Get Updates
Get notified of breaking news, exclusive insights, and must-see stories!

Video: ದೆಹಲಿಯ ನಡುರಸ್ತೆಯಲ್ಲೇ ಪ್ರತಿಭಟನೆ ಕುಳಿತ ರಾಹುಲ್ ಗಾಂಧಿ ಖಾಕಿ ವಶಕ್ಕೆ

ನವದೆಹಲಿ, ಜುಲೈ 26: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನವದೆಹಲಿ ಹೃದಯ ಭಾಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ಸಂಸದರು ವಿಜಯ್ ಚೌಕ್‌ನಲ್ಲಿ ಜಮಾಯಿಸಿ ರಾಷ್ಟ್ರಪತಿ ಭವನದತ್ತ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು.

ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ವಿರುದ್ಧ ಸರ್ಕಾರದ ಏಜೆನ್ಸಿಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು. ನಡುರಸ್ತೆಯಲ್ಲೇ ಪ್ರತಿಭಟನೆ ಕುಳಿತ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ಹಂತದಲ್ಲಿ ಬಿಗ್ ಹೈಡ್ರಾಮಾ ನಡೆಯಿತು.

ಪೊಲೀಸ್ ವಾಹನದಲ್ಲಿ ಪ್ರತಿಭಟನಾಕಾರರ ಸ್ಥಳಾಂತರ

ನವದೆಹಲಿಯ ವಿಜಯ್ ಚೌಕ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಲಾಯಿತು. ಆದರೆ ಅವರನ್ನು ಎಲ್ಲಿಗೆ ಕರೆದೊಯ್ಯಲಾಯಿತು ಎಂಬುದರ ಬಗ್ಗೆ ಮಾಹಿತಿಯಿಲ್ಲ. ಇದರ ಜೊತೆಗೆ ಪ್ರತಿಭಟನೆ ನಡೆಸುತ್ತಿದ್ದ ಇತರೆ ಕಾಂಗ್ರೆಸ್ ಸಂಸದರನ್ನೂ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪ್ರತ್ಯೇಕ ಪೊಲೀಸ್ ವಾಹನದಲ್ಲಿ ಕರೆದೊಯ್ಯಲಾಗಿದೆ.

ಪೊಲೀಸ್ ರಾಜ್ಯ ಎಂದು ಆರೋಪಿಸಿದ ರಾಹುಲ್ ಗಾಂಧಿ

ಪೊಲೀಸ್ ರಾಜ್ಯ ಎಂದು ಆರೋಪಿಸಿದ ರಾಹುಲ್ ಗಾಂಧಿ

ಭಾರತವು ಪೊಲೀಸ್ ರಾಜ್ಯವಾಗುತ್ತಿದ್ದು, ಮೋದಿ ಒಬ್ಬ ರಾಜ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ. "ನಾನು ಎಲ್ಲಿಗೂ ಹೋಗುತ್ತಿಲ್ಲ. ನಾವು ರಾಷ್ಟ್ರಪತಿ ಭವನದ ಕಡೆಗೆ ಹೋಗಬೇಕೆಂದು ಬಯಸಿದ್ದೆವು. ಆದರೆ ಪೊಲೀಸರು ನಮಗೆ ಅವಕಾಶ ನೀಡುತ್ತಿಲ್ಲ" ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಪ್ರತಿಭಟನೆಗೆ ಕಾರಣ

ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಪ್ರತಿಭಟನೆಗೆ ಕಾರಣ

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಎರಡನೇ ಬಾರಿಗೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ಹಾಜರಾಗಿದ್ದರು. ಇನ್ನೊಂದು ಕಡೆ ಪಕ್ಷದ ಮುಖ್ಯಸ್ಥೆಯನ್ನು ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಸಂಸದರು, ಶಾಸಕರು ಮತ್ತು ನಾಯಕರು ಪ್ರತಿಭಟನೆ ನಡೆಸುವುದಕ್ಕೆ ಶುರು ಮಾಡಿದ್ದರು.

ಸೋನಿಯಾ ಗಾಂಧಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಕೇಸ್?

ಸೋನಿಯಾ ಗಾಂಧಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಕೇಸ್?

ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಆದಾಯ ತೆರಿಗೆ ಇಲಾಖೆಯ ತನಿಖೆಯನ್ನು ವಿಚಾರಣಾ ನ್ಯಾಯಾಲಯವು ಗಮನಕ್ಕೆ ತಂದ ನಂತರ ಇತ್ತೀಚೆಗೆ ಏಜೆನ್ಸಿ ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಿದೆ. ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ -- ಪತ್ರಿಕೆಯನ್ನು ನಡೆಸುತ್ತಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ ಸ್ವಾಧೀನದಲ್ಲಿ ವಂಚನೆ, ಪಿತೂರಿ ಮತ್ತು ಕ್ರಿಮಿನಲ್ ನಂಬಿಕೆಯ ಉಲ್ಲಂಘನೆಯ ಆರೋಪಗಳನ್ನು ಈ ಪ್ರಕರಣವು ಒಳಗೊಂಡಿದೆ. ಜಾರಿ ನಿರ್ದೇಶನಾಲಯದ ವಿಚಾರಣೆ ಆಡಳಿತಾರೂಢ ಬಿಜೆಪಿಯ ಸೇಡಿನ ರಾಜಕಾರಣದ ಭಾಗ ಎಂದು ಕಾಂಗ್ರೆಸ್ ಕೆಂಡ ಕಾರಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅವ್ಯವಹಾರದ ಆರೋಪ:

ದೇಶದಲ್ಲಿ ತದನಂತರ ಪ್ರಕಟಗೊಂಡ ಇತರ ಪತ್ರಿಕೆಗಳಿಗೆ ಪೈಪೋಟಿ ನೀಡುವುದುಕ್ಕೆ ಸಾಧ್ಯವಾಗದೇ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗದೇ ತೀವ್ರ ವೈಫಲ್ಯವನ್ನು ಅನುಭವಿಸಿತು. ಇದರ ಪರಿಣಾಮವಾಗಿ ಜಾಹೀರಾತು ಆದಾಯದ ಕೊರತೆ ಸೃಷ್ಟಿಯಾಯಿತು. ಕಳೆದ 2008ರಲ್ಲಿ ಮೂರೂ ಆವೃತ್ತಿಯ ಪ್ರಕಟಣೆ ಸ್ಥಗಿತಗೊಳಿಸುತ್ತಿರುವುದಾಗಿ ಪತ್ರಿಕೆ ಘೋಷಿಸಿತು. 29.09.2010ರ ವೇಳೆಗೆ ಷೇರು ಹೋಲ್ಡರುಗಳ ಸಂಖ್ಯೆ 1057ಕ್ಕೆ ಇಳಿದಿತ್ತು. ಆ ಸಮಯದಲ್ಲಿ ಸಂಸ್ಥೆಯು 90.25 ಕೋಟಿ ರೂಪಾಯಿ ಸಾಲವನ್ನು ಹೊಂದಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+