ದೆಹಲಿಯಲ್ಲಿ ಕುಮಾರಸ್ವಾಮಿ ಹಲವರ ಭೇಟಿ, ಹಲವು ಚರ್ಚೆ, ನೆರವಿಗೆ ಮನವಿ
ನವದೆಹಲಿ, ಆಗಸ್ಟ್ 30: ಕೊಡಗಿನ ಪ್ರವಾಹಕ್ಕೆ ನೆರವು ಕೇಳಲು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಚರ್ಚೆಗೆಂದು ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಹಲವು ಸಚಿವರನ್ನು ಭೇಟಿಯಾಗಿ ರಾಜ್ಯದ ಕುರಿತು ಚರ್ಚೆ ನಡೆಸಿದರು.
ಕೊಡಗು ಪ್ರವಾಹ, ಸಾಲಮನ್ನಾ, ಸಾಲ ಋಣಮುಕ್ತ ಸುಗ್ರೀವಾಜ್ಞೆ, 100 ದಿನ ಪೂರೈಸಿದ ಸಮ್ಮಿಶ್ರ ಸರ್ಕಾರ ಹೀಗೆ ಹಲವು ಕಾರಣಗಳನ್ನು ಇಟ್ಟುಕೊಂಡು ದೆಹಲಿಗೆ ತೆರಳಿದ್ದ ಸಿಎಂ ಹಲವು ಮಂತ್ರಿಗಳನ್ನು ಇಂದು ಭೇಟಿ ಮಾಡಿದರು.
ಮುಖ್ಯಮಂತ್ರಿ ಅವರ ಜೊತೆಗೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಸಚಿವರಾದ ಆರ್.ವಿ.ದೇಶಪಾಂಡೆ, ಬಂಡೆಪ್ಪ ಕಾಶೆಂಪುರ ಅವರುಗಳು ಇದ್ದರು.

ರಾಷ್ಟ್ರಪತಿ ಭೇಟಿ
ರಾಷ್ಟ್ರಪತಿ ರಮಾನಂದ ಕೋವಿಂದ್ ಅವರನ್ನು ಭೇಟಿಯಾದ ಕುಮಾರಸ್ವಾಮಿ, ಋಣಮುಕ್ತ ಪರಿಹಾರ ಸುಗ್ರೀವಾಜ್ಞೆ ಸಾಧಕ ಬಾಧಕಗಳ ಬಗ್ಗೆ ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು, ಸುಗ್ರೀವಾಜ್ಞೆಗೆ ಸಮ್ಮತಿ ಸೂಚಿಸುವಂತೆ ರಾಷ್ಟ್ರಪತಿಗೆ ಮನವಿ ಮಾಡಿದರು.

ಗೃಹ ಸಚಿವರಿಗೆ ಮನವಿ
ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಮತ್ತು ಸಚಿವರು ಪ್ರವಾಹದಿಂದ ರಾಜ್ಯದಲ್ಲಿ ಆಗಿರುವ ಹಾನಿಯ ಬಗ್ಗೆ ವರದಿ ಸಲ್ಲಿಸಿ ನೆರವಿಗೆ ಮನವಿ ಮಾಡಿದರು. ಅಷ್ಟೆ ಅಲ್ಲದೆ ಗೃಹ ಇಲಾಖೆ ನವೀಕರಣಕ್ಕೆ ಮನವಿ ಮಾಡಿದರು ಮತ್ತು ಪ್ರವಾಹ ಪರಿಸ್ಥಿತಿಗೆ ರಾಜ್ಯ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ರಾಜ್ಯ ಸಚಿವರ ಭೇಟಿ
ಪ್ರಧಾನ ಮಂತ್ರಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿ ಕರ್ನಾಟಕದ ನೆರೆ ಹಾಗೂ ಬರ ಪರಿಸ್ಥಿತಿ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ಇದ್ದರು.

ರಾಹುಲ್ ಗಾಂಧಿ ಭೇಟಿ
ಸಮ್ಮಿಶ್ರ ಸರ್ಕಾರ 100 ದಿನ ಪೂರೈಸಿದ ಬೆನ್ನಲ್ಲೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನೂ ಸಹ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭೇಟಿ ಮಾಡಿ ಸರ್ಕಾರದ ಬಗ್ಗೆ ಚರ್ಚೆ ನಡೆಸಿದರು. ರಾಹುಲ್ ಗಾಂಧಿ ಅವರು ಸರ್ಕಾರದ ಕಾರ್ಯಗಳ ಬಗ್ಗೆ ಮೆಚ್ಚುಗೆ ಸೂಚಿಸಿದರು ಎಂದು ಎಚ್‌ಡಿಕೆ ಈ ಸಂದರ್ಭದಲ್ಲಿ ಹೇಳಿದ್ದಾರೆ.

ಮೋದಿ ಭೇಟಿ ಇಲ್ಲ
ದೆಹಲಿಗೆ ತೆರಳಿದ್ದ ಕುಮಾರಸ್ವಾಮಿ ಅವರು ಮೋದಿ ಅವರನ್ನು ಭೇಟಿ ಮಾಡುತ್ತಾರೆ ಎಂದು ಎಣಿಸಲಾಗಿತ್ತು, ಮೋದಿ ಅವರು ನೇಪಾಳ ಪ್ರವಾಸದಲ್ಲಿರುವ ಕಾರಣ ಮೋದಿ ಅವರ ಭೇಟಿ ಸಾಧ್ಯವಾಗಿಲ್ಲ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications