• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರೈಲ್ವೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಮನವಿ

|
Google Oneindia Kannada News

ನವದೆಹಲಿ, ಸೆ. 08: ಕರ್ನಾಟಕದಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ರೈಲ್ವೆ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯಗತಗೊಳಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ನಂತರ ಮಾಹಿತಿ ನೀಡಿದ್ದಾರೆ. "ಕಲಬುರ್ಗಿಯಲ್ಲಿ ರೈಲ್ವೆ ಡಿವಿಜನ್ ಸ್ಥಾಪಿಸುವ ಬೇಡಿಕೆ ಇದೆ. ಇದರಿಂದ ಆ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಹುಬ್ಬಳ್ಳಿ- ಅಂಕೋಲಾ ರೈಲ್ವೇ ಮಾರ್ಗ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದೆ. ಈ ಪ್ರಕರಣ ಹೈಕೋರ್ಟಿನಲ್ಲಿದೆ. ಹೊಸ ಡಿ.ಪಿ.ಆರ್ ಮಾಡಲಾಗಿದ್ದರೂ ಅದನ್ನು ಪ್ರಶ್ನಿಸಲಾಗಿದೆ. ಆದಷ್ಟು ಬೇಗ ಆ ತಡೆಯಾಜ್ಞೆಯನ್ನು ತೆರವುಗೊಳಿಸಲು ಪ್ರಯತ್ನಿಸಿ ಕಾಮಗಾರಿ ಪ್ರಾರಂಭಿಸುವಂತೆ ಮನವಿ ಮಾಡಿದ್ದೇನೆ" ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

"ಬೆಂಗಳೂರು ಸಬ್ಅರ್ಬನ್ ರೈಲ್ವೆ ಯೋಜನೆಯನ್ನು ಆದಷ್ಟು ಬೇಗನೆ ಜಾರಿಗೆ ತರಬೇಕು. ಇದಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಕೆ-ರೈಡ್ ಮತ್ತು ಕರ್ನಾಟಕದ ನಡುವೆ ರಿಯಾಯಿತಿ ಒಪ್ಪಂದ ಆಗಬೇಕು. ಈ ಕುರಿತು ಹಿರಿಯ ಅಧಿಕಾರಿಗಳ ಜತೆ ಚರ್ಚೆ ಮಾಡಿ ತ್ವರಿತಗತಿಯಲ್ಲಿ ಮುಗಿಸುವಂತೆ ಮನವಿ ಮಾಡಿದ್ದೇನೆ" ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಭೇಟಿ ಸಂದರ್ಭದಲ್ಲಿ ಉಪಸ್ಥಿತರಿದ್ದರು.

English summary
Chief Minister Basavaraj Bommai said that a request has been made to implement the railway development projects already underway in Karnataka. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X