ಸಿಎಂ ಆದ ಬಳಿಕ ಮೊದಲಬಾರಿಗೆ ಮೋದಿಯ ಭೇಟಿಯಾದ ಬಿಎಸ್‌ವೈ

Recommended Video

      ಸಿ ಎಂ ಆದ ನಂತರ ಮೊದಲ ಬಾರಿಗೆ ಮೋದಿನ ಭೇಟಿ ಮಾಡಿದ ಬಿ ಎಸ್ ಯಡಿಯೂರಪ್ಪ

      ನವದೆಹಲಿ, ಆಗಸ್ಟ್ 06: ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆದರು.

      ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಯಡಿಯೂರಪ್ಪ ರಾಜ್ಯದ ನೀರಾವರಿ ಯೋಜನೆಗಳು ಮತ್ತು ಇತರ ವಿಷಯಗಳ ಕುರಿತು ಚರ್ಚಿಸಿದರು.

      ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2ರ ವರದಿ ಹಾಗೂ ಮಹಾದಾಯಿ ಜಲ ವಿವಾದ ನ್ಯಾಯಾಧಿಕರಣದ ವರದಿಗಳನ್ನು ಗಜೆಟ್ ಅಧಿಸೂಚನೆ ಹೊರಡಿಸುವಂತೆ ಮತ್ತು ಮೇಕೆದಾಟು ಕುಡಿಯುವ ನೀರು ಕಂ ಬ್ಯಾಲೆನ್ಸಿಂಗ್ ರಿಸರ್ವಯರ್ ಯೋಜನೆಯ ಡಿಪಿಆರ್ ಅನುಮೋದಿಸುವಂತೆ ಮನವಿ ಮಾಡಿದರು.

      CM Yeddyurappa met Narendra Modi in New Delhi

      ಜೊತೆಗೆ, ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ, ಆರ್ಥಿಕ ನೆರವು ನೀಡುವಂತೆಯೂ ಮನವಿ ಮಾಡಿದರು. ಇದಲ್ಲದೆ, ಹುಬ್ಬಳ್ಳಿ-ಧಾರವಾಡದಲ್ಲಿ ಅಖಿಲ ಭಾರತ ವೈದ್ಯ ವಿಜ್ಞಾನ ಸಂಸ್ಥೆ ಸ್ಥಾಪಿಸುವಂತೆ ಕೋರಿದರು.

      ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಪ್ರಲ್ಹಾದ ಜೋಶಿ, ಶಾಸಕರಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಗೋವಿಂದ ಎಂ ಕಾರಜೋಳ ಮತ್ತು ಮುಖ್ಯಮಂತ್ರಿಯವರ ಸಲಹೆಗಾರ ಎಂ. ಲಕ್ಷ್ಮೀನಾರಾಯಣ ಉಪಸ್ಥಿತರಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+