ಸುಪ್ರೀಂ, ಹೈಕೋರ್ಟ್‌ ಜಡ್ಜ್‌ಗಳ ನಿವೃತ್ತಿ ವಯೋಮಿತಿ ಹೆಚ್ಚಳ ಸಾಧ್ಯತೆ

ಬೆಂಗಳೂರು, ಜು.19: ಸುಪ್ರೀಂಕೋರ್ಟ್‌ ಹಾಗೂ ಹೈಕೋರ್ಟ್‌ ನ್ಯಾಯಾಧೀಶರು ಹಾಗೂ ನ್ಯಾಯಮೂರ್ತಿಗಳ ನಿವೃತ್ತಿ ವಯೋಮಿತಿ ಹೆಚ್ಚಳವಾಗುವ ಸಾಧ್ಯತೆ ಇದೆ. ಜಡ್ಜ್‌ಗಳ ನಿವೃತ್ತಿ ವಯೋಮಿತಿಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು 65ರಿಂದ 67ಕ್ಕೆ ಹಾಗೂ ಉಚ್ಛ ನ್ಯಾಯಾಲಯ ನ್ಯಾಯಮೂರ್ತಿಯನ್ನು 62ರಿಂದ 64ಕ್ಕೆ ಹೆಚ್ಚಳ ಮಾಡಲು ಉದ್ದೇಶಿಸಲಾಗಿದೆ.

ನ್ಯಾಯಮೂರ್ತಿಗಳ ನಿವೃತ್ತ ವಯಸ್ಸನ್ನು ಏರಿಕೆ ಮಾಡಲು ಸಂವಿಧಾನಕ್ಕೆ ತಿದ್ದುಪಡಿ ತರಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಬುಧವಾರದಿಂದ ಆರಂಭವಾಗಿರುವ ಮುಂಗಾರು ಅಧಿವೇಶನದಲ್ಲೇ ಕೇಂದ್ರ ಸರ್ಕಾರದ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ. ದೇಶದ 4 ಹೈಕೋರ್ಟ್‌ಗಳು 406 ನ್ಯಾಯಮೂರ್ತಿಗಳ ಕೊರತೆಯನ್ನು ಎದುರಿಸುತ್ತಿವೆ. ಕರ್ನಾಟಕದಲ್ಲಿ 38 ನ್ಯಾಯಮೂರ್ತಿಗಳ ಹುದ್ದೆಗಳು ಖಾಲಿ ಉಳಿದಿವೆ.

Chances of Raise in the Supreme and high court judges retirement age

ಇನ್ನು ಮಾಹಿತಿ ಹಕ್ಕು ಕಾಯ್ದೆ 2005 ತಿದ್ದುಪಡಿ ಮಸೂದೆಯನ್ನು ಸಂಸತ್ತಿನ ಇದೇ ಅಧಿವೇಶನದಲ್ಲಿ ಮಂಡಲಿಸಲು ನಿರ್ಧರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರ ವೇತನ ಮತ್ತು ಸೇವೆಗಳ ಕುರಿತಂತೆ ಕೆಲವು ತಿದ್ದುಪಡಿಗಳನ್ನು ತರಲು ಸರ್ಕಾರ ಮುಂದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+