ದೆಹಲಿ: ಎಂಸಿಡಿಗೆ ಧ್ವಂಸ ಕಾರ್ಯಾಚರಣೆಯ ವರದಿ ಕೇಳಿದ ಕೇಜ್ರಿವಾಲ್ ಸರ್ಕಾರ
ದೆಹಲಿ, ಮೇ 18: ಏಪ್ರಿಲ್ 1 ರಿಂದ ನಗರದಾದ್ಯಂತ ನಡೆಸುತ್ತಿರುವ ಧ್ವಂಸ ಕಾರ್ಯಾಚರಣೆಗಳ ಕುರಿತು ಬಿಜೆಪಿ ಆಡಳಿತದ ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ)ನಿಂದ ವಿವರವಾದ ವರದಿಯನ್ನು ದೆಹಲಿ ಸರ್ಕಾರ ಕೇಳಿದೆ. ಶಾಹೀನ್ ಬಾಗ್, ಜಹಾಂಗೀರ್‌ಪುರಿ ಮದನ್‌ಪುರ್ ಖಾದರ್, ನ್ಯೂ ಫ್ರೆಂಡ್ಸ್ ಕಾಲೋನಿ, ಮಂಗೋಲ್‌ಪುರಿ, ರೋಹಿಣಿ, ಗೋಕುಲಪುರಿ, ಲೋಧಿ ಕಾಲೋನಿ, ಜನಕಪುರಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಮೂರು ನಾಗರಿಕ ಸಂಸ್ಥೆಗಳು ಅತಿಕ್ರಮಣ ವಿರೋಧಿ ಅಭಿಯಾನಗಳನ್ನು ನಡೆಸಿದ ಕೆಲವು ದಿನಗಳ ನಂತರ ದೆಹಲಿ ಸರ್ಕಾರ ವರದಿ ಕೇಳಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ತಮ್ಮ ನಿವಾಸದಲ್ಲಿ ಎಲ್ಲಾ ಎಎಪಿ ಶಾಸಕರೊಂದಿಗೆ ಸಭೆ ನಡೆಸಿ ಈ ಬಗ್ಗೆ ನಿರ್ಧರಿಸಿದ್ದಾರೆ. ಜೊತೆಗೆ ಬಿಜೆಪಿ ಆಡಳಿತದ ಪುರಸಭೆಗಳ ಇಂತಹ ಧ್ವಂಸ ಕಾರ್ಯಾಚರಣೆಗಳನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ. ದೆಹಲಿಯಲ್ಲಿನ ಧ್ವಂಸ ಕಾರ್ಯಾಚರಣೆಗಳು 63 ಲಕ್ಷ ಜನರನ್ನು ನಿರಾಶ್ರಿತರನ್ನಾಗಿ ಮಾಡುತ್ತದೆ ಮತ್ತು ಇದು ಸ್ವತಂತ್ರ ಭಾರತದಲ್ಲಿ "ದೊಡ್ಡ ವಿನಾಶ" ಎಂದು ಕೇಜ್ರಿವಾಲ್ ಹೇಳಿದ್ದಾರೆ ಮತ್ತು ಬಿಜೆಪಿ ಅಧಿಕಾರವನ್ನು ದುರುಪಯೋಗ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ (ಮೇ 16) ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರೊಂದಿಗೆ ಸಿವಿಲ್ ಲೈನ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ರಾಷ್ಟ್ರ ರಾಜಧಾನಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನದ ಕುರಿತು ಸಭೆ ನಡೆಸಿದರು. ಎಂಸಿಡಿಯಲ್ಲಿ ಬಿಜೆಪಿಯ 15 ವರ್ಷಗಳ ದುರಾಡಳಿತ, ಅವ್ಯವಸ್ಥೆ ಮತ್ತು ರಾಷ್ಟ್ರ ರಾಜಧಾನಿಯಲ್ಲಿನ ಅಕ್ರಮ ಆಸ್ತಿಯ ತೆರವು ಕಾರ್ಯಚರಣೆಯ ಬಗ್ಗೆ ಕಟುವಾಗಿ ಟೀಕಿಸಿದ ಅವರು, ದೆಹಲಿಯಲ್ಲಿ ಅಕ್ರಮ ಕಟ್ಟಡ ತೆರವು ಕಾರ್ಯಚರಣೆ ಯೋಜಿತ ರೀತಿಯಲ್ಲಿ ಮಾಡಲಾಗಿಲ್ಲ ಎಂದು ದೂರಿದ್ದಾರೆ.

"ದೆಹಲಿಯ ಶೇಕಡಾ 80ಕ್ಕಿಂತ ಹೆಚ್ಚು ಪ್ರದೇಶವನ್ನು ಅಕ್ರಮ ಮತ್ತು ಅತಿಕ್ರಮಣ ಎಂದು ಕರೆಯಬಹುದು, ಅಂದರೆ ನೀವು ಶೇಕಡಾ 80 ರಷ್ಟು ದೆಹಲಿಯನ್ನು ನಾಶಪಡಿಸುತ್ತೀರಾ?" ಎಂದು ಕೇಜ್ರಿವಾಲ್ ಕೇಸರಿ ಪಕ್ಷವನ್ನು ಆನ್‌ಲೈನ್ ಬ್ರೀಫಿಂಗ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.
'ಬುಲ್ಡೋಜರ್‌ಗಳೊಂದಿಗೆ ಕಾಲೋನಿಗಳನ್ನು ತಲುಪಿ ಹಲವು ಅಂಗಡಿ ಮತ್ತು ಮನೆಯನ್ನು ಧ್ವಂಸ ಮಾಡುತ್ತಿದ್ದಾರೆ, ಜನರು ಕಟ್ಟಡವನ್ನು ಅಕ್ರಮವಾಗಿಲ್ಲ ಎಂದು ಸಾಬೀತುಪಡಿಸಲು ಕಾಗದಗಳನ್ನು ತೋರಿಸಿದರೂ ಅವರು ಅವುಗಳನ್ನು ಪರಿಶೀಲಿಸುವುದಿಲ್ಲ' ಎಂದು ಅವರು ಕಿಡಿ ಕಾರಿದ್ದಾರೆ.

ಜೊತೆಗೆ ಎಂಸಿಡಿಯನ್ನು ಟೀಕಿಸಿದ ಅವರು ದೆಹಲಿಯಲ್ಲಿ ಅಕ್ರಮವೆಂದು ಪರಿಗಣಿಸಲಾದ 63 ಲಕ್ಷ ಜನರ ಅಂಗಡಿಗಳು ಮತ್ತು ಮನೆಗಳನ್ನು ಬುಲ್ಡೋಜರ್‌ಗಳು ಧ್ವಂಸಗೊಳಿಸಿದರೆ, ಅದು ಸ್ವತಂತ್ರ ಭಾರತದಲ್ಲಿ "ದೊಡ್ಡ ವಿನಾಶ" ಎಂದು ಕರೆದಿದ್ದಾರೆ. ಅತಿಕ್ರಮಣ ವಿರೋಧಿ ಆಂದೋಲನ ನಡೆಸುತ್ತಿರುವ ರೀತಿಗೆ ಪಕ್ಷವು ವಿರುದ್ಧವಾಗಿದೆ. ಸುಮಾರು 50 ಲಕ್ಷ ಜನರು ಅನಧಿಕೃತ ಕಾಲೋನಿಗಳಲ್ಲಿದ್ದಾರೆ, 10 ಲಕ್ಷ ಜನರು 'ಜುಗ್ಗಿ'ಗಳಲ್ಲಿದ್ದಾರೆ. ಇವರ ಕಾರ್ಯಚರಣೆ ಮೂಲ ನಕ್ಷೆಗಳಿಗೆ ಅನುಗುಣವಾಗಿಲ್ಲ ಎಂದು ದೂರಿದ್ದಾರೆ.
"ಅಲ್ಲಿಗೆ ಅವರು 63 ಲಕ್ಷ ಜನರ ಮನೆಗಳು ಮತ್ತು ಅಂಗಡಿಗಳನ್ನು ಬುಲ್ಡೋಜರ್‌ನಿಂದ ಕೆಡವಿದ್ದಾರೆ. ಇದು ಸ್ವತಂತ್ರ ಭಾರತದಲ್ಲಿ ಸಂಭವಿಸುವ ಅತಿದೊಡ್ಡ ವಿನಾಶವಾಗಿದೆ" ಎಂದು ಅವರು ಕಿಡಿ ಕಾರಿದ್ದಾರೆ. ಆಮ್ ಆದ್ಮಿ ಪಕ್ಷವು ತೆರವು ವಿರುದ್ಧವಾಗಿದೆ ಮತ್ತು ದೆಹಲಿ ಸುಂದರವಾಗಿ ಕಾಣಬೇಕೆಂದು ಬಯಸುತ್ತದೆ. 63 ಲಕ್ಷ ಜನರ ಮನೆ ಮತ್ತು ಅಂಗಡಿಗಳನ್ನು ಧ್ವಂಸಗೊಳಿಸುವುದನ್ನು ಸಹಿಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಎಎಪಿ ಅತಿಕ್ರಮಣ ಸಮಸ್ಯೆಯನ್ನು ಪರಿಹರಿಸುತ್ತದೆ ಮತ್ತು ಅನಧಿಕೃತ ಕಾಲೋನಿಗಳಲ್ಲಿ ವಾಸಿಸುವ ಜನರು ಮಾಲೀಕತ್ವದ ಹಕ್ಕುಗಳನ್ನು ಪಡೆಯುತ್ತಾರೆ ಎಂದು ಅವರು ಜನರಿಗೆ ಭರವಸೆ ನೀಡಿದರು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications