ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚಾರ್ ಮೇಲ್ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್

|
Google Oneindia Kannada News

ನವದೆಹಲಿ, ಡಿಸೆಂಬರ್ 1:ಐಸಿಐಸಿಐ ಬ್ಯಾಂಕ್‌ನ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ವಜಾಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ ಚಂದಾ ಕೊಚ್ಚಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಇದೇ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪದ ಕಾರಣ ಐಸಿಐಸಿಐ ಬ್ಯಾಂಕ್‌ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕರ ಸೇವೆಯಿಂದ ಚಂದಾ ಕೊಚ್ಚಾರ್ ಅವರನ್ನು ವಜಾಗೊಳಿಸಲಾಗಿತ್ತು.

ಹೈಕೋರ್ಟ್ ಮಾ.5ರಂದು ಅರ್ಜಿಯನ್ನು ವಜಾಗೊಳಿಸಿ ಆದೇಶ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಚಂದಾ ಕೊಚ್ಚಾರ್ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.

Chanda Kochhar Loses Supreme Court Case Against Being Fired As ICICI CEO

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠ ನಾವು ಬಾಂಬೆ ಹೈಕೋರ್ಟ್ ನೀಡಿರುವ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ, ಇದು ಖಾಸಗಿ ಬ್ಯಾಂಕ್ ಮತ್ತು ಉದ್ಯೋಗಿ ವ್ಯಾಪ್ತಿಗೆ ಒಳಪಡುತ್ತದೆ ಎಂದು ಹೇಳಲಾಗಿದೆ.

ಕಳೆದ ವರ್ಷ ಕೊಚ್ಚಾರ್‌ನ್ನು ಐಸಿಐಸಿಐ ಸಿಇಒ ಹಾಗೂ ಎಂಡಿ ಹುದ್ದೆಯಿಂದ ಉಚ್ಚಾಟಿಸಲಾಗಿತ್ತು. ಉನ್ನತ ಹುದ್ದೆಗೇರಿದ ಬಳಿಕ 2003ರ ಬಳಿಕ ಚಂದಾ ಕೊಚ್ಚಾರ್ ಗೆ ನೀಡಿರುವ ಬೋನಸ್‌ಗಳನ್ನು ಹಿಂಪಡೆಯಲು ಬೋರ್ಡ್ ನಿರ್ಧರಿಸಿತ್ತು.

English summary
Former ICICI Bank CEO Chanda Kochhar faced a setback today as the Supreme Court rejected her appeal against her sacking as the bank's chief executive and managing director.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X