ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಮುಖಂಡ ಜನಾರ್ದನ್ ಪುತ್ರ ಬಿಜೆಪಿ ಸೇರ್ಪಡೆ

|
Google Oneindia Kannada News

ನವದೆಹಲಿ, ಫೆಬ್ರವರಿ 05: ದೆಹಲಿ ವಿಧಾನಸಭೆ ಚುನಾವಣೆ 2020ರಲ್ಲಿ ಆಮ್ ಆದ್ಮಿ ಪಕ್ಷದ ಮೈತ್ರಿ ಕಳಚಿಕೊಂಡು ಏಕಾಂಗಿಯಾಗಿ ಕಾಂಗ್ರೆಸ್ ಸ್ಪರ್ಧಿಸುತ್ತಿದೆ. ಈ ನಡುವೆ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ್ ದ್ವಿವೇದಿ ಅವರ ಪುತ್ರ ಸಮೀರ್ ದ್ವಿವೇದಿ ಅವರು ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸಮ್ಮುಖದಲ್ಲಿ ಸಮೀರ್ ದ್ವಿವೇದಿ ಅವರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕರ್ನಾಟಕದ ಇಂದಿರಾ ಕ್ಯಾಂಟೀನ್ ಸದ್ದುಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕರ್ನಾಟಕದ ಇಂದಿರಾ ಕ್ಯಾಂಟೀನ್ ಸದ್ದು

ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಜನಾರ್ದನ್ ದ್ವಿವೇದಿ ದಶಕಗಳಿಂದ ಕಾರ್ಯ ನಿರ್ವಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಗತಿ ಪರ ಅಭಿವೃದ್ಧಿ ಕಾರ್ಯಗಳನ್ನು ಕಂಡು ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದು ಸಮೀರ್ ಹೇಳಿದ್ದಾರೆ.

Congress leader Janardan Dwivedis son Samir joins BJP

ಆರೆಸ್ಸೆಸ್ ಮುಖಂಡ ಮೋಹನ್ ಭಾಗ್ವರ್ ಅವರ ಜೊತೆ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಜನಾರ್ದನ ದ್ವಿವೇದಿ ಅವರು ಈ ಹಿಂದೆ ಕಾಣಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಗ್ಯಾಲರಿ: ದೆಹಲಿಯಲ್ಲಿ ಚುನಾವಣ ಪ್ರಚಾರದ ಭರಾಟೆ ಜೋರು

2015ರಲ್ಲಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳನ್ನು ಆಮ್ ಆದ್ಮಿ ಪಕ್ಷ ಗೆದ್ದುಕೊಂಡಿತ್ತು. ಬಿಜೆಪಿ ಮೂರು ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಆದರೆ 2017ರಲ್ಲಿ ಮುನ್ಸಿಪಾಲ್ ಕಾರ್ಪೊರೇಷನ್ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಲಯಕ್ಕೆ ಮರಳಿದೆ.

ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಮುರಿದಿರುವುದರಿಂದ ಮತದಾರರನ್ನು ಸೆಳೆಯುವುದು ಬಿಜೆಪಿಗೆ ಸುಲಭವಾಗಲಿದೆ.70 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 8ರಂದು ಮತದಾನ ನಡೆಯಲಿದ್ದು, ಫೆಬ್ರವರಿ 11ರಂದು ಫಲಿತಾಂಶ ಹೊರಬರಲಿದೆ.

English summary
Senior Congress leader Janardan Dwivedi's son Samir Dwivedi on Tuesday joined the BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X