ಕಾಶ್ಮೀರಿ ಉಗ್ರರೊಂದಿಗೆ ಅಗಸ್ಟಾ ಆರೋಪಿ : ನ್ಯಾಯಾಧೀಶರಿಗೆ ಮೈಕಲ್ ಪತ್ರ
ನವದೆಹಲಿ, ಮಾರ್ಚ್ 11 : ಅಗಸ್ಟ್ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಂಧಿತ ಕ್ರಿಶ್ಚಿಯನ್ ಮೈಕಲ್, ಸಿಬಿಐ ವಿಶೇಷ ನ್ಯಾಯಾಧೀಶರಿಗೆ ಪತ್ರ ಬರೆದಿದ್ದು, ಸ್ಥಳಾಂತರಿಸಬೇಕೆಂದು ಕೋರಿದ್ದಾನೆ.
ತಾನಿರುವ ತಿಹಾರಿ ಜೈಲಿನ ವಾರ್ಡ್ 6 ಬಂದೀಖಾನೆಯಲ್ಲಿ 27 ಕಾಶ್ಮೀರಿ ಭಯೋತ್ಪಾದಕರು ಸೇರಿದಂತೆ 160 ಕೈದಿಗಳಿದ್ದಾರೆ. ಅಲ್ಲದೆ, ತಮ್ಮ ವಾರ್ಡ್ ಉಳಿದೆಲ್ಲವುಗಳಿಗಿಂತ ಪ್ರತ್ಯೇಕವಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾನೆ.
ಈ ಕುರಿತು ಸ್ಥಲಾಂತರಿಸಲು ಪತ್ರದೊಂದಿಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಕ್ರಿಶ್ಚಿಯನ್ ಮೈಕಲ್ ನ ವಕೀಲರಿಗೆ ನ್ಯಾಯಾಧೀಶರು ಆದೇಶಿಸಿದ್ದು, ಜೈಲು ಅಧಿಕಾರಿಗಳಿಗೆ ನೋಟೀಸ್ ಕಳಿಸುವುದಾಗಿ ತಿಳಿಸಿದ್ದಾರೆ. ಈ ಪ್ರಕರಣ ಮಂಗಳವಾರ ಮತ್ತೆ ವಿಚಾರಣೆಗೆ ಬರಲಿದೆ.

ಕ್ರಿಶ್ಚಿಯನ್ ಮೈಕಲ್ ನನ್ನು ಮತ್ತೆ ವಿಚಾರಣೆಗೆ ಒಳಪಡಿಸಬೇಕೆಂದು ಜಾರಿ ನಿರ್ದೇಶನಾಲಯ ದೆಹಲಿಯ ಪಟಿಯಾಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತಿಹಾರಿ ಜೈಲು ಅಧಿಕಾರಿಗಳಿಗೆ ಈ ಕುರಿತು ನೋಟೀಸ್ ಜಾರಿ ಮಾಡಲಾಗಿದೆ.
ಕಾಂಗ್ರೆಸ್ ಅಧಿಕಾರಿದಲ್ಲಿದ್ದಾಗ ವಿವಿಐಪಿಗಳ ಸಂಚಾರಕ್ಕೆ ಅನುಕೂಲವಾಗಲೆಂದು ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಯಿಂದ ಹೆಲಿಕಾಪ್ಟರ್ ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈ ಖರೀದಿಯ ಸಮಯದಲ್ಲಿ ಭಾರತದ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಲಂಚ ನೀಡಲೆಂದು ಮತ್ತು ಡೀಲ್ ಕುದುರಿಸಲೆಂದು ದಲ್ಲಾಳಿ ಕ್ರಿಶ್ಚಿಯನ್ ಮೈಕಲ್ ಭಾರೀ ಪ್ರಮಾಣದಲ್ಲಿ ಲಂಚ ಪಡೆದಿದ್ದ.
ಭಾಷಣವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ಇಂಗ್ಲೆಂಡ್ ಮೂಲದ ದಲ್ಲಾಳಿ ಕ್ರಿಶ್ಚಿಯನ್ ಮೈಕಲ್ ಮಾಮಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ಸಂಬಂಧವೇನು ಎಂದು ಪ್ರಶ್ನಿಸಿದ್ದರು. ಮೈಕಲ್ ರಫೇಲ್ ಕಂಪನಿಯ ಸ್ಪರ್ಧಿ ಯೂರೋಫೈಟರ್ ಕಂಪನಿಗಾಗಿ ವಿವಿಐಪಿ ಹೆಲಿಕಾಪ್ಟರ್ ಖರೀದಿಗಾಗಿ ಡೀಲ್ ನಡೆಸಿದ್ದ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications