ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ್ಯಾಯಾಂಗ ಸುಧಾರಣೆಗೆ ಆಗ್ರಹಿಸಿ ಮೋದಿಗೆ ಸಿಜೆಐ ಪತ್ರ

|
Google Oneindia Kannada News

ನವದೆಹಲಿ, ಜೂನ್ 23: ಹೈಕೋರ್ಟ್‌ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಆಗ್ರಹಿಸಿ ಸಿಜೆಐ ರಂಜನ್ ಗೊಗೋಯ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಹೈಕೋರ್ಟ್ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸನ್ನು 65 ಕ್ಕೆ ಏರಿಕೆ ಮಾಡುವುದು ಹಾಗೂ ನ್ಯಾಯಾಧೀಶರ ಸಂಖ್ಯೆಯನ್ನು ಹೆಚ್ಚಳ ಮಾಡುವುದಕ್ಕೆ ಮನವಿ ಮಾಡಿದ್ದಾರೆ.

CJI Ranjan Gogoi write a letter to Prime minister Modi

ನ್ಯಾ. ರಂಜನ್ ಗೊಗೋಯ್ ಅವರು 58,669 ಪ್ರಕರಣಗಳು ಬಾಕಿ ಇದ್ದು, ಹೊಸ ಪ್ರಕರಣಗಳು ಹೆಚ್ಚಾಗುತ್ತಿರುವಂತೆ ಬಾಕಿ ಇರುವ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ನ್ಯಾಯಾಧೀಶರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೆ ಸಕಾಲಿಕವಾಗಿ ನ್ಯಾಯ ವಿಚಾರಣೆ ನಡೆಸಿ, ತೀರ್ಪು ನೀಡಲು ತುಂಬ ಸಹಾಯವಾಗುತ್ತದೆ. ನಮ್ಮ ಈ ಮನವಿಯನ್ನು ಮೊದಲ ಆದ್ಯತೆಯೆಂದು ಪರಿಗಣಿಸಿ ಈಡೇರಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಲವು ವರ್ಷಗಳಿಂದ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸಂವಿಧಾನದ ಆರ್ಟಿಕಲ್ 128 ಹಾಗೂ 224A ಅಡಿಯಲ್ಲಿ ನಿವೃತ್ತ ನ್ಯಾಯಾಧೀಶರುಗಳನ್ನು ಅಧಿಕಾರಾವಧಿಯ ನೇಮಕಾತಿ ಮಾಡಬೇಕೆಂದೂ ಪತ್ರದಲ್ಲಿ ಕೇಳಿದ್ದಾರೆ.

English summary
CJI Ranjan Gogoi wrote a letter to Prime minister Narendra Modi. Chief Justice of India Ranjan Gogoi has seeking to increase the number of judges in the Supreme Court retirement age of high court judges to 65 years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X