Get Updates
Get notified of breaking news, exclusive insights, and must-see stories!

ಮಕ್ಕಳಿಗೆ ಅಪಾಯ: ಕೊರೊನಾವೈರಸ್ ಕಡಿಮೆಯಾದ ದೆಹಲಿಯಲ್ಲಿ ವೈರಲ್ ಜ್ವರ!

ಲಕ್ನೋ, ಸಪ್ಟೆಂಬರ್ 8: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಸುಧಾರಿಸಿಕೊಳ್ಳುತ್ತಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವೈರಲ್ ಫಿವರ್ ಹಾವಳಿ ಹೆಚ್ಚಾಗಿದೆ. ದೆಹಲಿ ಮತ್ತು ನೋಯ್ಡಾದ ಬಹುಪಾಲು ಆಸ್ಪತ್ರೆಗಳಲ್ಲಿ ಹೆಚ್ಚಿನ ಮಕ್ಕಳು ತೀವ್ರ ಜ್ವರದಿಂದ ದಾಖಲಾಗಿದ್ದಾರೆ. ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಯ ಹೊರ ರೋಗಿಗಳ ವಿಭಾಗದಲ್ಲಿ ತೀವ್ರ ಜ್ವರಕ್ಕೆ ಚಿಕಿತ್ಸೆ ಪಡೆದುಕೊಂಡಿರುವುದು ವರದಿಯಾಗಿದೆ.

"ಶೇ.50 ರಿಂದ 55ರಷ್ಟು ರೋಗಿಗಳು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ನಮ್ಮ ಆಸ್ಪತ್ರೆಯ ಹೊರ ರೋಗಿಗಳ ವಿಭಾಗದಲ್ಲಿ ದಿನವೊಂದಕ್ಕೆ 5 ರಿಂದ 7 ಡೆಂಗ್ಯೂ ಸೋಂಕಿತ ಪ್ರಕರಣಗಳು ವರದಿ ಆಗುತ್ತಿವೆ. ಇದೊಂದು ಕಾಲೋಚಿತ ಜ್ವರವಾಗಿದ್ದು, ಪ್ರತಿವರ್ಷವೂ ಇಂಥ ಜ್ವರದ ಪ್ರಕರಣಗಳು ವರದಿಯಾಗುತ್ತವೆ," ಎಂದು ನೋಯ್ಡಾದ ಚೈಲ್ಡ್ ಪಿಜಿಐ ನಿರ್ದೇಶಕಿ ಡಾ. ಜೋತ್ಸ್ನಾ ಮದನ್ ಹೇಳಿದ್ದಾರೆ.

"ನಾವೀಗ ವೈರಲ್ ಜ್ವರದ ನಡುವೆ ಸಿಲುಕಿದ್ದೇವೆ. ಮಕ್ಕಳಲ್ಲಿ ಈ ರೀತಿಯ ವೈರಲ್ ಫಿವರ್ ಪ್ರಕರಣಗಳನ್ನು ಹೆಚ್ಚಾಗಿ ಕಾಣುತ್ತೇವೆ. ನಮ್ಮ ಆಸ್ಪತ್ರೆಯ ಶೇ.25ರಷ್ಟು ಹೊರ ರೋಗಿಗಳ ವಿಭಾಗದಲ್ಲಿ ಕೆಮ್ಮು, ಜ್ವರ, ಶೀತದ ಲಕ್ಷಣಗಳಿಂದ ಆಗಮಿಸಿದ ಮಕ್ಕಳನ್ನು ದಾಖಲಿಸಿಕೊಳ್ಳಲಾಗಿದೆ. ಇಂಥ ಸಾಮಾನ್ಯ ಲಕ್ಷಣಗಳು ಹೆಚ್2ಹೆಚ್2 ರೀತಿಯ ಹಂದಿ ಜ್ವರದ ಪ್ರಕರಣಗಳಲ್ಲೂ ಕಂಡು ಬರುತ್ತವೆ," ಎಂದು ಮಧುಕರ್ ರೈನ್ ಬೋ ಮಕ್ಕಳ ಆಸ್ಪತ್ರೆ ನಿರ್ದೇಶಕ ಡಾ. ನಿತಿನ್ ವರ್ಮಾ ಹೇಳಿದ್ದಾರೆ.

Childrens Viral Fever Cases Surged in Delhi and Noida Hospital

ನೋಯ್ಡಾದಲ್ಲಿ ಡೆಂಗ್ಯೂ ಪ್ರಕರಣ:

"ನಮ್ಮ ಆಸ್ಪತ್ರೆಗೆ 6 ಮಕ್ಕಳು ವೈರಲ್ ಜ್ವರದಿಂದ ಆಗಮಿಸಿದ್ದು, ಈ ಪೈಕಿ ಒಂದು ಮಗುವಿನಲ್ಲಿ ಡೆಂಗ್ಯೂ ಜ್ವರ ಇರುವುದು ಪತ್ತೆಯಾಗಿದೆ ಎಂದು ನೋಯ್ಡಾದ ಗಿಮ್ಸ್ ಆಸ್ಪತ್ರೆ ವೈದ್ಯ ರಾಕೇಶ್ ಗುಪ್ತಾ ಹೇಳಿದ್ದಾರೆ. ಆಸ್ಪತ್ರೆ ಹೊರ ರೋಗಿಗಳ ವಿಭಾಗದಲ್ಲಿ ವೈರಲ್ ಫೀವರ್ ರೋಗದಿಂದ ಬಳಲುವ 30ಕ್ಕೂ ಹೆಚ್ಚು ರೋಗಿಗಳು ಬರುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಡೆಂಗ್ಯೂ ಜ್ವರ:

ಡೆಂಗ್ಯೂ ಮತ್ತು ವೈರಲ್ ಜ್ವರದ ಪ್ರಕರಣಗಳು ಮೊದಲು ಉತ್ತರ ಪ್ರದೇಶದ ಫಿರೋಜಾಬಾದ್ ಮತ್ತು ಮಥುರಾ ಜಿಲ್ಲೆಗಳಲ್ಲಿ ಹೆಚ್ಚಾಗಿ ವರದಿಯಾದವು. ಕಳೆದೊಂದು ವಾರದಲ್ಲೇ 36ಕ್ಕೂ ಹೆಚ್ಚು ಮಂದಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ನಗರ ಪ್ರದೇಶಗಳಲ್ಲಿ 22 ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 12 ಮಂದಿಯಲ್ಲಿ ಜ್ವರ ಪತ್ತೆಯಾಗಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ 12 ಮಂದಿಗೆ ಗುಣಮುಖರಾಗಿದ್ದಾರೆ ಎಂದು ಪ್ರಾಥಮಿಕ ಅಂಕಿ-ಅಂಶಗಳಿಂದ ಗೊತ್ತಾಗಿದೆ.

ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, "ಪ್ರಯಾಗರಾಜ್ ಜಿಲ್ಲೆಯಲ್ಲಿ ಪರಿಸ್ಥಿತಿಯು ನಿಯಂತ್ರಣದಲ್ಲಿದ್ದು, ಡೆಂಗ್ಯೂ ಹಾಗೂ ವೈರಲ್ ಜ್ವರದ ಹೆಚ್ಚಿನ ಪ್ರಕರಣಗಳು ವರದಿಯಾಗಿಲ್ಲ. ಈವರೆಗೂ ಡೆಂಗ್ಯೂ ಜ್ವರದಿಂದ ಜಿಲ್ಲೆಯಲ್ಲಿ ಯಾವುದೇ ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ರೋಗಿಗಳ ಚಿಕಿತ್ಸೆಗಾಗಿ ಐಸೋಲೇಷನ್ ವಾರ್ಡ್ ಅನ್ನು ಸಿದ್ಧಪಡಿಸಲಾಗಿದ್ದು, ಚಿಕಿತ್ಸೆಗೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ," ಎಂದು ಪ್ರಾಧಿಕಾರ ಹೇಳಿದೆ.

ಉತ್ತರ ಪ್ರದೇಶದಲ್ಲಿ ಸ್ವಚ್ಛತೆ ಬಗ್ಗೆ ಜನಜಾಗೃತಿ:

"ಡೆಂಗ್ಯೂ ಜ್ವರ ಮತ್ತು ವೈರಲ್ ಜ್ವರದ ಪ್ರಮಾಣ ಹೆಚ್ಚಾಗುತ್ತಿರುವ ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ರಕ್ತವನ್ನು ಒದಗಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಜನರಿಗೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕರು ತಮ್ಮ ಮನೆಗಳ ಸುತ್ತಮುತ್ತಲಿನಲ್ಲಿ ಸೊಳ್ಳೆಗಳು ಹೆಚ್ಚು ಉತ್ಪತ್ತಿಯಾಗುವ ರೀತಿಯ ವಾತಾವರಣದಿಂದ ಮುಕ್ತವಾಗಿರುವಂತೆ ಅರಿವು ಮೂಡಿಸಲಾಗುತ್ತಿದೆ," ಎಂದು ಸಿಎಂಓ ಡಾ. ಸತ್ಯೇಂದ್ರ ರೈ ಹೇಳಿದ್ದಾರೆ. ಗೋವಿಂದಪುರದ ತೆಲಿಯಾಗಂಜ್ ಪ್ರದೇಶದಲ್ಲಿ 200 ಮನೆಗಳನ್ನು ಸಮೀಕ್ಷೆಗೆ ಒಳಪಡಿಸಿದಾಗ 80 ಮನೆಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೊಳ್ಳೆಗಳ ಪ್ರಮಾಣ ಹೆಚ್ಚಾಗಿರುವುದು ಕಂಡು ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಡವರಿಗೆ ಸೊಳ್ಳೆ ಪರದೆ:

ಮಥುರಾ, ಫಿರೋಜಾಬಾದ್, ವಾರಣಾಸಿ, ಲಕ್ನೋ, ಕಾನ್ಪುರ, ಬಸ್ತಿ ಮತ್ತು ಮೀರತ್ ಜಿಲ್ಲೆಗಳ ನಂತರ, ಪ್ರಯಾಗರಾಜ್ ನಲ್ಲಿ ಡೆಂಗ್ಯೂ ಹರಡುವ ಆತಂಕ ಎದುರಾಗಿದೆ. ಆದರೆ ಇದು ಎಲ್ಲಾ ಹವಾಮಾನದ ಸೋಂಕು ಮತ್ತು ಹೊಸದೇನಲ್ಲ ಎಂದು ತಜ್ಞರು ಹೇಳಿದ್ದಾರೆ. ಪ್ರಯಾಗರಾಜ್ ಜಿಲ್ಲೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕಾರ್ಡುದಾರರಿಗಾಗಿ ಒಟ್ಟು 9,000 ಸೊಳ್ಳೆ ಪರದೆಗಳನ್ನು ಉಚಿತವಾಗಿ ನೀಡಲು ಸಹ ಆದೇಶಿಸಲಾಗಿದೆ ಎಂದು ಸಿಎಂಓ ಡಾ ಸತ್ಯೇಂದ್ರ ರೈ ಹೇಳಿದರು.

ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಜ್ವರದ ಆತಂಕ:

ಸರ್ಕಾರಿ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ 12 ಮಕ್ಕಳು ಜ್ವರದಿಂದ ದಾಖಲಾಗಿದ್ದು, ಈ ಪೈಕಿ 7 ಮಂದಿ ಲಕ್ನೋ ಮೂಲದವರು ಎಂದು ಗೊತ್ತಾಗಿದೆ. ಲೋಹಿಯಾ ಆಸ್ಪತ್ರೆಯ ಮಕ್ಕಳ ವಿಭಾಗ ಮತ್ತು ಔಷಧೀಯ ಕೇಂದ್ರದ ಎದುರಿನಲ್ಲಿ ಜನರು ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡು ಬರುತ್ತಿದೆ. ರೋಗಶಾಸ್ತ್ರದಲ್ಲಿ ಡೆಂಗ್ಯೂ, ಮಲೇರಿಯಾ, ಟೈಫಾಯಿಡ್ ಪರೀಕ್ಷೆಗೆ ಒಳಗಾಗುವವರ ಸಂಖ್ಯೆ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಜ್ವರದಿಂದ ಬಳಲುತ್ತಿರುವ 15 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, 70ಕ್ಕೂ ಹೆಚ್ಚು ಜ್ವರ ಪೀಡಿತರು ವಿವಿಧ ಇಲಾಖೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭೌರಾವ್ ದೇವರಾಸ್ ಆಸ್ಪತ್ರೆಯಲ್ಲಿ ಹೆಚ್ಚಿನ ರೋಗಿಗಳು ಮಕ್ಕಳ ಮತ್ತು ವೈದ್ಯಕೀಯ ವಿಭಾಗಗಳಿಗೆ ಬರುತ್ತಿದ್ದಾರೆ. ಮಕ್ಕಳ ವಿಭಾಗದ 10 ಬೆಡ್ ಭರ್ತಿಯಾಗಿವೆ. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಮನೀಶ್ ಪ್ರಕಾರ, 10 ರಿಂದ 15 ಮಕ್ಕಳು ಪ್ರತಿದಿನ ಜ್ವರದ ಕಾಯಿಲೆಗೆ ಚಿಕಿತ್ಸೆ ಪಡೆದುಕೊಳ್ಳಲು ಆಗಮಿಸುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+