ಕೊರೊನಾದಿಂದ ತತ್ತರಿಸುತ್ತಿರುವಾಗ ಅದಾನಿ ಸಂಪತ್ತು ಹೆಚ್ಚಾಗಿದ್ದು ಹೇಗೆ?; ರಾಹುಲ್ ಗಾಂಧಿ
ನವದೆಹಲಿ, ಮಾರ್ಚ್ 13: ಕೊರೊನಾ ಸೋಂಕಿನಿಂದ ಇಡೀ ದೇಶವೇ ತತ್ತರಿಸುತ್ತಿದ್ದು, ಆರ್ಥಿಕ ಸ್ಥಿತಿಯೇ ತಲೆ ಕೆಳಗಾಗಿರುವಾಗ ಉದ್ಯಮಿ ಗೌತಮ್ ಅದಾನಿ ಅವರ ಸಂಪತ್ತು ಹೇಗೆ ಈ ವರ್ಷ ಇಷ್ಟು ಏರಿಕೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಅದಾನಿ ಆಸ್ತಿ ಮೌಲ್ಯದ ವರದಿ ಉಲ್ಲೇಖಿಸಿ ಶನಿವಾರ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 2020ರಲ್ಲಿ ನಿಮ್ಮ ಸಂಪತ್ತು ಎಷ್ಟು ಹೆಚ್ಚಾಗಿದೆ? ಶೂನ್ಯ. ನೀವೆಲ್ಲಾ ಕೊರೊನಾದಿಂದ ತತ್ತರಿಸಿ ಜೀವನ ನಡೆಸಲು ಕಷ್ಟಪಡುತ್ತಿರುವಾಗ, ಅದಾನಿ ಅವರು ತಮ್ಮ ಸಂಪತ್ತನ್ನು ಶೇ.50ರಷ್ಟು ಹೆಚ್ಚಿಸಿಕೊಂಡಿದ್ದಾರೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಅದಾನಿ ಅವರು 2021ರಲ್ಲಿ 12 ಲಕ್ಷ ಕೋಟಿ ರೂಪಾಯಿ ಗಳಿಸಿ ಇಡೀ ವಿಶ್ವದಲ್ಲೇ ಸಂಪತ್ತು ಗಳಿಕೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಇದರೊಂದಿಗೆ ಒಟ್ಟು ನಿವ್ವಳ ಆಸ್ತಿ ಮೌಲ್ಯ 50 ಬಿಲಿಯನ್ ಅಮೆರಿಕನ್ ಡಾಲರ್ ಮುಟ್ಟಿದೆ. ಇದೆಲ್ಲಾ ಸಾಧ್ಯವಾಗಿದ್ದು ಹೇಗೆ ಎಂದು ಕೇಳಿದ್ದಾರೆ.

ಮೊದಲ ಪೀಳಿಗೆಯ ಉದ್ಯಮಿಯಾಗಿರುವ ಅದಾನಿ ಅವರ ನಿವ್ವಳ ಸಂಪತ್ತಿನ ಮೌಲ್ಯ 2021ರಲ್ಲಿ 16.2 ಬಿಲಿಯನ್ ಡಾಲರ್‌ನಿಂದ 50 ಬಿಲಿಯನ್ ಡಾಲರ್‌ಗೆ ಏರಿಕೆಯಾಗಿದೆ ಎಂದು ಬ್ಲೂಮ್‌ಬರ್ಗ್ ಬಿಲಿಯನೇರ್ ಇಂಡೆಕ್ಸ್ ತಿಳಿಸಿತ್ತು. ಈ ಮೂಲಕ ಅವರನ್ನು ಈ ವರ್ಷ ಜಗತ್ತಿನಲ್ಲಿ ಈವರೆಗೆ ಅತಿ ಹೆಚ್ಚು ಸಂಪತ್ತು ಸಂಪಾದಿಸಿದ ವ್ಯಕ್ತಿ ಎಂದು ಪ್ರಕಟಿಸಲಾಗಿತ್ತು. ಸಂಪತ್ತು ಗಳಿಕೆಯಲ್ಲಿ ವಿಶ್ವದಲ್ಲಿಯೇ ಅದಾನಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅಮೆಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಹಾಗೂ ಟೆಸ್ಲಾ ಸಿಇಒ ಎಲನ್ ಮಸ್ಕ್ ಅವರನ್ನೂ ಅದಾನಿ ಹಿಂದಿಕ್ಕಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications