ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸಚಿವರ ಬಳಿ ಕಲ್ಲಿದ್ದಲು, ರೈಲು ಮಾರ್ಗಕ್ಕೆ ಕುಮಾರಸ್ವಾಮಿ ಬೇಡಿಕೆ

|
Google Oneindia Kannada News

ನವದೆಹಲಿ, ಡಿಸೆಂಬರ್ 27: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಕೇಂದ್ರ ಕಲ್ಲಿದ್ದಲು ಮತ್ತು ರೈಲ್ವೆ ಸಚಿವ ಪಿಯುಷ್ ಗೋಯಲ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಅವರು ರಾಜ್ಯದ ಆರ್‌ಟಿಪಿಎಸ್‌, ಬಳ್ಳಾರಿ ಉಷ್ಣವಿದ್ಯುತ್ ಸ್ಥಾವರ ಹಾಗೂ ಯರಮರಸ್ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಘಟಕಗಳನ್ನು ಶೀಘ್ರವೇ ಹಂಚಿಕೆ ಮಾಡುವಂತೆ ಮನವಿ ಮಾಡಿದರು.

ಕಲ್ಲಿದ್ದಲು ಕೊರತೆ: ಕೇಂದ್ರ ಸಚಿವರಿಗೆ ಕುಮಾರಸ್ವಾಮಿ ಟ್ವೀಟ್‌ ಮನವಿಕಲ್ಲಿದ್ದಲು ಕೊರತೆ: ಕೇಂದ್ರ ಸಚಿವರಿಗೆ ಕುಮಾರಸ್ವಾಮಿ ಟ್ವೀಟ್‌ ಮನವಿ

ರಾಯಚೂರಿನ ಆರ್‌ಟಿಪಿಎಸ್‌ ನಲ್ಲಿ ಕಲ್ಲಿದ್ದಲ್ಲು ಸಂಗ್ರಹ ಕಡಿಮೆ ಇರುವ ಹಿನ್ನಲೆಯಲ್ಲಿ ಕೂಡಲೇ ಕಲ್ಲಿದ್ದಲು ಒದಗಿಸುವಂತೆ ವೆಸ್ಟರ್ನ್ ಕೋಲ್‌ ಫೀಲ್ಡ್ಸ್‌ ಲಿಮಿಟೆಡ್ ಹಾಗೂ ಕೋಲ್ ಇಂಡಿಯಾ ಲಿ. ಗಳಿಗೆ ಸೂಚನೆ ನೀಡುವಂತೆಯೂ ಮನವಿ ಮಾಡಿದರು.

CM Kumaraswamy met central minister Piyush Goyal

ಶತಾಬ್ದಿಗೆ ಸೆಡ್ಡು ಹೊಡೆಯಲು ಹಳಿಗಿಳಿದ ಇಂಜಿನ್ ರಹಿತ 'ಟ್ರೈನ್ 18'ಶತಾಬ್ದಿಗೆ ಸೆಡ್ಡು ಹೊಡೆಯಲು ಹಳಿಗಿಳಿದ ಇಂಜಿನ್ ರಹಿತ 'ಟ್ರೈನ್ 18'

ಈ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕ ಭಾಗದ ಅತ್ಯಂತ ಹಿಂದುಳಿದ ಬೀದರ್‌ನಿಂದ ನಾಂದೇಡ್‌ ರೈಲ್ವೆ ಸಂಪರ್ಕ ಕಲ್ಪಿಸುವಂತೆಯೂ ಮನವಿ ಮಾಡಿದರು. ನಾಂದೇಡ್ ಯಾತ್ರಾರ್ಥಿ ಮಾರ್ಗದ ವ್ಯಾಪ್ತಿಯಲ್ಲಿರುವ ಬೀದರ್ ಸಿಖ್ಖರ ಯಾತ್ರಾ ಸ್ಥಳವೂ ಹೌದು. ಬೀದರ್ -ಔರಾದ್- ದೀಗುಲ-ನಾಂದೇಡ್ 154 ಕಿ.ಮೀ. ಉದ್ದದ ಹೊಸ ರೈಲು ಮಾರ್ಗ ಕುರಿತ ಸಮೀಕ್ಷಾ ವರದಿಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಲಾಗಿದೆ. ಈ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸುವಂತೆಯೂ ಮುಖ್ಯಮಂತ್ರಿಗಳು ಸಚಿವ ಪಿಯುಷ್ ಗೋಯಲ್ ಅವರಿಗೆ ಮನವಿ ಮಾಡಿದರು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

English summary
CM Kumaraswamy and Deve Gowda met central coal and railway minister Piyush Goyal today in New Delhi. Kumaraswamy demand for many projects.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X