ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿರಿಯ ಕಾಂಗ್ರೆಸ್ ಮುಖಂಡ ಬೂಟಾ ಸಿಂಗ್ ನಿಧನ

|
Google Oneindia Kannada News

ನವದೆಹಲಿ, ಜನವರಿ 02: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರ ಮಾಜಿ ಗೃಹ ಸಚಿವ ಬೂಟಾ ಸಿಂಗ್ (86) ಅವರು ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. ದೆಹಲಿಯ ಏಮ್ಸ್ ನಲ್ಲಿ ಸಾವನ್ನಪ್ಪಿದ್ದು, ಅಕ್ಟೋಬರ್ ತಿಂಗಳಿನಿಂದಲೂ ಬ್ರೇನ್ ಹ್ಯಾಮರೇಜ್ ನಿಂದ ಕೋಮಾ ಸ್ಥಿತಿಯಲ್ಲಿದ್ದರು ಎಂದು ತಿಳಿದುಬಂದಿದೆ.

1934ರಲ್ಲಿ ಪಂಜಾಬ್ ನ ಜಲಂಧರ್ ನಲ್ಲಿ ಜನಿಸಿದ ಬೂಟಾ ಸಿಂಗ್, ಜವಹರಲಾಲ್ ನಾಯಕತ್ವದಲ್ಲಿ ಕಾಂಗ್ರೆಸ್ ಸೇರಿದ್ದರು. ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಇಬ್ಬರಿಗೂ ಆಪ್ತರಾಗಿದ್ದರು.

ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ನೀಡಿದ ನವಜೋತ್ ಸಿಂಗ್ ಸಿದ್ದು, ವ್ಯಾಪಕ ಆಕ್ರೋಶ ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ನೀಡಿದ ನವಜೋತ್ ಸಿಂಗ್ ಸಿದ್ದು, ವ್ಯಾಪಕ ಆಕ್ರೋಶ

ಕಾಂಗ್ರೆಸ್ ನ ಪ್ರಮುಖ ದಲಿತ ನಾಯಕರಲ್ಲಿ ಒಬ್ಬರಾಗಿದ್ದ ಬೂಟಾ ಸಿಂಗ್, ಕಾಂಗ್ರೆಸ್ ಸೇರುವ ಮೊದಲು ಶಿರೋಮಣಿ ಅಖಾಲಿ ದಳದ ಸದಸ್ಯರಾಗಿದ್ದರು. ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಹಾಗೂ ಪಿ.ವಿ.ನರಸಿಂಹರಾವ್ ಅವರ ಆಡಳಿತ ಅವಧಿಯಲ್ಲಿ ಸಚಿವರಾಗಿದ್ದರು. 2004ರಿಂದ 2006ರವರೆಗೆ ಬಿಹಾರದ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

Congress Leader And Ex Union Minister Buta Singh Passes Away

ಬೂಟಾ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜ್ಯಪಾಲ ರಾಮನಾಥ್ ಕೋವಿಂದ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್: "ಅನುಭವಿ ಆಡಳಿತಗಾರರಾಗಿದ್ದ ಬೂಟಾ ಸಿಂಗ್ ಅವರು ಬಡವರಿಗೆ ದನಿಯಾಗಿದ್ದರು. ಅವರ ಸಾವಿನಿಂದ ನನಗೆ ದುಃಖವಾಗಿದೆ" ಎಂದು ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

English summary
Senior Congress leader and former Union minister Buta Singh (86) dies at AIIMS-Delhi early on Saturday morning,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X