ಸ್ವಾಮಿ ಚಿನ್ಮಯಾನಂದ ಬಂಧನ: ಪ್ರಿಯಾಂಕಾ ಗಾಂಧಿ ಹೇಳಿದ್ದೇನು?

ನವದೆಹಲಿ, ಸೆಪ್ಟೆಂಬರ್ 20: ಒಂದೊಮ್ಮೆ ಅತ್ಯಾಚಾರ ಸಂತ್ರಸ್ತೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕದೇ ಇದ್ದಿದ್ದರೆ ಸ್ವಾಮಿ ಚಿನ್ಮಯಾನಂದ ಅವರನ್ನು ಬಂಧಿಸುತ್ತಿರಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಟ್ವೀಟ್ ಮಾಡಿರುವ ಅವರು, ಸಾರ್ವಜನಿಕರ ಮತ್ತು ಪತ್ರಿಕೋದ್ಯಮದ ಶಕ್ತಿಯಿಂದಾಗಿ ಚಿನ್ಮಯಾನಂದ್ ಜೈಲುಪಾಲಾಗಿದ್ದಾರೆ.

ಸಂತ್ರಸ್ತ ಯುವತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ನಂತರವೇ ಸರ್ಕಾರ ಕ್ರಮ ತೆಗೆದುಕೊಂಡಿದೆ. ಬಿಜೆಪಿ ಸರ್ಕಾರ ದಪ್ಪ ಚರ್ಮದ ಸರ್ಕಾರ ಎಂದರು. ಅಲ್ಲದೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ಅಂತಿಮವಾಗಿ ಇಂದು ಆರೋಪಿ ಚಿನ್ಮಯಾನಂದ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

Chinmayanand Arrested Only After Survivor Suicide Threat

ಮಾಜಿ ಕೇಂದ್ರ ಸಚಿವರು ಒಂದು ವರ್ಷಗಳ ಕಾಲ ತನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ ಎಂದು ಶೆಹಜಾನ್ಪುರದ ಕಾನೂನು ವಿದ್ಯಾರ್ಥಿನಿ ಆರೋಪಿಸಿದ್ದರು.

ಈ ಸಂಬಂಧ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿ, ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸಿದ ನಂತರವೂ ಆರೋಪಿಯನ್ನು ಬಂಧಿಸದಿರುವುದರ ಬಗ್ಗೆ ಸಂತ್ರಸ್ತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅತ್ಯಾಚಾರವಾಗಿದೆ ಎಂದು ನಂಬಿಸಲು ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕಾ ಎಂದು ಸಂತ್ರಸ್ತೆ ಪ್ರಶ್ನೆ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+