ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ಡೈರಿ ವಿರುದ್ಧ ಲೋಕಪಾಲ್ ತನಿಖೆ ಕಾಂಗ್ರೆಸ್ ಆಗ್ರಹ

|
Google Oneindia Kannada News

ನವದೆಹಲಿ, ಏ.16: ಬಿಜೆಪಿ ಹೈಕಮಾಂಡ್‌ಗೆ ಕಪ್ಪ ನೀಡಿದ್ದಾರೆ ಎನ್ನಲಾದ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಡೈರಿ ಕುರಿತು ಲೋಕಪಾಲ್ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?

2012ರಿಂದಲೂ ಈ ಡೈರಿಯು ಆದಾಯ ತೆರಿಯ ಇಲಾಖೆಯ ಕಬ್ಜದಲ್ಲಿದೆ ಆದರೆ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಯಾವುದೇ ತನಿಖೆ ನಡೆಸುತ್ತಿಲ್ಲ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಜೆಪಿ ಮುಖಂಡರಿಗೆ ಸಾವಿರಾರು ಕೋಟಿ ರೂ ಹಣವನ್ನು ಬಿಜೆಪಿ ಹೈಕಮಾಂಡ್‌ಗೆ ನೀಡಿದ್ದಾರೆ ಎಂದು ಡೈರಿಯಲ್ಲಿ ಉಲ್ಲೇಖವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಆರೋಪಿಸಿದ್ದಾರೆ.

ಯಡಿಯೂರಪ್ಪ ಕಪ್ಪದ ಡೈರಿ 'ನಕಲಿ': ಕಾಂಗ್ರೆಸ್ಸಿಗೆ ತೀವ್ರ ಮುಖಭಂಗಯಡಿಯೂರಪ್ಪ ಕಪ್ಪದ ಡೈರಿ 'ನಕಲಿ': ಕಾಂಗ್ರೆಸ್ಸಿಗೆ ತೀವ್ರ ಮುಖಭಂಗ

ಕಳೆದ ವಾರವೂ ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿ ನಡೆಸಿ ಈ ಡೈರಿ ಬಿಡುಗಡೆ ಮಾಡಿದ್ದರು. ಆದರೆ ಈ ಡೈರಿ ನಕಲಿ ಎಂದು ಯಡಿಯೂರಪ್ಪ ತಿರುಗೇಟು ನೀಡಿದ್ದರು. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಪ್ರಕಾರವೂ ಇದು ನಕಲಿ ಡೈರಿ ಎನ್ನುವುದು ಖಾತ್ರಿಯಾಗಿತ್ತು.

Congress demand lokpal enquiry for allege Yeddyurappa bribe dairy

ಆದಾಯ ತೆರಿಗೆ ಇಲಾಖೆ ಬಳಿ ಇಂತಹ ಯಾವುದೇ ಡೈರಿ ಇಲ್ಲ ಎಂದು ಅಧಿಕಾರಿಗಳು ಕೂಡ ಸ್ಪಷ್ಟನೆ ನೀಡಿದ್ದರು. ಇದೆಲ್ಲದರ ಹೊರತಾಗಿಯೂ ಕಾಂಗ್ರೆಸ್ ಡೈರಿ ರಾಜಕೀಯ ಮುಂದುವರೆಸಿದೆ.

English summary
Congress leader Kapil sibal demands lokpal enquiry of alleged BS Yeddyurappa bribe dairy This dairy was according to congress leaders this dairy with IT officers since 2012.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X