ದೆಹಲಿಯಲ್ಲಿ ಕಾಂಗ್ರೆಸ್- ಎಎಪಿ ಮೈತ್ರಿ: ಕೇಜ್ರಿವಾಲ್ ಗೆ ಶೀಲಾ ತಪರಾಕಿ
ನವದೆಹಲಿ, ಫೆಬ್ರವರಿ 21: ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮೈತ್ರಿ ಮಾಡಿಕೊಳ್ಳಬಹುದು ಎಂಬ ವದಂತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರಿಂದ್ ಕೇಜ್ರಿವಾಲ್ ನೀಡಿದ ಹೇಳಿಕೆ ಕಾಂಗ್ರೆಸ್ಸಿಗರ ಕಣ್ಣು ಕೆಂಪಾಗಿಸಿದೆ.
ದೆಹಲಿಯ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ಅವರು ಈ ಕುರಿತು ಪ್ರತಿಕ್ರಿಯೆ ನೀಡಿ, "ಮೈತ್ರಿ ಬಗ್ಗೆ ಕೇಜ್ರಿವಾಲ್ ಅವರು ಕಾಂಗ್ರೆಸ್ಸಿಗರೊಂದಿಗೆ ಚರ್ಚಿಸಿರುವುದಾಗಿ ಹೇಳಿದ್ದಾರೆ, ಅದಕ್ಕೆ ಕಾಂಗ್ರೆಸ್ಸೇ ಒಪ್ಪಿಲ್ಲ ಎಂದಿದ್ದಾರೆ. ಅವರು ಯಾಕೆ ಇಂಥ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಏಕೆಂದರೆ ಮೈತ್ರಿ ಬಗ್ಗೆ ಅವರು ನಮ್ಮ ಯಾರೊಂದಿಗೂ ಮಾತುಕತೆಯನ್ನೇ ನಡೆಸಿಲ್ಲ" ಎಂದು ಶೀಲಾ ದೀಕ್ಷಿತ್ ಹೇಳಿದರು.

2019 ರ ಲೋಕಸಭಾ ಚುನಾವಣೆಯಲ್ಲಿ ಮಹಾಘಟಬಂಧನದ ಭಾಗವಾಗಿ ಗುರುತಿಸಿಕೊಂಡಿರುವ ಕಾರಣ, ಎಎಪಿಯು ದೆಹಲಿಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎನ್ನಲಾಗುತ್ತಿದೆ. ಈ ವದಂತಿಗೆ ಪ್ರತಿಕ್ರಿಯೆ ನೀಡಿದ್ದ ಕೇಜ್ರಿವಾಲ್, 'ನಾನು ಮೈತ್ರಿ ಬಗ್ಗೆ ಕಾಂಗ್ರೆಸ್ ನ ಮನವೊಲಿಸುವ ಪ್ರಯತ್ನ ಮಾಡಿದ್ದೆ. ಆದರೆ ಅದು ನನ್ನ ಮಾತನ್ನು ಅರ್ಥಮಾಡಿಕೊಳ್ಳುತ್ತಿಲ್ಲ' ಎಂದಿದ್ದರು.












Click it and Unblock the Notifications