ಫ್ಲೈಓರ್‌ನಿಂದ ಹಾರಿ ತಂದೆಯ ಎದುರೇ ಮಗಳು ಆತ್ಮಹತ್ಯೆ

ನವದೆಹಲಿ, ಮಾರ್ಚ್ 14: ಫ್ಲೈಓವರ್‌ನಿಂದ ಹಾರಿ ತಂದೆಯ ಎದುರೇ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ದೆಹಲಿಯಲ್ಲಿ ನಡೆದಿದೆ.

ದೇಶದ ಹಲವೆಡೆ ಕೊರೊನಾ ಭಯದಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರೆ, ಇನ್ನೊಂದೆಡೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ತಾನು ಪರೀಕ್ಷೆ ಚೆನ್ನಾಗಿ ಬರೆದಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ದೆಹಲಿಯ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು ಅದರಲ್ಲಿ ತಾನು ಚೆನ್ನಾಗಿ ಪರೀಕ್ಷೆ ಬರೆದಿಲ್ಲ ಎಂದು ವಿದ್ಯಾರ್ಥಿನಿ ಬೇಸರಗೊಂಡಿದ್ದಾಳೆ. ತಂದೆಯೊಂದಿಗೆ ಕಾಲೇಜಿನಿಂದ ಮನೆಗೆ ತೆರಳುವ ಸಮಯದಲ್ಲಿ ಬಾರ್ಪುಲ್ಲಾ ಬಳಿ ಇರುವ ಫ್ಲೈಓವರ್‌ಹತ್ತಿರ ಕಾರು ನಿಲ್ಲಿಸುವಂತೆ ಕೇಳಿದ್ದಾಳೆ. ಕಾರಿನಿಂದ ಸೀದಾ ಇಳಿದು ಹೋಗಿ ಫ್ಲೈಓವರ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Class 12 Student Commits Suicide Infront Of Her Father

ಬಾಲಕಿಯನ್ನು ಕೂಡಲೇ ಸಫ್ದರ್ಜಂಗ್ ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ದುರಾದೃಷ್ಟವಶಾತ್ ಆಕೆಯ ಪ್ರಾಣವನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಸಂಜೆ 4 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆ ಬಗ್ಗೆ ಕಾಲೇಜಿನ ಆಡಳಿತ ವರ್ಗ ಬೇಸರ ವ್ಯಕ್ತಪಡಿಸಿದೆ.

ತಾನು ಪರೀಕ್ಷೆ ಚೆನ್ನಾಗಿ ಬರೆದಿಲ್ಲ ಎಂದು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+