Breaking: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೊರೊನಾ ಸೋಂಕು
ನವದೆಹಲಿ, ಏಪ್ರಿಲ್ 20: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೊರೊನಾ ಸೋಂಕು ತಗುಲಿದೆ.
ಈ ಕುರಿತು ಖುದ್ದಾಗಿ ಅವರು ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 'ನನಗೆ ಸಣ್ಣ ಪ್ರಮಾಣದ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದವು. ಪರೀಕ್ಷೆ ಮಾಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ.

ನನ್ನ ಸಂಪರ್ಕಕ್ಕೆ ಬಂದವರು ಪ್ರತಿಯೊಬ್ಬರೂ ಕೊರೊನಾ ಪರೀಕ್ಷೆ ಮಾಡಿಸಿ, ಕೊರೊನಾ ನಿಯಮಗಳನ್ನು ಪಾಲಿಸಿ ಎಂದು ಮನವಿ ಮಾಡಿದ್ದಾರೆ.
ಇತ್ತೀಚೆಗೆಷ್ಟೇ ಚುನಾವಣಾ ಆಯೋಗವು 5 ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಿಸಿತ್ತು. ಅದರಂತೆ ರಾಹುಲ್ ಗಾಂಧಿ ಕೇರಳ, ಅಸ್ಸಾಂ, ಪುದುಚೇರಿ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳದಲ್ಲಿ ಸಾಲು ಸಾಲು ಚುನಾವಣಾ ಪ್ರಚಾರವನ್ನು ನಡೆಸಿದ್ದರು.
After experiencing mild symptoms, I’ve just tested positive for COVID.
— Rahul Gandhi (@RahulGandhi) April 20, 2021
All those who’ve been in contact with me recently, please follow all safety protocols and stay safe.
ಕಳೆದ ಒಂದು ತಿಂಗಳಿಂದ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.
ಕಳೆದ 24 ಗಂಟೆಗಳಲ್ಲಿ 259170 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ದೇಶದಲ್ಲಿ ಒಂದೇ ದಿನ 1,761 ಮಂದಿ ಪ್ರಾಣ ಬಿಟ್ಟಿದ್ದು, 1,54,761 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ರಾಹುಲ್ ಗಾಂಧಿ ಭಾವ ರಾಬರ್ಟ್ ವಾದ್ರಾಗೂ ಇತ್ತೀಚೆಗೆ ಕೊರೊನಾ ಸೋಂಕು ತಗುಲಿತ್ತು, ಇನ್ನು ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾಗೂ ಇತ್ತೀಚೆಗಷ್ಟೇ ಕೊರೊನಾ ಸೋಂಕು ತಗುಲಿತ್ತು. ಇನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕೂಡ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಪಡೆಯುತ್ತಿದ್ದಾರೆ, ಆರೋಗ್ಯ ಸ್ಥಿರವಾಗಿದೆ.












Click it and Unblock the Notifications