿದ್ದಾರೆ.
ಯಾವುದೇ ನಿರ್ಬಂಧಗಳನ್ನು ವಿಧಿಸಬಾರದು ಮತ್ತು ಅನ್ಲಾಕ್ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಪತ್ರದಲ್ಲಿ ರಾಜ್ಯಗಳನ್ನು ಕೇಳಿದೆ.












Click it and Unblock the Notifications