ದೆಹಲಿಯಲ್ಲಿ ಇಂದು ಚಂದ್ರಬಾಬು ನಾಯ್ಡು ಉಪವಾಸ ಸತ್ಯಾಗ್ರಹ

ನವದೆಹಲಿ, ಫೆಬ್ರವರಿ 11: ಆಂಧ್ರಪ್ರದೇಶದಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನವದೆಹಲಿಯಲ್ಲಿ ಸೋಮವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಭಾನುವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿದ್ದು, ಅದರ ಮರುದಿನವೇ ನಾಯ್ಡು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಇಂದು ರಾತ್ರಿಯವರೆಗೆ ಉಪವಾಸ ಆಚರಿಸಲಿದ್ದಾರೆ.

2014 ರಲ್ಲಿ ಆಂಧ್ರಪ್ರದೇಶವು ವಿಭಜನೆಯಾಗಿ ತೆಲಂಗಾಣ ಮತ್ತು ಆಂಧ್ರಪ್ರದೇಶವೆಂಬ ಎರಡು ರಾಜ್ಯಗಳು ಸೃಷ್ಟಿಯಾದಾಗ ಆಂಧ್ರದಪ್ರದೇಶಕ್ಕೆ ಅನ್ಯಾಯವಾಗಿದೆ ಎಂದು ನಾಯ್ಡು ದೂರಿದ್ದಾರೆ. ಆ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಅಭಯ ನೀಡಿದ್ದರು. ಆದರೆ ಅವರು ತಮ್ಮ ಮಾತನ್ನು ಉಳಿಸಿಕೊಂಡಿಲ್ಲ ಎಂದು ಅವರು ದೂರಿದರು.

Chandrababu Naidu begins a day long hunger strike in Delhi

ಇದೇ ಕಾರಣವನ್ನು ನೀಡಿ ಎನ್ ಡಿಎ ಮೈತ್ರಿಕೂಟದಿಂದ ದೂರವುಳಿದಿರುವ ನಾಯ್ಡು, 'ಚಂದ್ರಬಾಬು ನಾಯ್ಡು ಅವರಿಗೆ ರಾಜ್ಯವನ್ನು ಅಭಿವೃದ್ಧಿಗೊಳಿಸುವುದಕ್ಕೆ ಸಾಧ್ಯವಾಗಿಲ್ಲ, ಎಷ್ಟು ಖರ್ಚು ಮಾಡಿದ್ದಾರೆ ಎಂಬ ವಿವರವನ್ನೂ ನೀಡುತ್ತಿಲ್ಲ. ಕೇವಲ ಸುಳ್ಳು ಹೇಳಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಾರೆ' ಎಂದು ಮೋದಿ ಪ್ರತಿಕ್ರಿಯೆ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+