ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪಡಿಹಾರ ನೀಡಿ: ಕಾಂಗ್ರೆಸ್

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 23: ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಕುಟುಂಬದವರಿಗೆ ಕನಿಷ್ಠ 5 ಲಕ್ಷ ರೂ ಪರಿಹಾರ ನೀಡಿ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ಘೋಷಿಸಿದ 50 ಸಾವಿರ ರೂ. ಪರಿಹಾರ ಮೊತ್ತವು ಒಂದು ದೊಡ್ಡ ಜೋಕ್ ಆಗಿದ್ದು, ಮೃತರ ಸಂಬಂಧಿಕರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಗುರುವಾರ ಕಾಂಗ್ರೆಸ್ ಹೇಳಿದೆ.

ಕೋವಿಡ್ -19 ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸರ್ಕಾರವು ಬುಧವಾರ 50,000 ರೂಪಾಯಿ ಪರಿಹಾರ ನೀಡುವುದಾಗಿ ಹೇಳಿತ್ತು.

ಕೋವಿಡ್ ಸಂತ್ರಸ್ತ ಕುಟುಂಬಗಳಿಗೆ ರಾಜ್ಯದಿಂದ 50 ಸಾವಿರ ರೂ. ಪರಿಹಾರ:ಕೇಂದ್ರಕೋವಿಡ್ ಸಂತ್ರಸ್ತ ಕುಟುಂಬಗಳಿಗೆ ರಾಜ್ಯದಿಂದ 50 ಸಾವಿರ ರೂ. ಪರಿಹಾರ:ಕೇಂದ್ರ

ನ್ಯಾಯಾಲಯದ ಮಧ್ಯಸ್ಥಿಕೆಯ ನಂತರ ಸರ್ಕಾರ 50,000 ರೂಪಾಯಿ ಪರಿಹಾರ ಘೋಷಿಸಿದೆ ಎಂದು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್, ಕೇಂದ್ರ ಸರ್ಕಾರ ಕೊರೋನಾ ವೈರಸ್ ಸಾಂಕ್ರಾಮಿಕವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತಿಲ್ಲ. ಏಕೆಂದರೆ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿದರೆ ಕಾನೂನಿನ ಪ್ರಕಾರ ಕೋವಿಡ್ ನಿಂದ ಮೃತಪಟ್ಟವರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಲು ಅವಕಾಶವಿದೆ ಎಂದು ಶ್ರೀನೇತ ಹೇಳಿದ್ದಾರೆ.

Congress Demands Rs 5 Lakh To Kin Of Those Who Died Of Covid-19

"ಕಾಂಗ್ರೆಸ್ ಪಕ್ಷವು ಕೋವಿಡ್ -19 ನಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತದೆ. ಏಕೆಂದರೆ ಕೋವಿಡ್ ನಿಂದ ಹಲವು ಮಕ್ಕಳು ತಮ್ಮ ಹೆತ್ತವರನ್ನು ಕಳೆದುಕೊಂಡಿದ್ದಾರೆ ಮತ್ತು ಹಲವರು ನಿರುದ್ಯೋಗಿಗಳಾಗಿದ್ದಾರೆ. ಮೃತ ವ್ಯಕ್ತಿಗೆ ಕೇವಲ 50,000 ರೂ. ಪರಿಹಾರ ದೊಡ್ಡ ಜೋಕ್ ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸುಪ್ರಿಯಾ ಶ್ರೀನೇತ ಅವರು ಹೇಳಿದ್ದಾರೆ.

ಕೋವಿಡ್‌ನಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರವು 50 ಸಾವಿರ ಪರಿಹಾರ ನೀಡುತ್ತಿದೆ ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ.

ಸರ್ಕಾರವು ಹೇಳಿದಂತೆ ಪರಿಹಾರದ ಹೊಣೆ ರಾಜ್ಯ ಸರ್ಕಾರದ್ದಾಗಿರುತ್ತದೆ. ಈ ಹಣವನ್ನು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ ಒದಗಿಸಲಾಗುತ್ತದೆ. ಈ ಹಿಂದೆ ಕೋವಿಡ್‌ಗೆ ಬಲಿಯಾದವರಿಗೆ ಪರಿಹಾರ ನೀಡಲು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ 10 ದಿನಗಳ ಕಾಲಾವಕಾಶವನ್ನು ನೀಡಿತ್ತು.

ಇದಲ್ಲದೆ, ಮರಣಪ್ರಮಾಣಪತ್ರಗಳಿಗೆ ನಿಯಮಗಳನ್ನು ರೂಪಿಸುವಂತೆ ಸುಪ್ರೀಂಕೋರ್ಟ್ ಸರ್ಕಾರವನ್ನು ಕೇಳಿತ್ತು, ಸಾಂಕ್ರಾಮಿಕ ರೋಗದ ಆರಂಭದಿಂದಲೂ ಭಾರತದಲ್ಲಿ ಕೊರೊನಾಗೆ ಸಂಬಂಧಿಸಿದ 40 ಸಾವಿರಕ್ಕೂ ಹೆಚ್ಚು ಸಾವುಗಳು ಸಂಭವಿಸಿದೆ. ಸಾಂಕ್ರಾಮಿಕ ರೋಗದ ಎರಡನೇ ಅಲೆಯು ಮತ್ತಷ್ಟು ಭಯಂಕರವಾಗಿತ್ತು.

ಈ ಹಿಂದೆ, ಕೋವಿಡ್ ಮರಣ ಪ್ರಮಾಣಪತ್ರಗಳ ವಿತರಣೆಗೆ ಸಂಬಂಧಿಸಿದ ವಿಷಯಗಳಲ್ಲಿ ಮಾರ್ಗಸೂಚಿಗಳನ್ನು ಪ್ರಕಟಿಸುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ಕೊರೊನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 31,923 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 282 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಗುರುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 33563421ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,46,050ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,01,604ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 31,990 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,28,15,731ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 15,27,443 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 55,83,67,013 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

English summary
The Congress said that the amount of Rs 50,000 announced by the Centre as ex gratia to families of those who died of COVID-19 is a joke and Rs 5 lakh should be given to the kin, said party national spokesperson Supriya Shrinate on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X