ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ : ಜ.17ಕ್ಕೆ ಘೋಷಣೆ?

|
Google Oneindia Kannada News

ನವದೆಹಲಿ, ಡಿ. 16 : ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿರುವ ಕಾಂಗ್ರೆಸ್ ಸರ್ಕಾರ ಪ್ರಧಾನಿ ಅಭ್ಯರ್ಥಿಯನ್ನು ಘೋಷಣೆ ಮಾಡುವ ಮೂಲಕ ಅಧಿಕೃತವಾಗಿ ಲೋಕಸಭೆ ಚುನಾವಣೆ ಸಿದ್ಧತೆ ಆರಂಭಿಸಲು ಮುಂದಾಗಿದೆ. ಜ.17ರಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ತನ್ನ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವ ಸಾಧ್ಯತೆ ಇದೆ.

ನಾಲ್ಕುರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಂದ ಬಳಿಕ ಪ್ರಧಾನಿ ಅಭ್ಯರ್ಥಿಯನ್ನು ಶೀಘ್ರದಲ್ಲೇ ಘೋಷಿಸುವ ಸುಳಿವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೀಡಿದ್ದರು. ಸದ್ಯ ಈ ಕುರಿತು ಕಾಂಗ್ರೆಸ ದಿಟ್ಟ ಹೆಜ್ಜೆ ಇಟ್ಟಿದ್ದು, ಜ.17ರಂದು 2014ರ ಲೋಕಸಭೆ ಚುನಾವಣೆಗೆ ತನ್ನ ಪ್ರಧಾನಿ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಲಿದೆ ಎಂದು ತಿಳಿದು ಬಂದಿದೆ.

Rahul Gandhi

ಈಗಾಗಲೇ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ತಮ್ಮ ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಹೇಳಿಕೆ ನೀಡಿದ್ದಾರೆ. ಜ.17ರಂದು ಕಾಂಗ್ರೆಸ್ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅಂದು ಎಲ್ಲಾ ನಾಯಕರರೊಂದಿಗೆ ಚರ್ಚಿಸಿ ರಾಹುಲ್ ಗಾಂಧಿ ಅವರು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲು ಪಕ್ಷ ಸಿದ್ಧತೆ ನಡೆಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಎಪ್ರಿಲ್ ಅಥವ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆಗಳು ನಡೆಯುವ ಸಾಧ್ಯತೆ ಇದೆ. ಈಗಾಗಲೇ ಬಿಜೆಪು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದು, ಮೋದಿ ಈಗಾಗಲೇ ದೇಶಾದ್ಯಂತ ಪ್ರಚಾರ ಆರಂಭಿಸಿದ್ದಾರೆ. ಸದ್ಯ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವ ಮೂಲಕ ಬಿಜೆಪಿಗೆ ಪ್ರತಿಸ್ಪರ್ಧೆ ನೀಡಲು ಕಾಂಗ್ರೆಸ್ ಸಿದ್ಧವಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್, ಹಲವಾರು ಕೇಂದ್ರ ಸಚಿವರು ರಾಹುಲ್ ಗಾಂಧಿ ನಮ್ಮ ಮುಂದಿನ ಪ್ರಧಾನಿ ಅಭ್ಯರ್ಥಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸುತ್ತಿದ್ದರು. ಕೆಲವು ದಿನಗಳಹಿಂದೆ ನಂದನ್ ನಿಲೇಕಣಿ ಅವರು ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಆಗಬಹುದು ಎಂಬ ಸುದ್ದಿ ಹರಡಿತ್ತು. [ಪ್ರಧಾನಿ ಅಭ್ಯರ್ಥಿ: ತೇಲಿ ಬಂತೊಂದು ಅಚ್ಚರಿಯ ಹೆಸರು?]

English summary
Congress is expected to declare Rahul Gandhi, who is currently serving as its vice president, its prime ministerial candidate ahead of 2014 General Elections. According to sources, a formal announcement in this regard is likely to be made during the AICC meeting scheduled on January 17, 2014.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X