ದೆಹಲಿಗೆ ಸಿದ್ದರಾಮಯ್ಯ, ಸಂಪುಟ ವಿಸ್ತರಣೆ ಆಗುತ್ತಾ?

ನವದೆಹಲಿ, ಡಿ. 27 : ಐದು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ್ದಾರೆ. ಕರ್ನಾಟಕದ ರಾಜಕೀಯ ವಿದ್ಯಮಾನಗಳ ಕುರಿತು ಸಿದ್ದರಾಮಯ್ಯ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಕಾಂಗ್ರೆಸ್ ಸಿಎಂಗಳ ಸಭೆ ಕರೆದಿದ್ದಾರೆ. ಸಭೆಯಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಆಗಮಿಸಿದ್ದಾರೆ. ಲೋಕಸಭೆ ಚುನಾವಣೆಗೆ ಸಿದ್ಧತೆಗಳ ಕುರಿತು ಶುಕ್ರವಾರದ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆಯುವ ಸಾಧ್ಯತೆ ಇದೆ.

Siddaramaiah

ಸಿಎಂ ಸಿದ್ದರಾಮಯ್ಯ ಸಭೆಯ ನಂತರ ರಾಹುಲ್ ಗಾಂಧಿ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗುವ ಸಾಧ್ಯತೆ ಇದ್ದು, ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕ, ವಿಧಾನಪರಿಷತ್ ಸದಸ್ಯರ ನೇಮಕ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ. ಅವಕಾಶ ಸಿಕ್ಕರೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ಸಿದ್ದರಾಮಯ್ಯ ಆಲೋಚನೆ ನಡೆಸಿದ್ದಾರೆ. [ಡಿಕೆಶಿ, ರೋಷನ್ ಬೇಗ್ ಗೆ ಸಚಿವ ಸ್ಥಾನ?]

ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲು ಹಸಿರು ನಿಶಾನೆ ತೋರಿದೆ. ಆದರೆ, ಸಿಎಂ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಮತ್ತು ರೋಷನ್ ಬೇಗ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ವಿಳಂಬ ಮಾಡುತ್ತಿದ್ದಾರೆ. ಆದ್ದರಿಂದ ಸಿಎಂ ರಾಹುಲ್ ಗಾಂಧಿ ಮುಂದೆ ಕರ್ನಾಟಕದ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.

ಲೋಕಸಭೆ ಚುನಾವಣೆ ಮಗಿಯುವ ವರೆಗೆ ಸಂಪುಟ ವಿಸ್ತರಣೆ ಮಾಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿರುವ ಸಿಎಂ ಸಿದ್ದರಾಮಯ್ಯ, ತಮ್ಮ ನಿರ್ಧಾರಕ್ಕೆ ಕಾರಣವೇನೆಂದು ರಾಹುಲ್ ಗಾಂಧಿ ಅವರಿಗೆ ವಿವರಣೆ ನೀಡುವ ಸಾಧ್ಯತೆ ಇದೆ. ವಿಧಾನ ಪರಿಷತ್ ಸದಸ್ಯರ ನೇಮಕ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. [ಡಿಕೆಶಿ, ಬೇಗ್ ಮೇಲಿನ ಆರೋಪಗಳಿಗೆ ಸಿಬಲ್ ಕ್ಲೀನ್ ಚಿಟ್!]

ರಾಹುಲ್‌ ಭೇಟಿಯ ನಂತರ ಅವಕಾಶ ದೊರೆತರೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸಿಎಂ ಭೇಟಿಯಾಗುವ ಸಾಧ್ಯತೆಯಿದೆ. ಇದಲ್ಲದೆ, ಹೈಕಮಾಂಡ್‌ನ‌ ಇತರ ವರಿಷ್ಠರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ತಮ್ಮ ನಿಲುವನ್ನು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಿಎಂ ಸಿದ್ದರಾಮಯ್ಯ ದೆಹಲಿಯಿಂದ ಮರಳಿದ ಬಳಿಕ ಮೆಗಾ ಧಾರವಾಹಿಯಂತೆ ಸಾಗುತ್ತಿರುವ ಸಂಪುಟ ವಿಸ್ತರಣೆ, ಪರಿಷತ್ ಸದಸ್ಯರ ನೇಮಕ, ನಿಗಮ ಮಂಡಳಿಗ ಅಧ್ಯಕ್ಷ ಉಪಾಧ್ಯಕ್ಷರ ನೇಮಕ ಮುಂತಾದ ವಿಚಾರಗಳಿಗೆ ಅಂತಿಮ ತೆರೆ ಬೀಳುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+