'ದೇಶವನ್ನು ದಾರಿ ತಪ್ಪಿಸಿದ್ದೇ ಮೋದಿ ಸರ್ಕಾರದ ಆರು ವರ್ಷದ ಸಾಧನೆ'
ನವದೆಹಲಿ, ಡಿಸೆಂಬರ್ 14; ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಭಾರತ ಬಚಾವೋ ಪ್ರತಿಭಟನಾ ರಾಲಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ಮುಖಂಡ ಮನಮೋಹನ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಆರು ವರ್ಷದಲ್ಲಿ ಭಾರತದ ದಾರಿ ತಪ್ಪಸಿದ್ದಾರೆ ಎಂದು ಆರೋಪಿಸಿದ್ದಾರೆ.
ಭಾರತ್ ಬಚಾವೋ ಕಹಳೆ ಮೊಳಗಿಸಿದ ಕಾಂಗ್ರೆಸ್
ಮೋದಿ ಅವರ ಮೇಲೆ ಈ ದೇಶ 2014 ರ ಮೊದಲು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿತ್ತು. ಆದರೆ ಅವರು ಈ ದೇಶದ ರೈತರ, ಯುವಕರ ಕನಸುಗಳನ್ನು ದಾರಿ ತಪ್ಪಿಸಿದ್ದಾರೆ. ನಮಗಂತೂ ತೀರಾ ನಿರಾಸೆಯಾಗಿದೆ. ರೈತರ ಅದಾಯ ಹೆಚ್ಚಾಗಿಲ್ಲ, ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ, ದೇಶದ ಆರ್ಥಿಕ ವೃದ್ಧಿ ದರ ಕುಸಿದಿದೆ. ಇವು ಆರು ವರ್ಷದಲ್ಲಿ ಬಿಜೆಪಿ ಸರ್ಕಾರ ದೇಶಕ್ಕೆ ಕೊಟ್ಟ ಕೊಡುಗೆ. ಈ ಸಮಸ್ಯೆಗೆ ಕೇಂದ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ಪ್ರತಿಷ್ಠಾಪಿಸುವುದೇ ಪರಿಹಾರ ಎಂದು ಕೇಂದ್ರ ಸರ್ಕಾರ ಮೇಲೆ ಚಾಟಿ ಬೀಸಿದರು.
ಕುಂಠಿತಗೊಂಡಿರುವ ಆರ್ಥಿಕ ಅಭಿವೃದ್ಧಿ ಖಂಡಿಸಿ ಹಾಗೂ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಭಾರತ್ ಬಚಾವೋ ಎಂದು ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು. ಪ್ರತಿಭಟನೆಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. ವೇದಿಕೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ ಸಿಂಗ್, ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪಿ.ಚಿದಂಬರಂ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.