ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶ ವಿರೋಧಿ ಘೋಷಣೆ, ಕನ್ಹಯ್ಯಗೆ ಕ್ಲೀನ್ ಚಿಟ್ ಸಾಧ್ಯತೆ

ದೇಶ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದಲ್ಲಿ ಜೆಎನ್ಯೂ ವಿದ್ಯಾರ್ಥಿ ಕನ್ಹಯ್ಯ ಕುಮಾರ್ ಗೆ ಕ್ಲೀನ್ ಚಿಟ್ ಸಿಗುವ ಸಾಧ್ಯತೆ ಇದೆ.

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಮಾರ್ಚ್ 1: ದೇಶ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದಲ್ಲಿ ಜೆಎನ್ಯೂ ವಿದ್ಯಾರ್ಥಿ ಕನ್ಹಯ್ಯ ಕುಮಾರ್ ಗೆ ಕ್ಲೀನ್ ಚಿಟ್ ಸಿಗುವ ಸಾಧ್ಯತೆ ಇದೆ.

ಜೆಎನ್ಯುನಲ್ಲಿ ನಡೆದ ಸಂಸತ್ ದಾಳಿ ಅಪರಾಧಿ ಅಫ್ಜಲ್ ಗುರು ಸ್ಮರಣೆ ಕಾರ್ಯಕ್ರಮದಲ್ಲಿ, ಕನ್ಹಯ್ಯ ಕುಮಾರ್ ದೇಶ ವಿರೋಧಿ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು ಕನ್ಹಯ್ಯ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿಕೊಂಡಿದ್ದರು.[ರೋಹಿತ್ ವೇಮುಲ ಪರ ಕನ್ಹಯ್ಯ ಕುಮಾರ್ ಬ್ಯಾಟಿಂಗ್]

Clean chit for Kanaihya Kumar in sedition case?

ಪೊಲೀಸರು ನ್ಯಾಯಾಲಯಕ್ಕೆ ಇನ್ನೂ ಚಾರ್ಚ್ ಶೀಟ್ ಸಲ್ಲಿಸಬೇಕಾಗಿದ್ದು, ತನಿಖೆ ವೇಳೆ ಕನ್ಹಯ್ಯಾ ದೇಶ ವಿರೋಧಿ ಘೋಷಣೆ ಕೂಗಿಲ್ಲ ಎಂದು ತಿಳಿದು ಬಂದಿದೆ. ಘೋಷಣೆ ಕೂಗಿದ ವಿಡಿಯೋಗಳನ್ನು ಪರಿಶೀಲನೆ ಮಾಡಿರುವ ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರು ಅವುಗಳಲ್ಲಿ ಕನ್ಹಯ್ಯ ಧ್ವನಿ ಇಲ್ಲ ಎಂದು ವರದಿಯಲ್ಲಿ ಸ್ಪಷ್ಟಪಡಿಸಿದ್ದಾರೆ.['ಕನ್ಹಯ್ಯಾ ಕುಮಾರ್ ದೇಶ ವಿರೋಧಿ ಘೋಷಣೆ ಕೂಗಿಲ್ಲ']

ಇನ್ನು ಘೋಷಣೆ ಕೂಗಿದ್ದಾರೆ ಎನ್ನಲಾದ 9 ವಿದ್ಯಾರ್ಥಿಗಳನ್ನು ವಿಡಿಯೋದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇವರಲ್ಲಿ ಉಮರ್ ಖಾಲಿದ್, ಅನಿರ್ಬನ್ ಭಟ್ಟಾಚಾರ್ಯ ಕೂಡಾ ಇದ್ದಾರೆ. ಹಾಗಂತ ಹೊರಗಿನವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು, ಅವರು ಈ ದೇಶವಿರೋಧಿ ಘೋಷಣೆ ಕೂಗಿದ್ದಾರೆ ಎಂಬ ವಾದವನ್ನೂ ಪೊಲೀಸರು ಪೂರ್ತಿಯಾಗಿ ತಳ್ಳಿ ಹಾಕಿಲ್ಲ. ಕಾಶ್ಮೀರಿಗರು ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆ ಕೂಗಿರಬಹುದು ಎಂದೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

English summary
Kanaihya Kumar is likely to get a clean chit in the sedition case which was filed against him by the Delhi police. A case was filed against Kumar after it was alleged that he had raised anti-India slogans during at an event in JNU to mark the death anniversary of Afzal Guru who was sentenced to death in the Parliament attack case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X