ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಕಾಂಗ್ರೆಸ್ 137ನೇ ಸಂಸ್ಥಾಪನಾ ದಿನವೇ ಕಳಚಿ ಬಿದ್ದ ಪಕ್ಷದ ಧ್ವಜ!

|
Google Oneindia Kannada News

ನವದೆಹಲಿ, ಡಿಸೆಂಬರ್ 28: ಕಾಂಗ್ರೆಸ್ ಪಕ್ಷದ ತ್ರಿವರ್ಣ ಧ್ವಜ ಅನಾವರಣಗೊಳಿಸುತ್ತಿರುವ ಸಂದರ್ಭದಲ್ಲಿ ಧ್ವಜಸ್ತಂಭವೇ ಕೆಳಗೆ ಬಿದ್ದಿರುವ ಘಟನೆ ಮಂಗಳವಾರ ನಡೆದಿದೆ. ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ 137ನೇ ಸಂಸ್ಥಾಪನಾ ದಿನದ ಅಂಗವಾಗಿ ಕಾಂಗ್ರೆಸ್ ತ್ರಿವರ್ಣ ಧ್ವಜ ಅನಾವರಣಗೊಳಿಸಲು ಮುಂದಾದ ಸಮಯದಲ್ಲಿ ಈ ಘಟನೆ ನಡೆದಿದೆ.

ಆದಾಗ್ಯೂ, ಸೋನಿಯಾ ಗಾಂಧಿಯವರು ಹಾಗೂ ಪಕ್ಷದ ಖಜಾಂಚಿ ಪವನ್ ಬನ್ಸಾಲ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ತಕ್ಷಣವೇ ಕೈಯಲ್ಲಿ ಪಕ್ಷದ ತ್ರಿವರ್ಣ ಧ್ವಜವನ್ನು ಹಿಡಿದರು. ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಧ್ವಜವನ್ನು ಕಂಬದಿಂದ ಕಟ್ಟಿದ ನಂತರದಲ್ಲಿ ಸೋನಿಯಾ ಗಾಂಧಿಯವರು ಧ್ವಜವನ್ನು ಹಾರಿಸಿದರು.

ಕಾಂಗ್ರೆಸ್ ಸಂಸ್ಥಾಪನಾ ದಿನ: 60 ವರ್ಷಗಳ ಸಾಧನೆಯ ಬಹುದೊಡ್ಡ ಪಟ್ಟಿಕಾಂಗ್ರೆಸ್ ಸಂಸ್ಥಾಪನಾ ದಿನ: 60 ವರ್ಷಗಳ ಸಾಧನೆಯ ಬಹುದೊಡ್ಡ ಪಟ್ಟಿ

ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕೇಂದ್ರ ಕಚೇರಿಯಲ್ಲಿ ಹಿರಿಯ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಎ ಕೆ ಆಂಟನಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

Congress flag falls from Post as Sonia Gandhi tries to unfurl it on party Foundation Day

ಸೋನಿಯಾ ಗಾಂಧಿ ಅಸಮಾಧಾನ:

ಕಾಂಗ್ರೆಸ್ ಪಕ್ಷದ 137ನೇ ಸಂಸ್ಥಾಪನಾ ದಿನದಂದೇ ನಡೆದ ಘಟನೆ ಬಗ್ಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸಮಾಧಾನಗೊಂಡರು ಎಂದು ಪಕ್ಷದ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ. ಏಕೆಂದರೆ ಎರಡನೇ ಬಾರಿ ಧ್ವಜವನ್ನು ಬಿಚ್ಚಲು ತೆರಳಿದ ಸಂದರ್ಭದಲ್ಲಿ ಅದು ಅಲ್ಲಿಯೇ ಗಂಟು ಹಾಕಿಕೊಂಡಿತ್ತು ಎಂದು ಗೊತ್ತಾಗಿದೆ.

ಮಂಗಳವಾರ ನಡೆದ ಘಟನೆಗೆ ಬೇಸರ ವ್ಯಕ್ತಪಡಿಸಿರುವ ಸೋನಿಯಾ ಗಾಂಧಿಯವರು ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕ್ರಮಗಳು, ಸಭೆ ಮತ್ತು ಸಮಾರಂಭಗಳನ್ನು ಆಯೋಜಿಸುವ ವೇಳೆಯಲ್ಲಿ ಹೆಚ್ಚು ಜಾಗರೂಕರಾಗಿ ಇರುವಂತೆ ಸೂಚನೆ ನೀಡಿದ್ದಾರೆ ಎಂದು ಹಿರಿಯ ನಾಯಕರೊಬ್ಬರು ಹೇಳಿಕೊಂಡಿದ್ದಾರೆ.

English summary
The flag of the Congress party fell off while Sonia Gandhi was hoisting it on the party's 137th foundation day. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X