ಕಾಂಗ್ರೆಸ್ ಮುಖಂಡ ಶಶಿ ತರೂರಗೆ ಪ್ರತಿಷ್ಠಿತ ಪ್ರಶಸ್ತಿ

ನವದೆಹಲಿ, ಡಿಸೆಂಬರ್ 18: ಕಾಂಗ್ರೆಸ್ ಮುಖಂಡ, ಕೇರಳದ ತಿರುವನಂತಪುರದ ಸಂಸದ ಶಶಿ ತರೂರ್ ಅವರು 2019 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅವರು 2016 ರಲ್ಲಿ ಪ್ರಕಟಿಸಿದ್ದ An Era of Darkness: The British Empire in India ಪುಸ್ತಕಕ್ಕೆ ಪ್ರಶಸ್ತಿ ದೊರಕಿದ್ದು, ಇಂಗ್ಲೀಷ್ ಭಾಷೆಯ ನಾನ್ ಪಿಕ್ಸನ್ ವಿಭಾಗದಲ್ಲಿ ತರೂರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಹಿತ್ಯ ಅಕಾಡೆಮಿಯು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದೆ. ಇವರ ಜೊತೆ ದೇಶದ 21 ಭಾಷೆಯ 23 ಲೇಖಕರು, ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Congress Leader And MP Shashi Tharoor Selected For Sahitya Academy Prize

ನಾನ್ ಪಿಕ್ಸನ್ ವಿಭಾಗದಲ್ಲಿ ಕನ್ನಡಕ್ಕೆ ಲೇಖಕಿ ವಿಜಯಮ್ಮ ಅವರಿಗೆ 2019 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ. ಪ್ರಶಸ್ತಿಯೂ 1 ಲಕ್ಷ ರುಪಾಯಿ ನಗದು ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ. ಫೆಬ್ರುವರಿ 25, 2020 ರಂದು ನವದೆಹಲಿಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಸದ್ಯ ಕನ್ನಡಿಗ, ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+