Breaking: ಶುಕ್ರವಾರ ಪ್ರಧಾನಿ ಮನೆಗೆ ಮುತ್ತಿಗೆ ಹಾಕಲಿರುವ ಕಾಂಗ್ರೆಸ್

ನವದೆಹಲಿ, ಆ.05: ಬೆಲೆ ಏರಿಕೆ, ನಿರುದ್ಯೋಗ ಮತ್ತು ಜಿಎಸ್‌ಟಿ ಏರಿಕೆ ವಿರೋಧಿಸಿ ಕಾಂಗ್ರೆಸ್ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರು ಮತ್ತು ಹಿರಿಯ ನಾಯಕರು ಪ್ರಧಾನಿ ಮನೆಗೆ ಮುತ್ತಿಗೆ (ಪಿಎಂ ಹೌಸ್ ಘೇರಾವ್) ಹಾಕಲಿದ್ದು, ಲೋಕಸಭೆ ಮತ್ತು ರಾಜ್ಯಸಭಾ ಸಂಸದರು ಸಂಸತ್ತಿನಿಂದ "ಚಲೋ ರಾಷ್ಟ್ರಪತಿ ಭವನ" ನಡೆಸಲಿದ್ದಾರೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ಕಾಂಗ್ರೆಸ್ ಮೆರವಣಿಗೆ ಆಯೋಜಿಸಿರುವ ಹಿನ್ನೆಲೆಯಲ್ಲಿ ದೆಹಲಿಯ ಕೆಲವು ಭಾಗಗಳಲ್ಲಿ ಬೃಹತ್ ಸಭೆಗಳನ್ನು ನಿಷೇಧಿಸಿ ಆಡಳಿತವು ನಿಷೇಧಾಜ್ಞೆಗಳನ್ನು ವಿಧಿಸಿದೆ. ನಿರ್ಬಂಧಗಳನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ಗೆ ಅನುಮತಿ ನಿರಾಕರಿಸಿದ್ದಾರೆ.

Congress hold PM House gherao protests Friday over rising prices

ಮೆರವಣಿಗೆಗೂ ಮುನ್ನ ಕಾಂಗ್ರೆಸ್ ನಾಯಕರು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಜಮಾಯಿಸಿದ್ದಾರೆ. ಶುಕ್ರವಾರದಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು, ಇದರ ರೂಪುರೇಷೆಗಳ ಕುರಿತು ಚರ್ಚಿಸಲು ಕಾಂಗ್ರೆಸ್ ಉನ್ನತ ನಾಯಕರು ಮಂಗಳವಾರ ಸಭೆ ನಡೆಸಿದ್ದರು.

ಬೆಲೆ ಏರಿಕೆ ಮತ್ತು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಹೆಚ್ಚಳದ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುತ್ತಿದೆ. ಈ ವಿಷಯಗಳ ಕುರಿತು ಕಾಂಗ್ರೆಸ್ ಸಂಸದರು ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ ಸಮಯದಲ್ಲಿಯೂ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿದೆ.

Congress hold PM House gherao protests Friday over rising prices

ಇಂದಿನ ಪ್ರತಿಭಟನೆಯಿಂದಾಗಿ ದೆಹಲಿಯ ಕೆಲವು ಭಾಗಗಳಲ್ಲಿ ಟ್ರಾಫಿಕ್ ಮೇಲೆ ಪರಿಣಾಮ ಬೀರಲಿದೆ ಎಂದು ದೆಹಲಿ ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.

ಸಂಚಾರ ನಿಯಂತ್ರಣಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ ಜಾಮ್ ಆಗುವ ನಿರೀಕ್ಷಿತ ಸ್ಥಳಗಳಿಗೆ ಅನುಗುಣವಾಗಿ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗುವುದು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

Recommended Video

      Taiwan ಕಡಲ ತೀರದಲ್ಲಿ ಸಮರಾಭ್ಯಾಸ ಶುರು ಮಾಡಿರೋ ಚೀನಾ! | *World | OneIndia Kannda

      ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಭಾರತ ಪ್ರಜಾಪ್ರಭುತ್ವದ ಸಾವಿಗೆ ಸಾಕ್ಷಿಯಾಗುತ್ತಿದೆ ಎಂದು ಆರೋಪಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+