ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

AICC president polls : ಎಐಸಿಸಿ ಅಧ್ಯಕ್ಷರ ಚುನಾವಣೆಗೆ ಅಧಿಸೂಚನೆ: ಅಗತ್ಯವಿದ್ದರೆ ಅ.17ಕ್ಕೆ ಮತದಾನ

|
Google Oneindia Kannada News

ನವದೆಹಲಿ, ಸೆ. 23: ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರವು ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಅಧ್ಯಕ್ಷರ ಚುನಾವಣೆಗೆ ಗುರುವಾರ ಅಧಿಸೂಚನೆಯನ್ನು ಹೊರಡಿಸಿದೆ. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.

ಹೊಡಿಸಿರುವ ಅಧಿಸೂಚನೆಯ ಪ್ರಕಾರ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸಂವಿಧಾನದ XVIII ನೇ ಪರಿಚ್ಛೇದದ ಮೂಲಕ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷರಾದ ಮಧುಸೂದನ್ ಮಿಸ್ತ್ರಿ ಅವರು ತಮ್ಮ ಅಧಿಕಾರದ ಅಡಿಯಲ್ಲಿ ಪಕ್ಷದ ಹುದ್ದೆಗೆ ಚುನಾವಣೆಯನ್ನು ಘೋಷಿಸಿದ್ದಾರೆ. ಅಧ್ಯಕ್ಷರು ನೀಡಿದ ವೇಳಾಪಟ್ಟಿಯಂತೆ ಚುನಾವಣೆ ನಡೆಯುತ್ತದೆ.

ಕಾಂಗ್ರೆಸ್ ಅಧ್ಯಕ್ಷರಾದರೆ ಅಶೋಕ್ ಗೆಹ್ಲೋಟ್ ಪಾಲಿಗಿಲ್ಲ ಸಿಎಂ ಕುರ್ಚಿ!ಕಾಂಗ್ರೆಸ್ ಅಧ್ಯಕ್ಷರಾದರೆ ಅಶೋಕ್ ಗೆಹ್ಲೋಟ್ ಪಾಲಿಗಿಲ್ಲ ಸಿಎಂ ಕುರ್ಚಿ!

ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರ ಹೇಳಿರುವಂತೆ ಸೆಪ್ಟೆಂಬರ್ 24 ರಿಂದ ಸೆಪ್ಟೆಂಬರ್ 30 ರವರೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ. ಅಕ್ಟೋಬರ್ 1 ರಂದು ನಾಮಪತ್ರದ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 8 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.

Congress Election Authority Issues Notification For AICC President Polls

ಇದಲ್ಲದೆ, ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಇದ್ದಲ್ಲಿ, ಚುನಾವಣೆಯು ನಿಗದಿತ ದಿನಾಂಕ ಅಕ್ಟೋಬರ್ 17 ರಂದು ನಡೆಯುತ್ತದೆ. ನಂತರ ಮತಗಳ ಎಣಿಕೆ ಮತ್ತು ಫಲಿತಾಂಶಗಳ ಘೋಷಣೆ ಅಕ್ಟೋಬರ್ 19 ರಂದು ನಡೆಯಲಿದೆ.

ನಾಮನಿರ್ದೇಶನ ನಮೂನೆಯು ನವದೆಹಲಿಯ 24 ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ಲಭ್ಯವಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯ ಬಗ್ಗೆ ಹೆಚ್ಚುತ್ತಿರುವ ಕುತೂಹಲದ ನಡುವೆ, ಸುಮಾರು ಹನ್ನೆರಡು ಪ್ರದೇಶ ಕಾಂಗ್ರೆಸ್ ಸಮಿತಿಗಳು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ಬೆಂಬಲಿಸುವ ನಿರ್ಧಾರಕ್ಕೆ ಬಂದಿವೆ.

Congress Election Authority Issues Notification For AICC President Polls

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ಸ್ಪಷ್ಟ ಸೂಚನೆ ನೀಡಿದರು. ಒಂದು ವೇಳೆ ರಾಹುಲ್ ಗಾಂಧಿಯವರು ಪಕ್ಷದ ಸಾರಥ್ಯವನ್ನು ವಹಿಸಿಕೊಳ್ಳಲು ಒಪ್ಪದಿದ್ದರೆ ಗೆಹ್ಲೋಟ್ ಅವರು ಕಣಕ್ಕೆ ಇಳಿಯಬಹುದು ಎಂಬುದು ಸ್ಪಷ್ಟವಾಗಿದೆ.

ಇತ್ತ, ಮಾಜಿ ಕೇಂದ್ರ ಸಚಿವ ಮತ್ತು ಕೇರಳ ಸಂಸದ ಶಶಿ ತರೂರ್ ಅವರು ಚುನಾವಣಾ ಕಣಕ್ಕೆ ಇಳಿಯಲು ಸಿದ್ಧರಿದ್ದಾರೆ ಮತ್ತು ಪಕ್ಷದ ಚುನಾವಣಾ ಸಮಿತಿ ಮುಖ್ಯಸ್ಥರನ್ನು ಭೇಟಿಯಾಗಿದ್ದಾರೆ.

ಕಾಂಗ್ರೆಸ್ ಎರಡು ದಶಕಗಳ ನಂತರ ಪಕ್ಷದ ಮುಖ್ಯಸ್ಥ ಸ್ಥಾನಕ್ಕೆ ಪೈಪೋಟಿಯನ್ನು ನೋಡಲು ಸಿದ್ಧವಾಗಿದೆ. 1998 ರಿಂದ ಚುಕ್ಕಾಣಿ ಹಿಡಿದಿರುವ ಸೋನಿಯಾ ಗಾಂಧಿ ಅವರ ಸ್ಥಾನಕ್ಕೆ ಹೊಸ ಅಧ್ಯಕ್ಷರು ಬರಲಿರುವ ಕಾರಣ ಮುಂಬರುವ ಅಧ್ಯಕ್ಷೀಯ ಚುನಾವಣೆಯು ಐತಿಹಾಸಿಕವಾಗಿರುತ್ತದೆ. ರಾಹುಲ್ ಗಾಂಧಿಯವರು 2017 ರಿಂದ 2019 ರವರೆಗೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

English summary
Congress central election authority issued a notification for the AICC (All India Congress Committee) president polls. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X