ಸಾಲ ಮನ್ನಾ ಮಾಡಿದ ಬೆನ್ನಲ್ಲೇ ಎಚ್ಡಿಕೆ ದೆಹಲಿಗೆ ಹೊರಟಿದ್ದೇಕೆ?
Recommended Video

ಬೆಂಗಳೂರು, ಜು.17: ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇಂದು(ಜು.17)ರಂದು ದೆಹಲಿಗೆ ತೆರಳಲಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತು ಹಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ.
ಮಂಗಳವಾರ ಕೇಂದ್ರ ಆಹಾರ ಸಚಿವ ರಾಮ್‌ವಿಲಾಸ್ ಪಾಸ್ವಾನ್, ಕೇಂದ್ರ ರಸ್ತೆ ಸಾರಿಗೆ ಸಚಿವ ಮತ್ತು ಹೆದ್ದಾರಿಗಳು ಹಾಗೂ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಬುಧವಾರ (ಜು.18)ರಂದು ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರ ಜತೆ ಸಭೆ ನಡೆಸಲಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಹಿನ್ನೆಲೆಯಲ್ಲಿ ರಾಜ್ಯದ ಹಿತಾಸಕ್ತಿ ರಕ್ಷಣೆ ತೀರ್ಪು ಇನ್ನಿತರೆ ವಿಚಾರಗಳ ಕುರಿತು ಸಮಾಲೋಚನೆ ನಡೆಯಲಿದೆ. ಅದಕ್ಕೂ ಮುನ್ನ ಬುಧವಾರ ಬೆಳಗ್ಗೆ ಸಂಸದರೊಂದಿಗೆ ಸಭೆ ನಡೆಯಲಿದೆ. ಈ ಕುರಿತು ಈಗಾಗಲೇ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದ್ದಾರೆ.

ಕಾವೇರಿ ವಿಚಾರದಲ್ಲಿ ರಾಜ್ಯದ ಹೋರಾಟಕ್ಕೆ ಸಂಸದರ ಒಗ್ಗಟ್ಟಿನ ಬೆಂಬಲ ಪಡೆಯುವುದು ಒಳಗೊಂಡು ಏನೆಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸಬೇಕು ಎಂಬುದರ ಕುರಿತು ದೇವೇಗೌಡರಿಂದ ಮಾರ್ಗದರ್ಶನ ಪಡೆದುಕೊಂಡಿದ್ದಾರೆ.
ಜು.19ರಂದು ಹಾರಂಗಿಗೆ ಬಾಗಿನ: ಗುರುವಾರ ದೆಹಲಿ ಪ್ರವಾದಿಂದ ಮರಳಲಿರುವ ಕುಮಾರಸ್ವಾಮಿ ಅದೇ ದಿನ ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಪ್ರವಾಸಕ್ಕೆ ತೆರಳಲಿದ್ದಾರೆ, ಗುರುವಾರ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.











Click it and Unblock the Notifications