Breaking: ಮೋದಿ ರಾಜ್ಯದ ಮೇಲೆ ಕೇಜ್ರಿವಾಲ್ ಕಣ್ಣು; ಆಗಸ್ಟ್ 1ಕ್ಕೆ ಭೇಟಿ

ನವದೆಹಲಿ, ಜುಲೈ 28; ದೆಹಲಿ, ಪಂಜಾಬ್ ಬಳಿಕ ಗುಜರಾತ್‌ ಮೇಲೆ ಕಣ್ಣಿಟ್ಟಿರುವ ಅಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಗಸ್ಟ್ 1 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ.

ಇತ್ತಿಚೆಗಷ್ಟೇ ಗುಜರಾತ್‌ನ ಸೂರತ್‌ನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ್ದರು. ಈಗ ಮತ್ತೆ ಆಗಸ್ಟ್ 1 ರಂದು ಸೋಮನಾಥದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅರವಿಂದ್ ಕೇಜ್ರಿವಾಲ್ ಮಾತನಾಡಲಿದ್ದಾರೆ.

ಈ ವರ್ಷದ ಡಿಸೆಂಬರ್‌ನಲ್ಲಿ ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಬಿಜೆಪಿ ಭದ್ರಕೋಟೆಯಾಗಿರುವ ಗುಜರಾತ್‌ನಲ್ಲಿ ಅಧಿಕಾರ ಹಿಡಿಯಲು ಆಮ್ ಆದ್ಮಿ ಪಕ್ಷ ಕಸರತ್ತು ನಡೆಸುತ್ತಿದೆ. ದೆಹಲಿಯ ನಂತರ ಪಂಜಾಬ್‌ನಲ್ಲಿ ಅಧಿಕಾರ ಹಿಡಿದಿರುವುದು ಆಪ್‌ಗೆ ಮತ್ತಷ್ಟು ಬಲ ನೀಡಿದೆ.

Delhi CM Arvind Kejriwal will visit Gujarat on August 1

ಈಗಾಗಲೇ ಆಪ್‌ ಗುಜರಾತ್ ರಾಜ್ಯದ ಮತದಾರರಿಗೆ ಆಪ್ ಬಂಪರ್ ಆಫರ್ ನೀಡಿದೆ. ಗುಜರಾತ್‌ನಲ್ಲಿ ಆಪ್ ಅಧಿಕಾರಕ್ಕೆ ಬಂದರೆ ತಿಂಗಳಿಗೆ 300 ಯುನಿಟ್ ಉಚಿತ ವಿದ್ಯುತ್ ನೀಡುವುದಲ್ಲದೆ ದಿನದ 24 ಗಂಟೆಯೂ ವಿದ್ಯುತ್ ಪೂರೈಕೆ ಮಾಡುವುದಾಗಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್‌ ಕೇಜ್ರಿವಾಲ್ ಘೋಷಿಸಿದ್ದಾರೆ.

ಆಗಸ್ಟ್ ತಿಂಗಳ ಒಂದನೇ ತಾರೀಖಿನಂದು ಸೋಮನಾಥಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಆಗಸ್ಟ್ 6, 7 ಮತ್ತು 10 ರಂದು ಕೂಡ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ.

Delhi CM Arvind Kejriwal will visit Gujarat on August 1

ಜುಲೈ ತಿಂಗಳಲ್ಲಿ ಎರಡು ಬಾರಿ ಗುಜರಾತ್‌ಗೆ ಭೇಟಿ ನೀಡಿರುವ ಕೇಜ್ರಿವಾಲ್, ಉಚಿತ ವಿದ್ಯುತ್ ನೀಡುವುದು ಮಾತ್ರವಲ್ಲದೆ, ಡಿಸೆಂಬರ್ 31, 2021 ರ ಮೊದಲು ಎಲ್ಲಾ ಬಾಕಿ ಇರುವ ವಿದ್ಯುತ್ ಬಿಲ್‌ಗಳನ್ನು ರದ್ದುಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ. ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಚುನಾವಣೆ ವೇಳೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಡಿಸೆಂಬರ್‌ನಲ್ಲಿ ನಡೆಯಲಿರುವ ಗುಜರಾತ್ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಉಚಿತ ವಿದ್ಯುತ್ ಪ್ರಮುಖ ಚುನಾವಣಾ ವಿಷಯವಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+